PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ
ಮುಖಪುಟಮೈಸೂರು ನಗರ

ಮೈಸೂರು ಚಾಮುಂಡಿಬೆಟ್ಟದಲ್ಲಿ ನಾಳೆ ಮೊದಲ ಆಷಾಢ ಶುಕ್ರವಾರದ ಸಡಗರ: ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಪೂರ್ಣ

Prathinidhi News
Last updated: July 16, 2026 3:21 pm
Prathinidhi News
Published July 16, 2026
Share
SHARE

ಮೈಸೂರು, ಜುಲೈ 16, 2026 : ನಾಳೆ ಆಷಾಢ ಮಾಸದ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ದೇಗುಲದ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ನಾಳೆ ದೇಗುಲಕ್ಕೆ ಹರಿದುಬರುವ ಲಕ್ಷಾಂತರ ಭಕ್ತಾದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಈ ಬಾರಿ ಕೇವಲ ಧರ್ಮದರ್ಶನ ಮತ್ತು ಎರಡು ಸಾವಿರ ರೂಪಾಯಿಗಳ ವಿಶೇಷ ಟಿಕೆಟ್ ಮೂಲಕ ಮಾತ್ರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಭಕ್ತರ ಸುಗಮ ಸಂಚಾರಕ್ಕಾಗಿ ಖಾಸಗಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಶಶಿರಂಜನ್ ಮೈದಾನದಿಂದ ಉಚಿತ ಸರ್ಕಾರಿ ಬಸ್ಸುಗಳ ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಖಾಸಗಿ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.

ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗಾಗಿ ತಾತ್ಕಾಲಿಕ ಶೌಚಾಲಯ, ಕುಡಿಯುವ ನೀರು, ಕುಂಕುಮ ಪ್ರಸಾದ ಹಾಗೂ ಅನ್ನ ದಾಸೋಹದ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬೆಟ್ಟದ ಮೆಟ್ಟಿಲುಗಳ ಮೂಲಕ ನಡೆದು ಬರುವ ಭಕ್ತಾದಿಗಳಿಗೆ ಶಕ್ತಿ ನೀಡಲು ಹಾಲು ಹಾಗೂ ಬಿಸ್ಕೆಟ್ ವಿತರಣೆಗೂ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಗಣ್ಯ ವ್ಯಕ್ತಿಗಳ (ವಿಐಪಿ) ದರ್ಶನಕ್ಕೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಸಮಯ ನಿಗದಿಪಡಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಇಡೀ ಬೆಟ್ಟದಾದ್ಯಂತ ಖಾಕಿ ಕಣ್ಗಾವಲು ಹಾಕಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ಜನರ ಚಲನವಲನಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ಯಶ್ ‘TOXIC’ ರಿಲೀಸ್ ಗೆ 100 ದಿನ ಬಾಕಿ.. ಸ್ಪೆಷಲ್ ಪೋಸ್ಟ್ ಹಂಚಿಕೊಂಡ ರಾಕಿ ಭಾಯ್..

December 9, 2025
ಮುಖಪುಟರಾಜಕೀಯ

ಕಾಂಗ್ರೆಸ್ ಕುರ್ಚಿ ಜಗಳ ; “ಕೈ” ನಾಯಕರಿಗೆ ಸಖತ್ತಾಗಿಯೇ ಟಾಂಗ್ ನೀಡಿದ ಬಿ ವೈ ವಿಜಯೇಂದ್ರ ..!

November 4, 2025
ಬೆಂಗಳೂರುಮುಖಪುಟ

ರಾಜ್ಯದ ವಿವಿಧೆಡೆ ಮಂಜು ಮುಸುಕಿದ ವಾತಾವರಣ ಮುಂದುವರಿಯುವ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

January 5, 2026
ಕ್ರೈಂ ಸುದ್ದಿಗಳುತುಮಕೂರುಮುಖಪುಟ

ಸಂಬಂಧಿಕನಿಂದಲೇ ನೀಚ ಕೃತ್ಯ ; 16 ವರ್ಷದ ಬಾಲಕಿ ಗಂಡು ಮಗುವಿಗೆ ಜನ್ಮ !

December 1, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?