PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ
ನಂಜನಗೂಡುಮುಖಪುಟ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Prathinidhi News
Last updated: February 10, 2026 11:28 am
Prathinidhi News
Published February 10, 2026
Share
SHARE

ನಂಜನಗೂಡು, ಫೆಬ್ರವರಿ 10, 2026: ದಕ್ಷಿಣಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವವು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರ ನೇತೃತ್ವದಲ್ಲಿ ದೇವಸ್ಥಾನದ ದಾಸೋಹ ಭವನದಲ್ಲಿ ಮಹತ್ವದ ಪೂರ್ವಭಾವಿ ಸಭೆ ನಡೆಯಿತು.

ಈ ಬಾರಿ ಮಾರ್ಚ್ 30ರಂದು ಐತಿಹಾಸಿಕ ಗೌತಮ ಪಂಚ ಮಹಾ ರಥೋತ್ಸವ ಜರುಗಲಿದ್ದು, ರಾಜ್ಯ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಈ ಹಿನ್ನೆಲೆಯಲ್ಲಿ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಸಕಲ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಶಾಸಕರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಾತ್ರೆಯ ವೇಳೆ ನಗರದಲ್ಲಿ ಸಂಚಾರ ದಟ್ಟಣೆ ಉಂಟಾಗದಂತೆ ತಡೆಯಲು ಬ್ಯಾರಿಕೇಡ್‌ಗಳ ಅಳವಡಿಕೆ ಹಾಗೂ ಸುಗಮ ಸಂಚಾರಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು. ಸುರಕ್ಷತೆಯ ದೃಷ್ಟಿಯಿಂದ ಬಸ್ ನಿಲ್ದಾಣ ಮತ್ತು ದೇವಾಲಯದ ಆಯ್ದ ಭಾಗಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲು ಹಾಗೂ ತಾತ್ಕಾಲಿಕ ವಾಚ್ ಟವರ್‌ಗಳನ್ನು ನಿರ್ಮಿಸಲು ಸೂಚಿಸಲಾಯಿತು. ರಥೋತ್ಸವದ ಸಂದರ್ಭದಲ್ಲಿ ನಿರಂತರ ವಿದ್ಯುತ್ ವ್ಯವಸ್ಥೆ, ಶ್ರೀಕಂಠೇಶ್ವರ ರಥದ ಸುಸ್ಥಿತಿಯ ಪರಿಶೀಲನೆ ಹಾಗೂ ರಸ್ತೆಗಳಲ್ಲಿರುವ ಹಳ್ಳಗಳನ್ನು ಮುಚ್ಚಿ ಸಮತಟ್ಟು ಮಾಡುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ನಿರ್ದೇಶನ ನೀಡಲಾಯಿತು.

ಭಕ್ತರ ಪವಿತ್ರ ಸ್ನಾನಕ್ಕಾಗಿ ಕಪಿಲಾ ನದಿಯ ಸ್ವಚ್ಛತೆಯನ್ನು ಕಾಪಾಡುವುದು ಹಾಗೂ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಸಭೆಯ ಪ್ರಮುಖ ಉದ್ದೇಶವಾಗಿತ್ತು. ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ಜೊತೆಗೆ, ವಿವಿಧ ಸಂಸ್ಥೆಗಳಿಂದ ಭಕ್ತರಿಗೆ ವಿತರಿಸಲಾಗುವ ಪ್ರಸಾದದ ಗುಣಮಟ್ಟವನ್ನು ಅಧಿಕಾರಿಗಳು ಕಡ್ಡಾಯವಾಗಿ ಪರಿಶೀಲಿಸಬೇಕು ಎಂದು ತಿಳಿಸಲಾಯಿತು.

- ಜಾಹೀರಾತು -

ಈ ಪೂರ್ವಭಾವಿ ಸಭೆಯಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಶೀಲ್ದಾರ್ ಡಾ. ಸ್ಮಿತಾ ರಾಮು, ಪ್ರಧಾನ ಅರ್ಚಕ ನಾಗಚಂದ್ರ ದೀಕ್ಷಿತ್, ಎಡಿಸಿ ಶಿವರಾಜು, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣ, ಪೌರಾಯುಕ್ತ ಬಸವರಾಜು, ಡಿವೈಎಸ್ಪಿ ರಘು, ಸರ್ಕಲ್ ಇನ್ಸ್‌ಪೆಕ್ಟರ್ ರವೀಂದ್ರ ಹಾಗೂ ವಿವಿಧ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ದೇವಸ್ಥಾನದ ವ್ಯಾಪ್ತಿಯ ಏಳು ಗ್ರಾಮಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮಾಜಿ ಮುಖ್ಯಮಂತ್ರಿ, ಹಿಂದುಳಿದ ವರ್ಗಗಳ ಹರಿಕಾರ ದಿವಂಗತ ಡಿ ದೇವರಾಜ ಅರಸುರವರ ಪ್ರತಿಮೆ ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

November 3, 2025
ಮುಖಪುಟಮೈಸೂರು ನಗರ

ರಾಜ್ಯದಲ್ಲಿ ಅಪಘಾತಗಳ ಪಟ್ಟಿಯಲ್ಲಿ ಮೈಸೂರಿಗೆ 6ನೇ ಸ್ಥಾನ; ಸುರಕ್ಷತಾ ಕ್ರಮಕ್ಕೆ ಆರ್.ಟಿ.ಒ ಮುಂದು!

January 13, 2026
ಮುಖಪುಟರಾಜಕೀಯ

ಪಂಚಭೂತಗಳಲ್ಲಿ ಲೀನರಾದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

January 29, 2026
ಬೆಂಗಳೂರುಮುಖಪುಟರಾಜಕೀಯ

ಬಿ.ವೈ. ವಿಜಯೇಂದ್ರಗೆ 50ನೇ ಜನ್ಮದಿನದ ಸಂಭ್ರಮ; ವಿವಿಧ ಸಮಾಜಮುಖಿ ಕಾರ್ಯ ಹಮ್ಮಿಕೊಂಡು ಅಭಿಮಾನಿಗಳ ಸಂಭ್ರಮಾಚರಣೆ..!

November 5, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?