PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: SPG ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್​ಐಆರ್ ದಾಖಲು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > SPG ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್​ಐಆರ್ ದಾಖಲು
ಜಿಲ್ಲೆ

SPG ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ಪ್ರಕರಣ, ಎಫ್​ಐಆರ್ ದಾಖಲು

Prathinidhi News
Last updated: December 14, 2023 4:00 pm
Prathinidhi News
Published December 14, 2023
Share
SHARE

ಹೊಸಕೋಟೆ, ಡಿ.14: ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆ ಪ್ರಕರಣವನ್ನು ಬೆಂಗಳೂರು ನಗರದ ಬೆಯ್ಯಪ್ಪನಹಳ್ಳಿ ಪೊಲೀಸರು ಪತ್ತೆಹಚ್ಚಿ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಳ್ಳುತ್ತಿದ್ದಾರೆ. ಇದೀಗ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ತಿರುಮಲಶೆಟ್ಟಿಹಳ್ಳಿಯಲ್ಲಿರುವ ಎಸ್​ಪಿಜಿ ಆಸ್ಪತ್ರೆಯಲ್ಲಿ ಭ್ರೂಣಹತ್ಯೆ ನಡೆಸುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಎಫ್​ಐಆರ್ ದಾಖಲಾಗಿದೆ.

ಭ್ರೂಣ ಹತ್ಯೆ ಪ್ರಕರಣ ಸಂಬಂಧ ತಿರುಮಲಶೆಟ್ಟಿಹಳ್ಳಿ ಎಸ್​​ಪಿಜಿ ಆಸ್ಪತ್ರೆಯ ವೈದ್ಯ ಸೇರಿದಂತೆ ಐವರ ವಿರುದ್ಧ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಶ್ರೀನಿವಾಸ್ ಮೊದಲ ಆರೋಪಿಯಾಗಿದ್ದು (ಎ1), ಎ2 ನರ್ಸ್​ ಅನಿತಾ, ಎ3 ನರ್ಸ್​​ ನೇತ್ರಾ, ಎ4 ರೇವತಿ, ಎ5 ರಾಧಿಕಾ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ಮೆಡಿಕಲ್​ ಆ್ಯಕ್ಟ್​ 1994, ಯುಎಸ್​​ 23/1, 2, 3, ಮೆಡಿಕಲ್ ಟರ್ಮಿನೇಷನ್ ಆಪ್ ಪ್ರೆಗ್ನೆಸಿ ಆ್ಯಕ್ಟ್ 1971 ಅಡಿ US 3, 4, IPC ಸೆಕ್ಷನ್​ 1860ರ ಅಡಿ, 312, 314, 315, 316ರ ಅಡಿ ಕೇಸ್​​ ದಾಖಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ತಲೆಮರೆಸಿಕೊಂಡ ವೈದ್ಯ ಮತ್ತು ನರ್ಸ್​ ಬಂಧನಕ್ಕೆ ಎರಡು ವಿಶೇಷ ತಂಡ ರಚಿಸಿ ಶೋಧ ಕಾರ್ಯ ನಡೆಸಲಾಗುತ್ತಿದೆ.

1500 ಕ್ಕೂ ಅಧಿಕ ಗರ್ಭಿಣಿಯರ ಸ್ಕ್ಯಾನಿಂಗ್

- ಜಾಹೀರಾತು -

ಎಸ್​ಪಿಜಿ ಆಸ್ವತ್ರೆಯಲ್ಲಿ ನಡೆಯುತ್ತಿದ್ದ ಭ್ರೂಣಹತ್ಯೆ ಪ್ರಕರಣ ಸಂಬಂಧ ಆಸ್ಪತ್ರೆಯ ದಾಖಲೆಗಳು ಸಾಕಷ್ಟು ಅನುಮಾನ ಮೂಡಿಸುತ್ತಿದೆ. ಸ್ಕ್ಯಾನಿಂಗ್​ನಲ್ಲಿ ದೊಡ್ಡ ದಂಧೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಕಳೆದ ಒಂದು ವರ್ಷದಲ್ಲಿ 1500 ಕ್ಕೂ ಅಧಿಕ ಗರ್ಭಿಣಿಯರು ಸ್ಕ್ಯಾನಿಂಗ್ ಮಾಡಿಸಿದ್ದು, ಈ ಪೈಕಿ 400 ಕ್ಕೂ ಅಧಿಕ ಮಹಿಳೆಯರ ಹೆರಿಗೆ ಮಾಹಿತಿ ‌ಅಲಭ್ಯವಾಗಿದೆ.

400 ಕ್ಕೂ ಅಧಿಕ ಮಹಿಳೆಯರು ಎಲ್ಲಿ ಹೆರಿಗೆ ಮಾಡಿಸಿಕೊಂಡಿದ್ದಾರೆ ಅಂತ ಮಾಹಿತಿ ಸಿಗುತ್ತಿಲ್ಲ. ನಾಪತ್ತೆಯಾದ 400 ಕ್ಕೂ‌ ಅಧಿಕ ಮಹಿಳೆಯರ ಮಾಹಿತಿಗಾಗಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಬೇರೆಡೆ ಹೆರಿಗೆ ಮಾಡಿಸಿಕೊಂಡಿದ್ದಾರಾ ಅಥವಾ ಗರ್ಭಪಾತ ಮಾಡಿದ್ದಾರಾ ಎಂಬ ವಿಚಾರವಾಗಿ ತಮಿಖೆ ನಡೆಸುತ್ತಿದ್ದಾರೆ.

ಈಗಾಗಲೆ ಸ್ಕ್ಯಾನಿಂಗ್ ಮಾಡಿಸಿರುವ ಮಹಿಳೆಯರ ದಾಖಲೆ ಪಡೆದುಕೊಂಡಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ನಾಪತ್ತೆಯಾಗಿರುವ ವೈದ್ಯ ಶ್ರೀನಿವಾಸ್ ಬಂಧನದ ನಂತರ ಮತ್ತಷ್ಟು ಮಾಹಿತಿ ಹೊರಬೀಳುವ ಸಾಧ್ಯತೆ ಇದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸುವುದಿಲ್ಲ: ನಿಲುವು ಪ್ರಕಟಿಸಿದ ಸಿದ್ದರಾಮಯ್ಯ

January 21, 2024
ಜಿಲ್ಲೆ

ಮುಸ್ಲಿಂ ಮಹಿಳೆ ಹುಚ್ಚಿಯಾಗಿದ್ದರೆ ಮೋದಿಗೇ ಯಾಕೆ ಧಿಕ್ಕಾರ ಕೂಗಿದಳು?: ಕೆಎಸ್ ಈಶ್ವರಪ್ಪ ಕಿಡಿ

January 22, 2024
ಜಿಲ್ಲೆಮುಖಪುಟಮೈಸೂರು ಗ್ರಾಮಾಂತರ

ನಾಗರಹೊಳೆಯಲ್ಲಿ ಆನೆಗಳ ಕಾದಾಟ, ಮಕನಾ ಆನೆಗೆ ಗಾಯ

June 9, 2025
ಜಿಲ್ಲೆ

ಉಡುಪಿ ಅಷ್ಟಮಠ ಪರ್ಯಾಯ ಮಹೋತ್ಸವಕ್ಕೆ ತಡೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್

January 8, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?