PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ ; ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನವದೆಹಲಿ > ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ ; ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ
ನವದೆಹಲಿಮುಖಪುಟರಾಜಕೀಯ

ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಬೇಡಿಕೆ ಬಹುತೇಕ ಈಡೇರಿಕೆಗೆ ಕೇಂದ್ರ ಸಮ್ಮತಿ ; ನೌಕರರ ಪ್ರಮುಖರ ಜತೆ ಅನ್ನಪೂರ್ಣದೇವಿ ಅವರನ್ನು ಭೇಟಿಯಾಗಿ ಚರ್ಚಿಸಿದ ಹೆಚ್ಡಿಕೆ

Prathinidhi News
Last updated: December 4, 2025 11:24 am
Prathinidhi News
Published December 4, 2025
Share
SHARE

ನವದೆಹಲಿ, ಡಿಸೆಂಬರ್‌ 4, 2025 : ಅಂಗನವಾಡಿ, ಅಕ್ಷರ ದಾಸೋಹ ಹಾಗೂ ಆಶಾ ಕಾರ್ಯಕರ್ತೆಯರ ಸಮಸ್ಯೆಗಳ ಬಗ್ಗೆ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವರಾದ ಅನ್ನಪೂರ್ಣ ದೇವಿ ಮತ್ತು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಮಹತ್ವದ ಮಾತುಕತೆ ನಡೆಸಿದರು.

ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನಾ ಚಳವಳಿ ನಡೆಸುತ್ತಿದ್ದ ಕರ್ನಾಟಕ ಅಂಗನವಾಡಿ, ಅಕ್ಷರ ದಾಸೋಹಿ, ಆಶಾ ನೌಕರರ ಪ್ರಮುಖರನ್ನು ಬುಧವಾರ ನವದೆಹಲಿಗೆ ಕರೆಸಿಕೊಂಡ ಸಚಿವ ಕುಮಾರಸ್ವಾಮಿ ಅವರು; ಸಂಜೆ ಈ ಎಲ್ಲಾ ಪ್ರಮುಖರ ಜತೆ ಸಂಜೆ ನವದೆಹಲಿಯ ಶಾಸ್ತ್ರೀ ಭವನದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಚೇರಿಯಲ್ಲಿ ಸಚಿವರಾದ ಅನ್ನಪೂರ್ಣದೇವಿ ಅವರನ್ನು ಭೇಟಿಯಾದರು.

ಈ ಸಂದರ್ಭದಲ್ಲಿ ನೌಕರರ ಪರವಾಗಿ ಸಚಿವರಿಗೆ ಅವರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಕುಮಾರಸ್ವಾಮಿ ಅವರು ಮಾಹಿತಿ ನೀಡಿದರು. ಇಬ್ಬರು ಸಚಿವರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಜರಿದ್ದ ಈ ಸಭೆಯಲ್ಲಿ ಕರ್ನಾಟಕದಿಂದ ಬಂದಿದ್ದ ಹನ್ನೆರಡು ಮಂದಿ ನೌಕರರ ಪ್ರಮುಖರು ಭಾಗಿಯಾಗಿದ್ದರು.

ಎಫ್ ಆರ್ ಎಸ್ ನೀತಿಯಲ್ಲಿ ಸುಧಾರಣೆ, ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಂದ ಮುಕ್ತಿಗೊಳಿಸುವುದು, ವಿಮಾ ಸೌಲಭ್ಯ, ಎಲ್ಲಾ ನೌಕರರ ವೇತನ ಹೆಚ್ಚಳ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಸಚಿವರೊಬ್ಬರು ಪ್ರಮುಖರ ಜತೆ ಚರ್ಚಿಸಿದರು.

- ಜಾಹೀರಾತು -

ಅಂಗನವಾಡಿ ಕಾರ್ಯಕರ್ತೆಯರನ್ನು ಚುನಾವಣೆ ಕೆಲಸಗಳಿಗೆ ನಿಯೋಜಿಸದಿರುವ ಬಗ್ಗೆ ಚುನಾವಣೆ ಆಯೋಗದ ಜತೆ ಚರ್ಚೆ ನಡೆಸಲಾಗುವುದು ಹಾಗೂ ಎಲ್ಲಾ ನೌಕರರಿಗೂ ಕೆಲಸದ ಒತ್ತಡ ಕಡಿಮೆ ಮಾಡುವ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಸಚಿವೆ ಅನ್ನಪೂರ್ಣದೇವಿ ಅವರು ಭರವಸೆ ನೀಡಿದರು.ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ವ್ಯಾಪ್ತಿಗೆ ಬರುವ ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಕ್ರಮ ವಹಿಸಲಾಗುವುದು. ನಿಮ್ಮ ಮೇಲಿನ ಕಾಳಜಿ ಹಾಗೂ ಮಾನವೀಯ ನೆಲೆಗಟ್ಟಿನ ಮೇರೆಗೆ ಬೇಡಿಕೆಗಳ ಈಡೇರಿಕೆಗೆ ಪರಿಶೀಲನೆ ನಡೆಸಲಾಗುವುದು ಎಂದು ಅನ್ನಪೂರ್ಣದೇವಿ ಅವರು ಭರವಸೆ ನೀಡಿದರು.

ನರೇಂದ್ರ ಮೋದಿ ಅವರ ಸರ್ಕಾರ ನಿಮ್ಮ ಜತೆಗಿದೆ. ಕರ್ನಾಟಕದಲ್ಲಿನೀವು ನಡೆಸುತ್ತಿದ್ದ ಪ್ರತಿಭಟನಾ ಚಳವಳಿಯ ಬಗ್ಗೆ ಸಚಿವರಾದ ಕುಮಾರಸ್ವಾಮಿ ಅವರು ನನ್ನೊಂದಿಗೆ ವಿವರವಾಗಿ ಚರ್ಚೆ ನಡೆಸಿದ್ದಾರೆ. ನೀವು ಉತ್ತಮ, ಶ್ರೇಷ್ಠ ಕೆಲಸ ಮಾಡುತ್ತಿದ್ದೀರಿ. ನಿಮ್ಮ ಜತೆ ಸರಕಾರವಿದೆ. ಆದಷ್ಟು ಬೇಡಿಕೆಗಳನ್ನು ಈಡೇರಿಸಲಾಗುವುದು. ನಿಮಗೆ ಒತ್ತಡ ಕಡಿಮೆ ಮಾಡುವ ನಿಟ್ಟಿನಲ್ಲಿ, ನಿಮಗೆ ಮತ್ತಷ್ಟು ಉತ್ತಮ ಸೌಲಭ್ಯ ಕಲಿಸ್ಪಿಸುವ ದಿಸೆಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಅನ್ನಪೂರ್ಣದೇವಿ ಅವರು ಅಂಗನವಾಡಿ ಪ್ರಮುಖರಿಗೆ ತಿಳಿಸಿದರು.

ಈ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯದ ಕಾರ್ಯದರ್ಶಿ ಅನಿಲ್ ಮಲಿಕ್ ಸೇರಿದಂತೆ ಮತ್ತಷ್ಟು ಉನ್ನತ ಅಧಿಕಾರಿಗಳು ಹಾಜರಿದ್ದರು.

ಇದಕ್ಕೂ ಮುನ್ನ ತಮ್ಮ ನಿವಾಸದಲ್ಲಿ ನೌಕರರ ಪ್ರಮುಖರನ್ನು ಭೇಟಿಯಾದ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು; ನನ್ನ ಮನವಿಗೆ ಓಗೊಟ್ಟು ಪ್ರತಿಭಟನೆ ಕೊನೆಗೊಳಿಸಿ ನವದೆಹಲಿಗೆ ಬಂದಿದ್ದು ಸ್ವಾಗತಾರ್ಹ. ನೀವೆಲ್ಲರೂ ಮೈಕೊರೆಯುವ ಚಳಿಯಲ್ಲಿ ರಸ್ತೆಯ ಮೇಲೆ ಧರಣಿ ಕೂರುವುದು ಅತ್ಯಂತ ನೋವಿನ ಸಂಗತಿ. ಚರ್ಚೆಯ ಮೂಲಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅದಕ್ಕಾಗಿಯೇ ನಿಮ್ಮನ್ನು ಇಲ್ಲಿಗೆ ಕರೆಸಿಕೊಳ್ಳಲಾಯಿತು. ಪ್ರತಿಭಟನೆಗಿಂತ ಚರ್ಚೆ ಮಾಡುವುದು ಉತ್ತಮ ಮಾರ್ಗ ಎಂದು ತಿಳಿಸಿದರು.

ಇದೇ ವೇಳೆ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ನೌಕರರ ಬೇಡಿಕೆಗಳ ಬಗ್ಗೆ ದೂರವಾಣಿಯಲ್ಲಿ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೊಂದಿಗೆ ಮಾತುಕತೆ ನಡೆಸಿದ ಸಚಿವ ಕುಮಾರಸ್ವಾಮಿ ಅವರು; ಪ್ರಧಾನ್ ಅವರೊಂದಿಗೆ ನೌಕರರ ಪ್ರಮುಖರ ಸಭೆಯನ್ನು ನಿಗದಿಗೊಳಿಸಿ, ಅವರ ನಿವಾಸಕ್ಕೆ ಅಧಿಕಾರಿಗಳ ಸಮೇತ ಕಳಿಸಿದರು.ಸಚಿವ ಪ್ರಧಾನ್ ಅವರ ಜತೆಗೂ ಮಾತುಕತೆ ನಡೆಸಿದ ಪ್ರಮುಖರು, ತಮ್ಮ ಬೇಡಿಕೆ, ಸಂಕಷ್ಟಗಳ ಬಗ್ಗೆ ಚರ್ಚಿಸಿದರು. ಈ ಅವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ್ ಅವರು, ಈ ಬಗ್ಗೆ ಕುಮಾರಸ್ವಾಮಿ ಅವರು ನನ್ನೊಂದಿಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿಸಿದರು.

ಎಸ್. ವರಲಕ್ಷ್ಮೀ, ಹೆಚ್.ಎಸ್. ಸುನಂದಾ, ಮಾಲಿನಿ ಮೇಸ್ತಾ, ಶಾಂತಾ, ಲಕ್ಷ್ಮೀದೇವಮ್ಮ, ಮಹದೇವಮ್ಮ, ಶಶಿಕಲಾ, ದೊಡ್ಡವ್ವ ಪೂಜಾರಿ, ನಂಜಮ್ಮ, ಗುಲ್ಜಾರ್, ಉಷಾರಾಣಿ, ಸಿಂಧು, ಸವಿತಾ ಅವರು ನೌಕರರ ನಿಯೋಗದಲ್ಲಿ ಇದ್ದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು: ಮಾಲೀಕ, ಮೇಸ್ತ್ರಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

November 18, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ಹೆಚ್ಚುವರಿ ಪೊಲೀಸ್ ಠಾಣೆಗಳ ಪರಿಶೀಲನೆ, ಆನ್‌ಲೈನ್ ವಂಚನೆ ತಡೆಗೆ ಒತ್ತು: ಗೃಹ ಸಚಿವ ಡಾ. ಜಿ. ಪರಮೇಶ್ವರ್

November 25, 2025
ಮುಖಪುಟಮೈಸೂರು ನಗರರಾಜಕೀಯ

ಗ್ರೇಟರ್ ಮೈಸೂರು ರಚನೆ ಸಂಬಂಧ: ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಜನಪ್ರತಿನಿಧಿಗಳು, ಅಧಿಕಾರಿಗಳ ಸಭೆ

November 3, 2025
ಬೆಂಗಳೂರುಮುಖಪುಟರಾಜಕೀಯ

ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ ʼಕಾಗಿನೆಲೆʼ ಸ್ವಾಮೀಜಿ ; ನಿರ್ಮಲಾನಂದ ಸ್ವಾಮೀಜಿಗೆ ಟಾಂಗ್‌ !

November 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?