ಪ್ರತಿನಿಧಿ ವರದಿ ಕೊಳ್ಳೇಗಾಲ
ಪಟ್ಟಣದ ಮಹದೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2024-25ನೇ ಶೈಕ್ಷಣಿಕ ವರ್ಷದ ಪದವಿ ತರಗತಿಗಳಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ.
ಕಾಲೇಜಿನಲ್ಲಿ ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ ತರಗತಿಗಳಿಗೆ ಪ್ರವೇಶ ಪಡೆಯುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಕಾಲೇಜಿನಲ್ಲಿ ಈಗಾಗಲೇ 4 ಕೋರ್ಸ್ ಗಳಿದ್ದು, ಈ ಸಾಲಿನ ಬಿಸಿಎ ಕೋರ್ಸ್ ಆರಂಭಿಸಲು ಅನುಮತಿ ನೀಡುವಂತೆ ಎಐಸಿಟಿಇಗೆ ಅರ್ಜಿ ಸಲ್ಲಿಸಿ ನೊಂದಣಿ ಮಾಡಿಕೊಳ್ಳಲಾಗಿದೆ.ಈ ವರ್ಷದಲ್ಲೇ ಅನುಮತಿ ಸಿಕ್ಕಲ್ಲಿ ಈ ಕೋರ್ಸಿಗೂ ಪ್ರವೇಶ ಪಡೆಯಬಹುದಾಗಿದೆ. ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ನೇರವಾಗಿ ಕಾಲೇಜಿನ ಕಚೇರಿ ಸಿಬ್ಬಂದಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಎಂ.ಜಯಲಕ್ಷಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ
Leave a Comment
