ಹುಣಸೂರು, ಫೆಬ್ರವರಿ 12, 2026: ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ 19 ಕರುಗಳನ್ನು ಹುಣಸೂರು ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಡಿವೈಎಸ್‌ಪಿ ರವಿ ಅವರ ನೇತೃತ್ವದ ತಂಡ ಅಕ್ರಮ ಸಾಗಾಣಿಕೆಯನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದೆ.

ಟಾಟಾ ಏಸ್ ಮಿನಿ ಗೂಡ್ಸ್ ವಾಹನದಲ್ಲಿ ಅತ್ಯಂತ ಅಮಾನವೀಯವಾಗಿ ಈ ಕರುಗಳನ್ನು ತುಂಬಿಕೊಂಡು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ವಾಹನ ಸಮೇತ 19 ಕರುಗಳನ್ನು ವಶಕ್ಕೆ ಪಡೆದಿದ್ದಾರೆ. ಕಾರ್ಯಾಚರಣೆಯ ವೇಳೆ ಹುಣಸೂರಿನ ಶಬ್ಬೀರ್‌ನಗರದ ನಿವಾಸಿ ಅಫ್ರಿದ್ ಶರೀಫ್ ಎಂಬಾತನನ್ನು ಬಂಧಿಸಲಾಗಿದ್ದು, ಸದ್ಯ ಆತನನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಈ ಸಂಬಂಧ ಹುಣಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕ್ರಮ ಗೋಮಾಂಸ ದಂಧೆ ಅಥವಾ ಸಾಗಾಣಿಕೆಯ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.
