PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ
ಸಮಗ್ರ

ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ಇಬ್ಬರ ಬಂಧನ

Prathinidhi News
Last updated: December 12, 2023 4:27 pm
Prathinidhi News
Published December 12, 2023
Share
SHARE

ಕಳೆದ ಕೆಲವು ದಿನಗಳಿಂದ ಫ್ರಾನ್ಸ್​​ನಲ್ಲಿ ತಿಗಣೆ ಕಾಟ ಹೆಚ್ಚಾಗುತ್ತಿದ್ದು, ಇದನ್ನೇ ಅಸ್ತ್ರವಾಗಿ ಪಡೆದುಕೊಂಡಿದ್ದ ಇಬ್ಬರು ವಂಚಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಗಣೆ ಕಾಟ ಒಂದೇ ದಿನದಲ್ಲಿ ಮಾಯಾವಾಗಿಬಿಡುತ್ತದೆ ಎಂದು ಲಸಿಕೆ ನೀಡಿ ಜನರನ್ನು ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ವಂಚಕರು.

ತಿಗಣೆ ನೋಡಲು ಚಿಕ್ಕದಾಗಿ ಕಂಡರೂ ಕೂಡ ಅದರ ಕಾಟ ಎಷ್ಟಿದೆ ಎಂದು ಅನುಭವಿಸಿದವರಿಗೇ ಗೊತ್ತು. ಎಷ್ಟೇ ಬೇಡವೆಂದರೂ, ಮನೆಗೆ ಎಡೆಬಿಡದೇ ಆಗಮಿಸುವ ಅತಿಥಿಗಳೆಂದರೆ ಅದು ತಿಗಣೆ. ಕಳೆದ ಕೆಲವು ದಿನಗಳಿಂದ ಫ್ರಾನ್ಸ್​​ನಲ್ಲಿ ತಿಗಣೆ ಕಾಟ ಹೆಚ್ಚಾಗುತ್ತಿದ್ದು, ಇದನ್ನೇ ಅಸ್ತ್ರವಾಗಿ ಮಾಡಿ ಜನರನ್ನು ವಂಚಿಸುತ್ತಿದ್ದ ವಂಚಕರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಿಗಣೆ ಕಚ್ಚದಂತೆ ನಿಮ್ಮನ್ನು ರಕ್ಷಿಸುವುದಾಗಿ ಲಸಿಕೆಯೊಂದನ್ನು ಜನರಿಗೆ ನೀಡಿ ನಂಬಿಸಿ ಲಕ್ಷ ಲಕ್ಷ ದುಡ್ಡು ದೋಚುತ್ತಿದ್ದ ವಂಚಕರು ಪೊಲೀಸರ ಬಲೆಗೆ ಸಿಕ್ಕಿ ಬಿದ್ದಿದ್ದಾರೆ.

ವರದಿಗಳ ಪ್ರಕಾರ, ವಂಚಕರಿಬ್ಬರು ತಿಗಣೆ ಕಾಟದಿಂದ ಬಳಲುತ್ತಿರುವ ಮನೆಗಳಿಗೆ ಹೋಗಿ ಒಂದೇ ದಿನದಲ್ಲಿ ತಿಗಣೆಯನ್ನು ನಿಮ್ಮ ಮನೆಯಲ್ಲಿ ಓಡಿಸುವುದಾಗಿ ನಕಲಿ ನಿಯಂತ್ರಣ ಸೇವೆಗಳನ್ನು ನೀಡುತ್ತಿದ್ದರು. ಇದಲ್ಲದೇ ತಿಗಣೆ ಕಚ್ಚದಂತೆ ಲಸಿಕೆಯನ್ನು ನೀಡುವುದಾಗಿ ಜನರನ್ನು ನಂಬಿಸಿದ್ದರು.

ತಿಗಣೆ ಕಾಟದಿಂದ ಮುಕ್ತಿ ನೀಡುವುದಾಗಿ  ಪ್ರತೀ ಮನೆಯಿಂದ 324 ಡಾಲರ್ ಅಂದರೆ ಭಾರತದ ಕರೆನ್ಸಿಯ ಪ್ರಕಾರ 27 ಸಾವಿರ ರೂಪಾಯಿಗಳನ್ನು ಪಡೆಯುತ್ತಿದ್ದರು ಎಂದು ಸಂತ್ರಸ್ತರ ದೂರಿನ ಆಧಾರದ ಮೇಲೆ ಕೇಸು ದಾಖಲಿಸಲಾಗಿತ್ತು. ಕೇಸಿನ ಆಧಾರ ಮೇಲೆ ವಂಚಕರನ್ನು ಪೊಲೀಸರು ಬಂಧಿಸಿದ್ದು,ಇಲ್ಲಿಯವೆರೆಗೆ 48ಕ್ಕಿಂತಲೂ ಹೆಚ್ಚಿನ ಮನೆಗಳಲ್ಲಿ ವಂಚಿಸಿರುವುದಾಗಿ ತಿಳಿದುಬಂದಿದೆ. ಫ್ರೆಂಚ್ ಸರ್ಕಾರವು ಮೇಲೆ ಈ ತಿಗಣೆ ಕಾಟ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇದೀಗಾ ವಿವಾದಾತ್ಮಕ ರಾಜಕೀಯ ವಿಷಯವಾಗಿ ಮಾರ್ಪಟ್ಟಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

ಆರ್ಟಿಕಲ್ 370 ರದ್ದು: ಏಕಭಾರತ, ಶ್ರೇಷ್ಠ ಭಾರತಕ್ಕೆ ಸುಪ್ರೀಂ ಬಲ

December 12, 2023
ಸಮಗ್ರ

ಗಿಡ ನೀಡುವ ಮೂಲಕ ರಾಮಚರಣ್ ಹುಟ್ಟುಹಬ್ಬ ಆಚರಣೆ

March 27, 2024
ಸಮಗ್ರ

ಬೆಳಗಾವಿ ಅಧಿವೇಶನ: ನಾಳೆಯಿಂದ 2 ದಿನ ಉತ್ತರ ಕರ್ನಾಟಕ ಸಮಸ್ಯೆಗಳ ಚರ್ಚೆ

December 5, 2023
ಸಮಗ್ರ

ಇಂದು ಐವರು ಟೀಂ ಇಂಡಿಯಾ ಕ್ರಿಕೆಟಿಗರ ಜನ್ಮದಿನ; ಶುಭಕೋರಿದ ಬಿಸಿಸಿಐ

December 6, 2023
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?