ದೇವನಹಳ್ಳಿ:ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ-7 ರ ಬಳಿಯ ಮೈದಾನದಲ್ಲಿ ಏಪ್ರಿಲ್ 20 ರಂದು ಬಿಜೆಪಿ ಸಮಾವೇಶ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಕ್ಕೆ ಸಿದ್ಧತೆ ನಡೆಯುತ್ತಿದ್ದು, ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಎನ್ಡಿಎ ಅಭ್ಯರ್ಥಿ ಡಾ. ಕೆ .ಸುಧಾಕರ್ ಹೇಳಿದರು.
ದೇವನಹಳ್ಳಿ ತಾಲೂಕಿನ ಚಪ್ಪರದಕಲ್ಲು ಗ್ರಾಮದಲ್ಲಿರುವ ಕೃಷ್ಣೋದಯ ಕಲ್ಯಾಣ ಮಂಟಪದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಪ್ರಧಾನಿ ಮೋದಿ ಪ್ರಚಾರ ಮಾಡಲಿದ್ದಾರೆ. ಇದರಿಂದಾಗಿ ಬಿಜೆಪಿ ಕಾರ್ಯಕರ್ತರಿಗೆ ಬಹಳ ಉತ್ಸಾಹ ಬಂದಿದೆ. ಅವರ ಆಗಮನದಿಂದಾಗಿ ಚುನಾವಣೆಯ ಮೇಲೆ ದೊಡ್ಡ ಪರಿಣಾಮವಾಗಲಿದ್ದು, ನನಗೆ ಹೆಚ್ಚು ಲಾಭವಾಗಲಿದೆ ಎಂದರು.ಮಾಜಿ ಶಾಸಕ ಪಿಳ್ಳ ಮುನಿಶಾಮಪ್ಪ ಮಾತನಾಡಿದರು. ಮಾಜಿ ಶಾಸಕರಾದ ನಿಸರ್ಗ ನಾರಾಯಣಸ್ವಾಮಿ, ಜಿ .ಚಂದ್ರಣ್ಣ, ಜಿಲ್ಲಾಧ್ಯಕ್ಷರಾದ ರಾಮಕೃಷ್ಣ , ಬಿ.ಮುನೇಗೌಡ ,ತಾಲೂಕು ಅಧ್ಯಕ್ಷರುಗಳಾದ ಆರ್. ಮುನೇಗೌಡ ,ಸುಂದರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರವಿಕುಮಾರ್, ಜಿ.ಎ.ರವೀಂದ್ರ ಭಾಗವಹಿಸಿದ್ದರು.