PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ
ಮುಖಪುಟಮೈಸೂರು ನಗರ

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

Prathinidhi News
Last updated: January 28, 2026 11:40 am
Prathinidhi News
Published January 28, 2026
Share
SHARE

ಮೈಸೂರು, ಜನವರಿ 28, 2026 :ನಗರದ ಶ್ರೀರಾಂಪುರ ಎರಡನೇ ಹಂತದ ಬೆಮೆಲ್ ಬಡಾವಣೆಯಲ್ಲಿರುವ ಗೀತಾಂಜಲಿ ಇಂಟರ್ನ್ಯಾಷನಲ್ ಗ್ಲೋಬಲ್ ಶಾಲೆಯಲ್ಲಿ ಮಕ್ಕಳಿಗಾಗಿ ಏರ್ಪಡಿಸಲಾಗಿದ್ದ ಅರಳು ಪ್ರತಿಭೆ ಚಿತ್ರಕಲಾ ಸ್ಪರ್ಧೆಯಲ್ಲಿ ನೂರಾರು ಮಕ್ಕಳು ಪಾಲ್ಗೊಂಡು ವಿವಿಧ ಚಿತ್ರಗಳನ್ನ ಬಿಡಿಸಿ ಬಣ್ಣಗಳಿಂದ ಆಕರ್ಷಣೀಯವಾಗಿಸಿ ಬಹುಮಾನಗಳನ್ನು ಪಡೆದರು.

ಗಣರಾಜ್ಯೋತ್ಸವದ ಅಂಗವಾಗಿ ಶಾಲೆಯ ನೂತನ ಸುಸಜ್ಜಿತ ಕ್ಯಾಂಪಸ್ ನಲ್ಲಿ ಏರ್ಪಡಿಸಲಾಗಿದ್ದ ಚಿತ್ರಕಲಾ ಸ್ಪರ್ಧಾ ಕಾರ್ಯಕ್ರಮದಲ್ಲಿ ನೂರಾರು ಮಕ್ಕಳು ಪಾಲ್ಗೊಂಡಿದ್ದರೆ, ಅವರ ಪೋಷಕರು ಅರಳು ಪ್ರತಿಭೆ ಗಳನ್ನು ಪ್ರೋತ್ಸಾಹಿಸಿದರು. ವೇದಿಕೆಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಗೀತಾಂಜಲಿ ಎಜುಕೇಶನ್ ಟ್ರಸ್ಟ್‌ನ ಮುಖ್ಯಸ್ಥರಾದ ಆದಿಶೇಷನ ಗೌಡ, ಮಕ್ಕಳ ಪ್ರಾಥಮಿಕ ಶಿಕ್ಷಣ ಹಂತದಲ್ಲಿ ರಚನಾತ್ಮಕ ಕಲಿಕೆ ಹಾಗೂ ಗುಣಮಟ್ಟದ ಶಿಕ್ಷಣ ದೊಂದಿಗೆ ಎಳೆಯ ಮನಸ್ಸುಗಳಿಗೆ ಉತ್ತಮ ಶಾಲಾ ಪರಿಸರ ಹಾಗೂ ಶ್ರೇಷ್ಠ ಮೌಲ್ಯಗಳನ್ನು ಕಲಿಸುವುದು ನಮ್ಮ ಶಿಕ್ಷಣ ಸಂಸ್ಥೆಯ ಉದ್ದೇಶವಾಗಿದೆ ಎಂದರು.

- ಜಾಹೀರಾತು -

ಜ್ಯೋತಿ ಗುರುಕುಲ ಶಿಕ್ಷಣ ಸಂಸ್ಥೆಯ ಮುಖ್ಯಸ್ಥೆ ಪುಷ್ಪಜ್ಯೋತಿ ಅವರು ಮಾತನಾಡಿದರು. ಮೈಸೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶ ಗಳಿಂದ ಆಗಮಿಸಿದ್ದ ಮಕ್ಕಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಮೂರು ವಿಭಾಗ ಗಳಲ್ಲಿ ವಿಜೇತರಾಗಿ ಪ್ರಶಸ್ತಿ ಫಲಕ ಪಡೆದುಕೊಂಡರು. ಅಲ್ಲದೆ ಪಾಲ್ಗೊಂಡು ಚಿತ್ರಕಲೆ ಬಿಡಿಸಿದ ಎಲ್ಲ ಮಕ್ಕಳಿಗೂ ಪ್ರಮಾಣಪತ್ರ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಗೀತಾಂಜಲಿ ಎಜುಕೇಶನ್‌ ಟ್ರಸ್ಟ್‌ನ ಕಾರ್ಯದರ್ಶಿ, ಸೌಮ್ಯ ಆದಿಶೇಷನ್ ಗೌಡ, ಟ್ರಸ್ಟಿಗಳಾದ ನಂಜೇಗೌಡ ಹಾಗೂ ಸುಧಾ, ವ್ಯವಸ್ಥಾಪಕ ಪನ್ನಗಪ್ರಭು, ಕರ್ನಾಟಕ ಮುಕ್ತ ವಿವಿ ಪ್ರಾಧ್ಯಾಪಕ ಪ್ರೊಫೆಸರ್ ಪಾಂಡುರಂಗ, ಸಾತಗಳ್ಳಿ ಮಹಾತ್ಮ ಗಾಂಧಿ ಬಿ.ಎಡ್ ಕಾಲೇಜಿನ ಪ್ರಾಂಶುಪಾಲ ಡಾ. ಶಿವಕುಮಾರ್, ಗೀತಾಂಜಲಿ ಶಾಲೆಯ ಶಿಕ್ಷಕಿಯರಾದ ಪುಷ್ಪಾ, ಜಯಶ್ರೀ, ಸಿಬ್ಬಂದಿ ಲಕ್ಷ್ಮೀ, ಮಹೇಶ, ಲಕ್ಷ್ಮಮ್ಮ ಮನೋಹರ ಉಪಸ್ಥಿತರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟರಾಜಕೀಯ

ಚಿಕ್ಕಬಳ್ಳಾಪುರ :ನಗರಸಭೆ ಪೌರಾಯುಕ್ತೆಗೆ ಬೆದರಿಕೆ ಹಾಕಿದ್ದ ರಾಜೀವ್ ಗೌಡ ಎಸ್ಕೇಪ್- ಪೊಲೀಸರ ಹಗಲು ರಾತ್ರಿ ಹುಡುಕಾಟ

January 24, 2026
ಮಂಡ್ಯಮುಖಪುಟರಾಜಕೀಯ

ಡಿ.ಕೆ. ಶಿವಕುಮಾರ್ ಪರ ‘ಗಿಳಿ ಶಾಸ್ತ್ರ’: ಬಿಜೆಪಿಗರಿಂದ ವಿಡಂಬನೆ!

November 24, 2025
ನವದೆಹಲಿಬೆಂಗಳೂರುಮುಖಪುಟರಾಜಕೀಯ

ಇಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಲಿರುವ ಸಿಎಂ ಸಿದ್ದರಾಮಯ್ಯ; ಮಹತ್ವದ ಚರ್ಚೆ

November 17, 2025
ಮುಖಪುಟಮೈಸೂರು ನಗರ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷದ ಸಡಗರ – ಅರಮನೆಯಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಸಕಲ ತಯಾರಿ

December 17, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?