ಮಡಿಕೇರಿ: ವಿಶ್ವ ಆರೋಗ್ಯ ದಿನದ ಪ್ರಯುಕ್ತ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ವಿದ್ಯಾರ್ಥಿಗಳಿಂದ ತಂಬಾಕು ಸೇವನೆಯ ದುಷ್ಪರಿಣಾಮಗಳ ಕುರಿತು ರಾಜಸೀಟ್ ಎದುರು ಬೀದಿ ನಾಟಕ ಪ್ರದರ್ಶನ ನೀಡಿದರು.
ಕಡ್ಡಿಪುಡಿ ಹಾಕಿ ಗಂಟಲಿನ ಕ್ಯಾನ್ಸರ್, ಮದ್ಯಪಾನ ಮತ್ತು ಧೂಮಪಾನದಿಂದ ಹೃದಯಾಘಾತ ಮತ್ತು ಚಟ ಇಲ್ಲದವರಿಗೂ ಧೂಮಪಾನದ ಹೊಗೆಯಿಂದ ಆಗುವ ತೊಂದರೆಗಳ ಬಗ್ಗೆ ಮಾಹಿತಿ ನೀಡಲಾಯಿತು.
ಮೊದಲನೆಯ ಹಾಗೂ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ಕಿವಿ, ಮೂಗು ಗಂಟಲಿನ ವಿಭಾಗದ ಮುಖ್ಯಸ್ಥ ಡಾ.ಶ್ವೇತ ಸಂಯೋಜಿಸಿದರು. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ವಿಶಾಲ್ ಕುಮಾರ್, ಪ್ರಾಂಶುಪಾಲ ಡಾ.ನರಸಿಂಹ ರೈ, ವೈದ್ಯಕೀಯ ಅಧೀಕ್ಷಕ ಡಾ.ಸೋಮಶೇಖರ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಂಜುಂಡಯ್ಯ, ಮುಖ್ಯ ಆಡಳಿತಾಧಿಕಾರಿ ರೋಹಿಣಿ ಭಾಗವಹಿಸಿದ್ದರು.
ಫೋಟೋ 6 ಎಂಡಿಕೆ 09 ; ತಂಬಾಕು ಸೇವನೆಯ ದುಷ್ಪರಿಣಾಮದ ಬೀದಿ ನಾಟಕ ನಡೆಯಿತು
