PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ರಸ್ತೆ ಅಪಘಾತಗಳಲ್ಲಿ ಶೇ. 75 ರಷ್ಟು ದ್ವಿಚಕ್ರ ವಾಹನ ಸವಾರರೇ ಬಲಿ – ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕಳವಳ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ರಸ್ತೆ ಅಪಘಾತಗಳಲ್ಲಿ ಶೇ. 75 ರಷ್ಟು ದ್ವಿಚಕ್ರ ವಾಹನ ಸವಾರರೇ ಬಲಿ – ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕಳವಳ
ಮುಖಪುಟಮೈಸೂರು ನಗರ

ಮೈಸೂರು: ರಸ್ತೆ ಅಪಘಾತಗಳಲ್ಲಿ ಶೇ. 75 ರಷ್ಟು ದ್ವಿಚಕ್ರ ವಾಹನ ಸವಾರರೇ ಬಲಿ – ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಕಳವಳ

Prathinidhi News
Last updated: January 20, 2026 3:57 pm
Prathinidhi News
Published January 20, 2026
Share
SHARE

ಮೈಸೂರು, ಜನವರಿ 20, 2026 : ಮೈಸೂರು ನಗರ ಪೊಲೀಸ್ ಇಲಾಖೆಯ ವತಿಯಿಂದ 37ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚಾರಣೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೈಸೂರಿನ ಮಾನಸ ಗಂಗೋತ್ರಿಯ ವಿಜ್ಞಾನ ಭವನದ ಸಭಾಂಗಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಅವರು ಉದ್ಘಾಟಿಸಿ, ಸಂಚಾರ ನಿಯಮಗಳ ಪಾಲನೆಯ ಕುರಿತು ಮಹತ್ವದ ಮಾಹಿತಿ ನೀಡಿದರು.

ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿರುವವರ ಪೈಕಿ ಶೇಕಡಾ 75 ರಷ್ಟು ಮಂದಿ ದ್ವಿಚಕ್ರ ವಾಹನ ಸವಾರರೇ ಆಗಿರುವುದು ಆತಂಕಕಾರಿ ವಿಚಾರ ಎಂದು ಅವರು ತಿಳಿಸಿದರು.ಹೆಚ್ಚಿನ ಅಪಘಾತಗಳಲ್ಲಿ ಸವಾರರ ತಲೆಗೆ ತೀವ್ರವಾಗಿ ಪೆಟ್ಟು ಬೀಳುತ್ತಿರುವುದು ಸಾವಿಗೆ ಪ್ರಮುಖ ಕಾರಣವಾಗಿದ್ದು, ಹೆಲ್ಮೆಟ್ ಧರಿಸದಿರುವುದೇ ಇದಕ್ಕೆ ಮೂಲ ಕಾರಣ ಎಂದು ಪೊಲೀಸ್ ಅಧಿಕಾರಿಗಳು ಈ ಸಂದರ್ಭದಲ್ಲಿ ಕಳವಳ ವ್ಯಕ್ತಪಡಿಸಿದರು. ರಸ್ತೆ ಸುರಕ್ಷತೆಯ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ವಿದ್ಯುನ್ಮಾನ ಮಾಧ್ಯಮಗಳ ಪ್ರತಿನಿಧಿಗಳಿಗೆ ಸಂಕೇತವಾಗಿ ಹೆಲ್ಮೆಟ್‌ಗಳನ್ನು ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಡಿಸಿಪಿ ಸುಂದರರಾಜ್, ಸಂಚಾರ ವಿಭಾಗದ ಎಸಿಪಿ ಶಿವಶಂಕರ್ ಸೇರಿದಂತೆ ಪೊಲೀಸ್ ಇಲಾಖೆಯ ಇನ್ನಿತರ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ: ಅರಮನೆ ಆವರಣದಲ್ಲಿ ಪೊಲೀಸ್ ತಪಾಸಣೆ ತೀವ್ರ

December 29, 2025
ನಂಜನಗೂಡುಮುಖಪುಟ

ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು: ಮಾಲೀಕ, ಮೇಸ್ತ್ರಿ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

November 18, 2025
ಮುಖಪುಟಮೈಸೂರು ನಗರ

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಮೈಸೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನ..!

November 22, 2025
ಮುಖಪುಟಮೈಸೂರು ನಗರರಾಜಕೀಯ

ಮನ್ ರೇಗಾ ಹೆಸರು ಬದಲಾವಣೆ ವಿರೋಧಿಸಿ ಮೈಸೂರಿನಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ: ಕೇಂದ್ರದ ವಿರುದ್ಧ ಸಚಿವ ಮಹದೇವಪ್ಪ ಆಕ್ರೋಶ

February 2, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?