ಚಾಮರಾಜನಗರ, ಜುಲೈ 29, 2025 : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾಗಿರುವ ಗೋಪಾಲಸ್ವಾಮಿ ಬೆಟ್ಟದಲ್ಲಿ ರಸ್ತೆ ಬದಿಯ ಪ್ಯಾರಾಪಿಟ್ ವಾಲ್ ಕುಸಿತವಾಗಿದೆ. ಈ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಎರಡು ದಿನಗಳ ಕಾಲ ದೇವಾಲಯ ಬಂದ್ ಮಾಡಲಾಗಿದೆ. ಅಲ್ಲದೆ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿ ಚಾಮರಾಜನಗರ ಜಿಲ್ಲಾದಿಕಾರಿ ಶಿಲ್ಪಾನಾಗ್ ಆದೇಶ ನೀಡಿದ್ದಾರೆ. ಅಲ್ಲದೆ ಬಿಳಿಗಿರಿರಂಗನ ಬೆಟ್ಟ, ಕೆ ಗುಡಿಗೆ ಹೋಗುವ ಹೊಂಡರಬಾಳು ಮಾರ್ಗವೂ ಕೂಡ ಬಂದ್ ಮಾಡಲಾಗಿದೆ.
ಶ್ರಾವಣ ಮಾಸದ ಪ್ರಯುಕ್ತ ಬೆಟ್ಟಕ್ಕೆ ಭೇಟಿ ಕೊಡುವವರ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಈ ನಡುವೆಯೇ ಬೆಟ್ಟದ ರಸ್ತೆ ಬದಿಯ ಪ್ಯಾರಾಪಿಟ್ ವಾಲ್ ಕುಸಿತವಾಗಿದೆ. ದುರಸ್ತಿ ಕಾರ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿದೆ. ಹಾಗೂ ಬಿಳಿಗಿರಿರಂಗನ ಬೆಟ್ಟ, ಕೆ ಗುಡಿಗೆ ಹೋಗುವ ಹೊಂಡರಬಾಳು ಮಾರ್ಗವಾಗಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27ರವರೆಗೂ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.