ಬೆಂಗಳೂರು, ನವೆಂಬರ್ 19, 2025 : ಬೆಂಗಳೂರು ಮಂದಿಯ ಫೆವರೇಟ್ ಪ್ರತಿಷ್ಠಿತ ಮಂತ್ರಿ ಮಾಲ್ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದ್ದಕ್ಕೆ ಬಿಬಿಎಂಪಿ ಮತ್ತೆ ಸೀಜ್ ಮಾಡಿದೆ. 30 ಕೋಟಿಗೂ ಅಧಿಕ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಹಲವು ವರ್ಷಗಳಿಂದ ತೆರಿಗೆ ಪಾವತಿಸದೆ ಮಂತ್ರಿ ಮಾಲ್ಗೆ ಬೀಗ ಬಿದ್ದಿತ್ತು. ಈ ಬಾರಿಯೂ ಬರೋಬ್ಬರಿ 30 ಕೋಟಿ ರೂ. ಹೆಚ್ಚು ತೆರಿಗೆ ಬಾಕಿ ಉಳಿಸಿಕೊಂಡ ಕಾರಣ ಅಧಿಕಾರಿಗಳು ಇಂದು ಬೆಳಗ್ಗೆ ಮಾಲ್ ಅನ್ನು ಸೀಜ್ ಮಾಡಿ ನೋಟಿಸ್ ಕಳುಹಿಸಿದ್ದಾರೆ.
ಈ ಹಿಂದೆ 2020 ರಲ್ಲೂ ಚೆಕ್ ಬೌನ್ಸ್ ಆಗಿದ್ದಕ್ಕೆ ಮಂತ್ರಿ ಮಾಲ್ಗೆ ಬೀಗ ಹಾಕಲಾಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರೂ ಮಾಲ್ ಆಡಳಿತವು ತೆರಿಗೆ ಪಾವತಿಸಲು ಯಾವುದು ಕ್ರಮ ಕೈಗೊಂಡಿರಲಿಲ್ಲ.
ತೆರಿಗೆ ಪಾವತಿಸುವಂತೆ ಹಲವು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಆಡಳಿತ ಮಂಡಳಿ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಇದ್ರಿಂದ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.
ಮಂತ್ರಿ ಮಾಲ್ನ ಲೈಸೆನ್ಸ್ ಅಮಾನತುಗೊಳಿಸಲಾಗಿದೆ ಎಂದು ಬೋರ್ಡ್ ಹಾಕಿ ಪಾಲಿಕೆ ಅಧಿಕಾರಿಗಳು ಸೀಜ್ ಮಾಡಿದ್ದರು. ಇದ್ರಿoದ ಮಾಲ್ ನ ಒಳಗಿದ್ದ ಫ್ರ್ಯಾಂಚೈಸಿ ಗಳು ಆಡಳಿತ ಮಂಡಳಿ ವಿರುದ್ಧ ತಿರುಗಿಬಿದ್ದಿದ್ದರು.ಇದೀಗ ಮತ್ತೊಮ್ಮೆ ಇದೇ ತೆರಿಗೆ ವಿಷಯದಲ್ಲಿಯೇ ಮಾಲ್ಗೆ ಲಾಕ್ ಔಟ್ ಆಗಿದೆ.
