ಬಳ್ಳಾರಿ: ಕಾಂಗ್ರೆಸ್ ಶಾಸಕ ನಾ.ರಾ. ಭರತ್ ರೆಡ್ಡಿ ನಿವಾಸದ ಮೇಲೆ ED ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಂದು ಬೆಳಗ್ಗೆ 6:30ಕ್ಕೆ ಬೆಂಗಳೂರಿನ ಪಾಸಿಂಗ್ ವಾಹನಗಳಲ್ಲಿ ಏಕಕಾಲಕ್ಕೆ ಆಗಮಿಸಿದ್ದಾರೆ. ಶಾಸಕ ನಾರಾಭರತ ರೆಡ್ಡಿ ಮನೆ, ತಂದೆಯ ಕಚೇರಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮನೆ ಮತ್ತು ಕಚೇರಿಯ ಮೇಲೆ ದಾಳಿ ಮಾಡಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈ ಹಿಂದೆ ಹುಟ್ಟುಹಬ್ಬಕ್ಕೆ ಇಡೀ ಬಳ್ಳಾರಿ ನಗರದ ಮನೆ ಮನೆಗೆ ಶಾಸಕ ಭರತ ರೆಡ್ಡಿ ಕುಕ್ಕರ್ ನೀಡಿದ್ದರು.
ಬೆಂಗಳೂರಿನಿಂದ ಆಗಮಿಸಿದ ಹತ್ತಾರು ಅಧಿಕಾರಿಗಳು ಸಿಬ್ಬಂದಿ ತಂಡ ಶಾಸಕ ನಾರಾ ಭರತ್ ರೆಡ್ಡಿ ನಿವಾಸಕ್ಕೆ ಭದ್ರತಾ ಸಿಬ್ಬಂದಿಯೊಂದಿಗೆ ಆಗಮಿಸಿ ಬಳ್ಳಾರಿ ಶಾಸಕರ ಮನೆ ಸೇರಿದಂತೆ 4 ಕಡೆ ಇಡಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.