ಪ್ರತಿನಿಧಿ ವರದಿ ಮಾಲೂರು
ಶ್ರೀ ಮಾರಿಕಾಂಬಾ ದೇವಾಲಯ ಟ್ರಸ್ಟ್ ವತಿಯಿಂದ ದೇವಾಲಯಕ್ಕೆ ಬರುವ ಭಕ್ತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ದೇವಾಲಯ ಮುಂಭಾಗದಲ್ಲಿ 40 ಲಕ್ಷ ರೂ. ವೆಚ್ಚದಲ್ಲಿ ಶೆಡ್ ನಿರ್ಮಾಣ ಮಾಡಲಾಗುತ್ತಿದೆ ಎಂದು ಶಾಸಕ ಕೆ.ವೈ.ನಂಜೇಗೌಡ ಹೇಳಿದರು.
ಪಟ್ಟಣದ ಹೃದಯ ಭಾಗದಲ್ಲಿರುವ ಶ್ರೀ ಕ್ಷೇತ್ರ ಮಾರಿಕಾಂಬಾ ದೇವಾಲಯ ಮುಂಭಾಗದಲ್ಲಿ ದೇವಾಲಯ ಟ್ರಸ್ಟ್ ವತಿಯಿಂದ 40 ಲಕ್ಷ ರೂ.ಗಳ ಶೆಡ್ ನಿರ್ಮಾಣಕ್ಕೆ ಭೂಮಿಪೂಜೆ ನೇರವೇರಿಸಿ ಮಾತನಾಡಿದರು.
ಶ್ರೀ ಮಾರಿಕಾಂಬಾ ದೇವಾಲಯ ಟ್ರಸ್ಟ್ ನ ಪದಾಧಿಕಾರಿಗಳು ದೇವಾಲಯ ಅಭಿವೃದ್ಧಿ ಜತೆಗೆ, ಸಾಮಾಜಿಕ ಕಾರ್ಯಗಳನ್ನು ಮಾಡುತ್ತಿದ್ದಾರೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ, ಶೈಕ್ಷಣಿಕವಾಗಿ ಬಡ ವಿದ್ಯಾರ್ಥಿಗಳಿಗೆ ನೆರವು, ಆರೋಗ್ಯ ಕ್ಷೇತ್ರಕ್ಕೆ, ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ, ಭಕ್ತರಿಗೆ ಬಿಸಿಲು, ಮಳೆಯಿಂದ ತೊಂದರೆ ಅನುಭವಿಸುತ್ತಿರುವುದನ್ನು ಗಮನಹರಿಸಿದ ಟ್ರಸ್ಟ್‌ನ ಪದಾಧಿಕಾರಿಗಳು 40 ಲಕ್ಷ ರೂ.ಗಳಲ್ಲಿ ಶೆಡ್ ನಿರ್ಮಿಸಲು ಮುಂದಾಗಿರುವ ಜತೆಗೆ, ಪುರಾತನ ಕಲ್ಯಾಣಿ ಅಭಿವೃದ್ಧಿಗೆ ಮುಂದಾಗಿರುವುದು ಶ್ಲಾಘನೀಯ ಎಂದರು.
ದೇವಾಲಯ ಸಮಿತಿಯ ತಬಲನಾರಾಯಣಪ್ಪ, ಪಂಚೆ ನಂಜುಂಡಪ್ಪ, ಡಿಸಿಸಿ ಅಧ್ಯಕ್ಷ ಸಿ.ಲಕ್ಷ್ಮೀನಾರಾಯಣ್, ಪುರಸಭಾ ಸದಸ್ಯರಾದ ಎನ್.ವಿ.ಮುರಳೀಧರ್, ಭಾರತಮ್ಮ, ಎ.ರಾಜಪ್ಪ, ಜಾಕೀರ್, ವೆಂಕಟೇಶ್, ಮಾಜಿ ಸದಸ್ಯರಾದ ಹನುಮಂತ ರೆಡ್ಡಿ, ಪಾರ್ವತಮ್ಮ, ಕೋಳಿ ನಾರಾಯಣ, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಮುಹಮ್ಮದ್ ನಯೀಮ್, ಕಾರ್ಯದರ್ಶಿ ಕೃಷ್ಣಪ್ಪ, ಸಿ.ಪಿ.ವೆಂಕಟೇಶ್, ಎಂ.ಎನ್.ಗುಂಡಪ್ಪ, ಜೆ.ಎಂ.ಸುರೇಶ್, ಶಬ್ಬೀರ್, ಎಂ.ಜೆ.ಮನೋಜ್, ಶೈಲಾ, ಮುದಾಸೀರ್, ದೇವಾಲಯ ವ್ಯವಸ್ಥಾಪಕ ಮಂಜುನಾಥ್ ಹಾಜರಿದ್ದರು.
.
