ಚಿಕ್ಕಬಳ್ಳಾಪುರ: ಕೇಂದ್ರದ ಬಿಜೆಪಿ ಸರ್ಕಾರವು ಕಳೆದ ೧೦ ವರ್ಷಗಳಲ್ಲಿ ಕೈಗೊಂಡಿರುವ ನಿರ್ಣಯಗಳು ಬಹುಸಂಖ್ಯಾತರ ವಿರುದ್ಧವಾಗಿರುವುದರಿಂದ ಪ್ರಸ್ತುತದ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಕಿತ್ತೆಸೆಯಲು ಬಹುಸಂಖ್ಯಾತರು ತೀರ್ಮಾನಿಸಿರುವುದಾಗಿ ಮುಖಂಡ ಸುಧಾ ವೆಂಕಟೇಶ್ ತಿಳಿಸಿದರು.
ಬಿಜೆಪಿ ಸರ್ಕಾರವು ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ದಲಿತರ ವಿರೋಧಿ ಧೊರಣೆಗಳನ್ನು ಅನುಸರಿಸುವ ಜೊತೆಗೆ ಸಂವಿಧಾನ ಬದಲಾವಣೆ ಹೇಳಿಕೆಗಳನ್ನು ನೀಡುತ್ತಿದೆ. ದೇಶದಲ್ಲಿನ ಶೋಷಿತರ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿ ಬೂಟಾಟಿಕೆ ಮಾತುಗಳನ್ನು ಹೇಳಿ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ದೇಶದ ಒಕ್ಕೂಟ ವ್ಯವಸ್ಥೆ ಬಲಪಡಿಸಿ ಸರ್ವರಿಗೂ ಸಮಾನ ಅವಕಾಶ ಕಲ್ಪಿಸಿರುವ ಸಂವಿಧಾನ ರಕ್ಷಣೆ ಮಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವವಾಗಿದೆ. ಆದರಿಂದ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅವರ ಪರ ಮತಯಾಚನೆ ನಡೆಸುತ್ತಿದ್ದು, ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ದಲಿತ ಮುಖಂಡ ಬಿ.ವಿ.ಆನಂದ್ ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಬಳಿಕ ದಿನನಿತ್ಯದ ವಸ್ತುಗಳ ಬೆಲೆಯು ಗಗನಕ್ಕೇರಿದೆ, ರೈತರು ಬಳಸುವ ರಸಗೊಬ್ಬರ ಬೆಲೆ ಜಾಸ್ತಿಯಾಗಿದೆ ಜೊತೆಗೆ ಕೇವಲ ರಾಮಮಂದಿರಾ ಕಟ್ಟಿ ನಮ್ಮ ಸಾಧನೆ ಎಂದು ಹೇಳಿಕೊಳ್ಳುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ನೀಡಿ ಬಡವರ ಹೊಟ್ಟೆ ತುಂಬಿಸುತ್ತಿದೆ. ಆದರಿಂದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದರು.
ಮುಖಂಡ ಗಾನ ಅಶ್ವತ್ಥ್ ಮಾತನಾಡಿ, ಬಿಜೆಪಿಗರೇ ಸಂವಿಧಾನ ಬದಲಾವಣೆಯ ಕುರಿತು ಮಾತುನಾಡುತ್ತಿದ್ದರೂ ಪ್ರಧಾನಿ ಮೋದಿ ಚಕಾರ ಎತ್ತದಿರುವುದೇ ಅವರ ಶೋಷಿತರ ಪರ ಇರುವ ಕಾಳಜಿ ತೋರುವುದು. ಕೀಳು ಮಟ್ಟದ ರಾಜಕೀಯ ಮಾಡಿತ್ತಿರುವ ಬಿಜೆಪಿಯನ್ನು ಕೆಳಗಿಳಿಸಿ ದೇಶದ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್‌ಗೆ ಬೆಂಬಲ ನೀಡುವುದಾಗಿ ಹೇಳಿದರು.
ತಿಪ್ಪೇನಹಳ್ಳಿ ನಾರಾಯಣ, ವೆಂಕಟರೋಣಪ್ಪ, ಶ್ರೀನಿವಾಸ್, ಗೌತಮ್, ಗಂಗಾಧರ್, ಸೊಪ್ಪಳ್ಳಿ ಮೂರ್ತಿ, ಕಂಗಾನಹಳ್ಳಿ ನಾರಾಯಣಸ್ವಾಮಿ ಇದ್ದರು.

