PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಲೋಕಸಭೆ ಚುನಾವಣೆಗೆ 100 ದಿನಗಳ ರೋಡ್‌ ಮ್ಯಾಪ್‌ ರಚಿಸಿದ ಬಿಜೆಪಿ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ರಾಜಕೀಯ > ಲೋಕಸಭೆ ಚುನಾವಣೆಗೆ 100 ದಿನಗಳ ರೋಡ್‌ ಮ್ಯಾಪ್‌ ರಚಿಸಿದ ಬಿಜೆಪಿ
ರಾಜಕೀಯ

ಲೋಕಸಭೆ ಚುನಾವಣೆಗೆ 100 ದಿನಗಳ ರೋಡ್‌ ಮ್ಯಾಪ್‌ ರಚಿಸಿದ ಬಿಜೆಪಿ

Prathinidhi News
Last updated: January 9, 2024 9:40 am
Prathinidhi News
Published January 9, 2024
Share
SHARE

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯನ್ನು ಎದುರಿಸಲು ಸಿದ್ಧತಾ ಕಾರ್ಯ ಆರಂಭಿಸಿದ ಬಿಜೆಪಿ ನಾಯಕರು ಸೋಮವಾರ ಬೆಂಗಳೂರಿನಲ್ಲಿ ಲೋಕಸಭಾ ಚುನಾವಣಾ ಬೈಠೆಕ್‌ ಸಭೆಯಲ್ಲಿ 100 ದಿನಗಳ ಪ್ರಚಾರದ ರೋಡ್‌ ಮ್ಯಾಪ್‌ ಸಿದ್ಧಪಡಿಸಲಾಗಿದೆ. ಜೊತೆಗೆ, ಶೀಘ್ರವೇ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಘೋಷಣೆ ಮಾಡುವುದು ಹಾಗೂ 28 ಕ್ಷೇತ್ರಗಳಲ್ಲಿಯೂ ಗೆಲ್ಲುವುದರ ಬಗ್ಗೆ ಚರ್ಚಿಸಲಾಗಿದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.

ಬೆಂಗಳೂರಿನಲ್ಲಿ ನಡೆದ ಬಿಜೆಪಿ ನಾಯಕರ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆಯಿಂದ ಇಡೀ ದಿನ ಯೋಜನಾ ಬೈಠೆಕ್ ಸಭೆ ನಡೆದಿದೆ. ರಾಜ್ಯದಲ್ಲಿ  28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಲು, ನಿರ್ಣಯಿಸಬೇಕಾದ ರೂಪುರೇಷೆಗಳು, ಯಾವ ವಿಷಯ ಕೈಗೆತ್ತಿಕೊಳ್ಳಬೇಕು, ಸಮನ್ವಯತೆ ಹೇಗೆ ಇರುಬೇಕು ಎಂದು ಚಿಂತನೆ ಮತ್ತು ಚರ್ಚೆ ಮಾಡಿದ್ದೇವೆ. ದೇಶ ಹಾಗೂ ರಾಜ್ಯದ ಜನತೆಗೆ ಮೋದಿ ಗ್ಯಾರಂಟಿಯೇ ಭರವಸೆ. ರಾಜ್ಯದ ಜನರು ಈ ಬಾರಿ ನೂರಕ್ಕೆ ನೂರರಷ್ಟು ಗೆಲ್ಲಿಸುವ ವಿಶ್ವಾಸ ಇದೆ. ಆದ್ದರಿಂದ ಚುನಾವಣಾ ಪ್ರಚಾರಕ್ಕೆ 100 ದಿನಗಳ ರೋಡ್ ಮ್ಯಾಪ್ ತಯಾರಿಸಿದ್ದೇವೆ. ಇದಕ್ಕೆ ಅನುಗುಣವಾಗಿ ನಿರಂತರ ಸಭೆ, ಕಾರ್ಯಚಟುವಟಿಕೆ ಗಳನ್ನು ನಡೆಸುತ್ತೇವೆ ಎಂದು ತಿಳಿಸಿದರು.

ಜಿಲ್ಲಾಧ್ಯಕ್ಷರ ಆಯ್ಕೆ ಪಟ್ಟಿ ಶೀಘ್ರ ಘೋಷಣೆ: ಜಿಲ್ಲಾಧ್ಯಕ್ಷರ ಆಯ್ಕೆ ಈಗಾಗಲೇ ಅಭಿಪ್ರಾಯ ಸಂಗ್ರಹ ಆಗಿದೆ. ಶೀಘ್ರವೇ ಘೋಷಣೆ ಆಗಲಿದೆ. 28 ಲೋಕಸಭಾ ಕ್ಷೇತ್ರಗಳ ಕುರಿತು ಹೈಕಮಾಂಡ್ ಗೆ ವರದಿ ಸಲ್ಲಿಕೆ ಮಾಡುವ ಬಗ್ಗೆ ಜನವರಿ 10 ಮತ್ತು ಜ.13 ರಂದು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ಲೋಕಸಭೆ ಅಭ್ಯರ್ಥಿಗಳ ಬಗ್ಗೆ ವರದಿಗಳನ್ನು ಪಡೆದು ಚರ್ಚೆ ಮಾಡಲಾಗುತ್ತದೆ. ಆ ನಂತರ ಅದನ್ನು ವರಿಷ್ಠರಿಗೆ ಕಳುಹಿಸುವ ನಿರ್ಣಯ ಆಗುತ್ತದೆ ಎಂದು ಮಾಜಿ ಸಚಿವ ಸಿ.ಟಿ. ರವಿ ಮಾಹಿತಿ ನೀಡಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಚುನಾವಣೆಮಂಡ್ಯಮುಖಪುಟರಾಜಕೀಯ

PODCAST : ಮಂಡ್ಯದಿಂದ ಕುಮಾರಸ್ವಾಮಿ ಸ್ಪರ್ಧೆಗೆ ಜೆಡಿಎಸ್ ನಾಯಕರ ಒತ್ತಾಯ

March 7, 2024
ಮುಖಪುಟಮೈಸೂರು ನಗರರಾಜಕೀಯ

ಧರ್ಮಸ್ಥಳದ ಕೇಸ್ NIA ಗೆ ವಹಿಸಲ್ಲ.! ದಸರಾ ಒಂದು ಜಾತಿ, ಧರ್ಮಕ್ಕೆ ಸೀಮಿತವಲ್ಲ : ಗೃಹಸಚಿವ ಜಿ ಪರಮೇಶ್ವರ್‌

August 25, 2025
ಬೆಂಗಳೂರುಮುಖಪುಟರಾಜಕೀಯ

ಕಾರ್ಮಿಕ ಇಲಾಖೆ ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಿದ ರಾಜ್ಯ ಸರ್ಕಾರ

July 18, 2025
ಮುಖಪುಟರಾಜಕೀಯ

ಪಕ್ಷದವರನ್ನು ಹಾಸನಕ್ಕೆ ಕರೆದೊಯ್ದು ಸಂತ್ರಸ್ತೆಯರಿಗೆ ಧೈರ್ಯ ತುಂಬುವ ಕೆಲಸ ಅಶೋಕ ಮಾಡಲಿ: ಡಿಕೆ ಶಿವಕುಮಾರ್

May 2, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?