ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್ ನ ಶಾಸಕರು ಯಾರೂ ಇದಕ್ಕೆ ಬಗ್ಗಿಲ್ಲ.136 ಸ್ಥಾನವಿದ್ದರೂ ಬಿಜೆಪಿ ಸರ್ಕಾರ ಅಲ್ಲಾಡಿಸಲು ಪ್ರಯತ್ನ ಪಡುತ್ತಿದೆ. ಸರ್ಕಾರಗಳನ್ನು ಬೀಳಿಸುವುದು ಅಭ್ಯಸವಾಗಿ ಹೋಗಿದೆ. ನೇರವಾಗಿ ಅವರು ಯಾವತ್ತೂ ಚುನಾವಣೆ ಮಾಡಿಯೇ ಇಲ್ಲ. ದೇಶದ ಬೇರೆ ಬೇರೆ ಭಾಗಗಳಲ್ಲಿ ಸರ್ಕಾರ ಅಂತಂತ್ರ ಮಾಡುವ ರೀತಿ ಕರ್ನಾಟಕದಲ್ಲೂ ನಡೆದಿರುವುದು ಸತ್ಯ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.
![](https://www.prathinidhi.net/wp-content/uploads/2024/02/siddaramaiah123-1.webp)