ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ ಮುಂದಾದ ಹಿನ್ನೆಲೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ, ಕಾಗೇರಿ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದರು.
ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿರುವುದನ್ನ ಖಂಡಿಸಿ ಮಾಜಿ ಸಿಎಂ ಬಿಎಸ್ ವೈ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಪ್ರತಿಭಟನೆ ವೇಳೆ ಮಾತನಾಡಿದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ನಿಮಗೆ ಯೋಗ್ಯತೆ ಇದ್ದರೆ ಸಮಸ್ಯೆ ಪರಿಹಾರ ಮಾಡಿ. ಇಲ್ಲದಿದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ. ಎಲ್ಲರೂ ಸೇರಿ ನಾವು ಬೆಂಗಳೂರಿನಲ್ಲಿ ದೊಡ್ಡ ಹೋರಾಟ ಮಾಡುತ್ತೇವೆ. ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಬೇಕು ಅಂತಾ ದೇವೇಗೌಡರು ಕೂಡಾ ಹೇಳಿದ್ದಾರೆ. ಕಾಂಗ್ರೆಸ್ ಮುಖಂಡರು ತಮಿಳುನಾಡು ಏಜೆಂಟರಂತೆ ವರ್ತನೆ ಖಂಡನೀಯ ಎಂದು ಆಕ್ರೋಶ ಹೊರ ಹಾಕಿದರು.
ಇನ್ನು ಪ್ರತಿಭಟನಾನಿರತ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೋಳ ಸೇರಿ ಬಿಜೆಪಿ ನಾಯಕರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.