PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ
ಮುಖಪುಟಮೈಸೂರು ನಗರರಾಜಕೀಯ

ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ

Prathinidhi News
Last updated: December 9, 2025 3:24 pm
Prathinidhi News
Published December 9, 2025
Share
SHARE

ಮೈಸೂರು, ಡಿಸೆಂಬರ್‌ 9, 2025 : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವತಿಯಿಂದ ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕಗಳು ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದವು.

ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಸರ್ಕಾರದ ಕ್ರಮಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಕ್ಷಣ ಸರಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಹರ್ಷವರ್ಧನ್‌, ಒಳ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ. ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಲು ಮುಂದಾಗಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ನಮ್ಮ ಸಂವಿಧಾನದ ಪ್ರಕಾರ ಕೇವಲ ಮೀಸಲಾತಿ ನೀಡಲು ಮಾತ್ರ ಅವಕಾಶವಿದೆ. ಒಳ‌ ಮೀಸಲಾತಿ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುತ್ತೇವೆಂದು ಹೇಳುವ ಮೂಲಕ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಅಲೆಮಾರಿ ಸೇರಿದಂತೆ ಹಲವು ಹಿಂದುಳಿದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಸರಿ ಪಡಿಸಬೇಕು ಎಂದು ಆಗ್ರಹಿಸಿದರು.

- ಜಾಹೀರಾತು -

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಮಾಜಿ ಮೇಯರ್ ಶಿವಕುಮಾರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸದಾನಂದ, ಮಾಜಿ ನಗರಪಾಲಿಕೆ ಸದಸ್ಯ ಪ್ರಶಾಂತ್ ಗೌಡ ಇವರ ಜೊತೆಗೆ ಪಕ್ಷದ ಹಲವು ಮಹಿಳಾ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪ್ರತಿಭಟನೆಯುದ್ದಕ್ಕೂ ರಾಜ್ಯ ಸರ್ಕಾರದ ರೈತಪರ ಕಾಳಜಿಯ ಕೊರತೆಯ ಬಗ್ಗೆ ನಾಯಕರು ಟೀಕಿಸಿದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಮೈಸೂರು ಫ್ಲೈ ಓವರ್ ವಿರೋಧಿಸಿ ಕಾನೂನಾತ್ಮಕ ಹೋರಾಟ : ಸಂಸದ ಯದುವೀರ್ ಎಚ್ಚರಿಕೆ

November 5, 2025
ಮುಖಪುಟಮೈಸೂರು ನಗರ

ಮೈಸೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿಸೆಂಬರ್ 11ಕ್ಕೆ ಮೈಸೂರು ಚಲೋ!

December 3, 2025
ಬೆಂಗಳೂರುಮುಖಪುಟ

ಕೆನಡಾ: ದುಷ್ಕರ್ಮಿಗಳ ಗುಂಡಿನ ದಾಳಿಗೆ ಬೆಂಗಳೂರು ಮೂಲದ ಕನ್ನಡಿಗ ಬಲಿ !

February 9, 2026
ಮುಖಪುಟಮೈಸೂರು ನಗರಸಿನಿಮಾ

ಚಿತ್ರ ನಗರಿ ನಿರ್ಮಾಣದಿಂದ ಚಿತ್ರರಂಗಕ್ಕೆ ಮತ್ತಷ್ಟು ಪ್ರೋತ್ಸಾಹ : ಪ್ರಶಸ್ತಿ ಸಮಾರಂಭದಲ್ಲಿ ನಟ ರಿಷಬ್ ಶೆಟ್ಟಿ ಮಾತು

November 4, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?