ಬೆಂಗಳೂರು: ಆಯುಧ ಪೂಜೆ ಹಾಗೂ ವಿಜಯದಶಮಿ ಹಬ್ಬ ಹಿನ್ನಲೆ ಪ್ರಯಾಣಿಕರ ಅನುಕೂಲಕ್ಕೆ ಬಿಎಂಟಿಸಿ ಹೊಸ ಪ್ಲಾನ್ ರೂಪಿಸಿದೆ. ಹೌದು, ಅಕ್ಟೋಬರ್ 23-24 ರಂದು ದಸರಾ ಹಬ್ಬದ ಪ್ರಯುಕ್ತ ಹೊರ ಜಿಲ್ಲೆಗಳಿಗೂ ಬಿಎಂಟಿಸಿ ಬಸ್ ಸಂಚಾರ ಮಾಡಲಿದೆ. ಹಬ್ಬದ ಪ್ರಯುಕ್ತ ಬೆಂಗಳೂರಿನಿಂದ ಹೊರ ಊರುಗಳಿಗೆ ಹೋಗುವ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಇಷ್ಟು ದಿನ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮಾತ್ರ ಸಂಚಾರ ಮಾಡುತ್ತಿದ್ದ ಬಿಎಂಟಿಸಿ ಬಸ್ಗಳು, ಅ.21, 22, 23 ವರೆಗೆ ಪ್ರಯಾಣಿಕರ ಅನುಕೂಲಕ್ಕೆ ವಿವಿಧ ಜಿಲ್ಲೆಗಳಿಗೆ ಬಿಎಂಟಿಸಿ ಬಸ್ ಗಳ ಕಾರ್ಯಾಚರಣೆ ಮಾಡಲು ನಿರ್ಧಾರ ಮಾಡಿದೆ.