ಮೈಸೂರು, ಫೆಬ್ರವರಿ 27, 2026 : ರಾಜ್ಯದ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನ್ಮದಿನದ ಅಂಗವಾಗಿ ಇಂದು ನಗರದ ಬಿಜೆಪಿ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ಘಟಕದ ವತಿಯಿಂದ ಅದ್ಧೂರಿ ಸಂಭ್ರಮಾಚರಣೆ ನಡೆಯಿತು.
ಪಕ್ಷದ ಕಚೇರಿ ಮುಂಭಾಗದಲ್ಲಿ ನೆರೆದಿದ್ದ ನೂರಾರು ಕಾರ್ಯಕರ್ತರು ಮತ್ತು ಮುಖಂಡರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಳ್ಳುವ ಮೂಲಕ ತಮ್ಮ ನೆಚ್ಚಿನ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದರು. ಈ ಸಂದರ್ಭದಲ್ಲಿ “ಯಡಿಯೂರಪ್ಪ ಅವರಿಗೆ ಜಯವಾಗಲಿ” ಎಂಬ ಘೋಷಣೆಗಳು ಮೊಳಗಿದವು. ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಈ ವೇಳೆ ಮಾತನಾಡಿ, ಯಡಿಯೂರಪ್ಪ ಅವರ ರಾಜಕೀಯ ಹೋರಾಟ ಮತ್ತು ಪಕ್ಷಕ್ಕೆ ಅವರು ನೀಡಿದ ಕೊಡುಗೆಯನ್ನು ಸ್ಮರಿಸಿದರು.
ಈ ಸಂಭ್ರಮಾಚರಣೆಯಲ್ಲಿ ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಸಂಸದ ಪ್ರತಾಪ್ ಸಿಂಹ, ನಗರ ಪ್ರಧಾನ ಕಾರ್ಯದರ್ಶಿಗಳಾದ ಬಿ.ಎಂ. ರಘು ಮತ್ತು ಸೋಮಸುಂದರ್, ಪರಿಕ್ಷಿತ್ ರಾಜ ಅರಸ್ ಹಾಗೂ ಮಾಜಿ ಮಹಾಪೌರ ಶಿವಕುಮಾರ್ ಭಾಗವಹಿಸಿದ್ದರು.
ಅಲ್ಲದೆ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ಚಾಮರಾಜ ಕ್ಷೇತ್ರ ಅಧ್ಯಕ್ಷ ದಿನೇಶ್ ಗೌಡ, ಕೃಷ್ಣರಾಜ ಕ್ಷೇತ್ರ ಅಧ್ಯಕ್ಷ ಗೋಪಾಲ್ ರಾಜ್, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷ ರಾಕೇಶ್ ಭಟ್, ವಿಶ್ವೇಶ್ವರಯ್ಯ, ಪ್ರಧಾನ ಕಾರ್ಯದರ್ಶಿ ಜಯರಾಮ್ ಹಾಗೂ ಮಾಜಿ ನಗರ ಪಾಲಿಕೆ ಸದಸ್ಯರಾದ ಎಂ.ವಿ. ರಾಮಪ್ರಸಾದ್, ಎಂ.ಡಿ. ಪಾರ್ಥಸಾರಥಿ, ಜೋಗಿ ಮಂಜು, ಕಾರ್ತಿಕ್ ಮರಿಯಪ್ಪ, ಪುನೀತ್, ಲೀಲಾ ಶೆಣೈ, ಸವಿತಾ ಗೌಡ ಸೇರಿದಂತೆ ಹಲವು ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದು ಶುಭ ಕೋರಿದರು.
