PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಕೋಲಾರದ ಬಸ್‌ ಅಪಘಾತ ; ನಾಲ್ವರು ಮೃತ, ಓರ್ವ ಮಹಿಳೆ ಸ್ಥಿತಿ ಗಂಭೀರ.!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಜಿಲ್ಲೆ > ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಕೋಲಾರದ ಬಸ್‌ ಅಪಘಾತ ; ನಾಲ್ವರು ಮೃತ, ಓರ್ವ ಮಹಿಳೆ ಸ್ಥಿತಿ ಗಂಭೀರ.!
ಜಿಲ್ಲೆಮುಖಪುಟ

ಓಂ ಶಕ್ತಿ ದರ್ಶನಕ್ಕೆ ತೆರಳಿದ್ದ ಕೋಲಾರದ ಬಸ್‌ ಅಪಘಾತ ; ನಾಲ್ವರು ಮೃತ, ಓರ್ವ ಮಹಿಳೆ ಸ್ಥಿತಿ ಗಂಭೀರ.!

Prathinidhi News
Last updated: January 9, 2025 2:55 pm
Prathinidhi News
Published January 9, 2025
Share
SHARE

ಕೋಲಾರ, ಜನವರಿ 9, 2025 : ತಮಿಳುನಾಡಿನ ರಾಣಿಪೇಟೆ ಬಳಿ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಭೀಕರ ರಸ್ತೆ ಅಪಘಾತದಲ್ಲಿ ಕೋಲಾರದ ನಾಲ್ವರು ಮೃತಪಟ್ಟಿದ್ದಾರೆ. ಓಂ ಶಕ್ತಿ ದರ್ಶನ ಪಡೆದು 50 ಮಂದಿ ಭಕ್ತರು ಕೋಲಾರಕ್ಕೆ ವಾಪಸ್ಸಾಗುವಾಗ ಅಪಘಾತ ಸಂಭವಿಸಿದೆ. ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.ಗಾಯಾಳುಗಳನ್ನು ವೇಲೂರು ಸಿಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕ್ಯಾಂಟರ್ ಚಾಲಕ ಮಂಜುನಾಥ್, ಕ್ಲೀನರ್ ಶಂಕರ್, ಸಹಾಯಕ ಸೋಮಶೇಖರ್, ವೆಂಕಟೇಶ್ ನಗರ ಗ್ರಾಮದ ರೈತ ಕೃಷ್ಣಪ್ಪ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ನಲ್ಲೂರು ಗ್ರಾಮದ ಸರಸ್ವತಮ್ಮ ಸ್ಥಿತಿ ಗಂಭೀರವಾಗಿದೆ.

ಮುಳಬಾಗಿಲು ತಾಲೂಕಿನ ನಲ್ಲೂರು ಗ್ರಾಮದ 50 ಮಂದಿ ಭಕ್ತರು ಕೆಎಸ್​ಆರ್​​ಟಿಸಿ ಬಸ್​ನಲ್ಲಿ ತಮಿಳುನಾಡಿನ ಮೇಲ್ಮರವತ್ತೂರು ಓಂ ಶಕ್ತಿ ದೇವಾಲಯಕ್ಕೆ ಪ್ರವಾಸ ಹೋಗಿ ವಾಪಸಾಗುತ್ತಿದ್ದರು. ಕ್ಯಾಂಟರ್ ಶ್ರೀನಿವಾಸಪುರ ತಾಲೂಕು ಸೀಗೆಹಳ್ಳಿ ಗ್ರಾಮದಿಂದ ಚೆನೈಗೆ ತರಕಾರಿ ತುಂಬಿಕೊಂಡು ಹೋಗುತ್ತಿತ್ತು.

ಬುಧವಾರ ರಾತ್ರಿ ತಮಿಳುನಾಡಿನ ರಾಣಿಪೇಟೆ ಬಳಿ ಕೆಎಸ್​ಆರ್​ಟಿಸಿ ಮತ್ತು ಕ್ಯಾಂಟರ್​ ನಡುವೆ ಅಪಘಾತ ಸಂಭವಿಸಿದೆ. ರಾಣಿಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆ

ಚೆನ್ನೈ ಪ್ಲೇ ಆಫ್ ಹಾದಿ ಕಠಿಣ..! ಧೋನಿ ಬಳಗಕ್ಕೆ ಕೈ ಕೊಟ್ಟ ಅದೃಷ್ಟ !

April 21, 2025
ಮುಖಪುಟ

ಹಾಸನ, ಕೊಡಗು ಸೇರಿ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದು ಮಳೆ ಸಾಧ್ಯತೆ

March 24, 2024
ಮುಖಪುಟಮೈಸೂರು ಗ್ರಾಮಾಂತರ

ಸತತವಾಗಿ ಸುರಿದ ಮಳೆಗೆ ಕುಸಿದು ಬಿದ್ದ ತಂಬಾಕು ಬ್ಯಾರೆನ್‌, ಪ್ರಾಣಾಪಾಯದಿಂದ ಪಾರಾದ ರೈತರು.

August 8, 2024
ಮುಖಪುಟಮೈಸೂರು ನಗರರಾಜಕೀಯ

ಪೆಹಲ್ಗಾಮ್‌ ದಾಳಿ ಖಂಡಿಸಿ ಮೈಸೂರಿನಲ್ಲಿ ಕನ್ನಡಪರ ಹಾಗೂ ಒಕ್ಕಲಿಗ ಸಂಘಟನೆಗಳಿಂದ ಪ್ರತಿಭಟನೆ..!

April 28, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?