ಟಿವಿಎಸ್ ಎಕ್ಸೆಲ್ ದ್ವಿಚಕ್ರ ವಾಹನಕ್ಕೆ ಹಿಂದಿನಿಂದ ವೇಗವಾಗಿ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ನ ಚಕ್ರ ಉರುಳಿ ಮಹಿಳೆ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಳಿಮಾವು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶ್ಯಾನಭೋಗನಹಳ್ಳಿ ನಿವಾಸಿ ಸೆಲ್ವಿ(48) ಮೃತ ದುರ್ದೈವಿ. ಈಕೆಯ ಪತಿ ಜೈಶಂಕರ್ ಸಣ್ಣಪುಟ್ಟ ಗಾಯಗಳಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬನ್ನೇರುಘಟ್ಟ ಮುಖ್ಯರಸ್ತೆಯ ಮೀನಾಕ್ಷಿ ಮಾಲ್ ಬಳಿ ಗುರುವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
