ಮೈಸೂರು, ನವೆಂಬರ್ 14, 2025 : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ ಹಿನ್ನೆಲೆಯಲ್ಲಿ ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ಕಳೆಗಟ್ಟಿತು.

NDA ಜಯದತ್ತ ಮುನ್ನುಗ್ಗುತ್ತಿದ್ದಂತೆಯೇ, ಮೈಸೂರಿನ ಬಿಜೆಪಿ ಕಾರ್ಯಕರ್ತರು ಪಕ್ಷದ ಕಚೇರಿ ಮುಂದೆ ಜಮಾಯಿಸಿ ಸಂಭ್ರಮಿಸಿದರು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ತಮ್ಮ ಸಂತೋಷವನ್ನು ಹಂಚಿಕೊಂಡರು. ಸಂಭ್ರಮಾಚರಣೆಯಲ್ಲಿ ಶಾಸಕ ಶ್ರೀವತ್ಸ, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ ಸೇರಿದಂತೆ ಹಲವು ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಬಿಜೆಪಿ ಕಾರ್ಯಕರ್ತರು “ಭಾರತ್ ಮಾತಾ ಕೀ ಜೈ” ಎಂದು ಘೋಷಣೆ ಕೂಗಿ ತಮ್ಮ ಸಂಭ್ರಮವನ್ನು ವ್ಯಕ್ತಪಡಿಸಿದರು.
