PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೊಸರಾಮನಹಳ್ಳಿಯಲ್ಲಿ ಶ್ರೀ ಈರಣ್ಣೇಶ್ವರ ಹಬ್ಬದ ಸಂಭ್ರಮ: ಶಾಸಕ ಜಿ.ಡಿ. ಹರೀಶ್ ಗೌಡರಿಂದ ಪೂಜೆ ಸಲ್ಲಿಕೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹೊಸರಾಮನಹಳ್ಳಿಯಲ್ಲಿ ಶ್ರೀ ಈರಣ್ಣೇಶ್ವರ ಹಬ್ಬದ ಸಂಭ್ರಮ: ಶಾಸಕ ಜಿ.ಡಿ. ಹರೀಶ್ ಗೌಡರಿಂದ ಪೂಜೆ ಸಲ್ಲಿಕೆ
ಮುಖಪುಟಮೈಸೂರು ಗ್ರಾಮಾಂತರರಾಜಕೀಯಸನ್ನಿಧಾನ

ಹೊಸರಾಮನಹಳ್ಳಿಯಲ್ಲಿ ಶ್ರೀ ಈರಣ್ಣೇಶ್ವರ ಹಬ್ಬದ ಸಂಭ್ರಮ: ಶಾಸಕ ಜಿ.ಡಿ. ಹರೀಶ್ ಗೌಡರಿಂದ ಪೂಜೆ ಸಲ್ಲಿಕೆ

Prathinidhi News
Last updated: January 12, 2026 3:46 pm
Prathinidhi News
Published January 12, 2026
Share
SHARE

ಹುಣಸೂರು, ಜನವರಿ 12, 2026 : ತಾಲೂಕಿನ ಹೊಸರಾಮನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಶ್ರೀ ಈರಣ್ಣೇಶ್ವರ ಸ್ವಾಮಿಯ ಹಬ್ಬದ ಪ್ರಯುಕ್ತ ಹುಣಸೂರು ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಜಿ.ಡಿ. ಹರೀಶ್ ಗೌಡರು ಗ್ರಾಮಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.

 ಶಾಸಕರು ಮೈಮುಲ್ ನಿರ್ದೇಶಕರಾದ ಶ್ರೀ ಕೆ.ಎಸ್. ಕುಮಾರ್ ಅವರೊಂದಿಗೆ ಹೊಸರಾಮನಹಳ್ಳಿಯ ಈರಣ್ಣ ಕಟ್ಟೆಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಗ್ರಾಮದ ದೇವಸ್ಥಾನದ ಅಭಿವೃದ್ಧಿ ಹಾಗೂ ಹಬ್ಬದ ಹಿನ್ನೆಲೆಯಲ್ಲಿ ಗ್ರಾಮಸ್ಥರೊಂದಿಗೆ ಶಾಸಕರು ಕೆಲಕಾಲ ಸಮಾಲೋಚನೆ ನಡೆಸಿದರು.

 ಹಬ್ಬದ ಸಡಗರದ ನಡುವೆಯೇ ಗ್ರಾಮದ ಪ್ರಗತಿಯತ್ತ ಗಮನಹರಿಸಿದ ಶಾಸಕರು, ಗ್ರಾಮದಲ್ಲಿ ಬಾಕಿ ಇರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಗ್ರಾಮಸ್ಥರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅಗತ್ಯ ಸೌಲಭ್ಯಗಳನ್ನು ಒದಗಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಿದರು.

ಈ ಸಂದರ್ಭದಲ್ಲಿ ಜೆ.ಡಿ(ಎಸ್) ಮುಖಂಡ ಎಸ್. ಲೋಕೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಆರ್.ಬಿ, ಮಾಜಿ ಅಧ್ಯಕ್ಷರುಗಳಾದ ಸೋಮಶೇಖರ್, ಶಿವಕುಮಾರ್, ಯೋಗಾವತಿ ಜಯರಾಮ್ ಹಾಗೂ ಟಿಎಪಿಸಿಎಂಎಸ್ ನಿರ್ದೇಶಕ ಸೋಮಶೇಖರ್ ಉಪಸ್ಥಿತರಿದ್ದರು.

- ಜಾಹೀರಾತು -

ಅಲ್ಲದೆ ಜೆ.ಡಿ.(ಎಸ್) ಮುಖಂಡರಾದ ನಾರಾಯಣ, ಮಂಜು, ಸಿದ್ದರಾಜು, ಸಿಲ್ಕ್ ಲೋಕೇಶ್, ಗ್ರಾಮದ ಯಜಮಾನರುಗಳು, ನಿವೃತ್ತ ನೌಕರರು, ಪಿಡಿಓ ಪರಶುರಾಮ್ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮದ ಯುವ ಮಿತ್ರರು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಪ್ರವಾಸಿ ತಾಣಗಳಲ್ಲಿ ಕಟ್ಟೆಚ್ಚರ: ಅರಮನೆ ಆವರಣದಲ್ಲಿ ಪೊಲೀಸ್ ತಪಾಸಣೆ ತೀವ್ರ

December 29, 2025
ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ

January 17, 2026
ಮುಖಪುಟಮೈಸೂರು ನಗರರಾಜಕೀಯ

ರಾಜ್ಯ ರಾಜಕಾರಣಕ್ಕೆ ಅಧಿಕೃತವಾಗಿ ಅಡಿಪಾಯ ಹಾಕಿದ ಮಾಜಿ ಸಂಸದ ಪ್ರತಾಪ್‌ ಸಿಂಹ : ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರಕ್ಕೆ ಎಂಟ್ರಿ

January 5, 2026
ಮುಖಪುಟಮೈಸೂರು ನಗರ

ಪೌರಕಾರ್ಮಿಕರ ಜೊತೆ ಸಂಕ್ರಾಂತಿ ಹಬ್ಬ ಸಡಗರದಿಂದ ಆಚರಿಸಿದ ಪ್ರತಾಪ್ ಸಿಂಹ ಸ್ನೇಹ ಬಳಗ

January 13, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?