PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಚಾಮರಾಜನಗರ: ಉಪ ಲೋಕಾಯುಕ್ತರ ಮಿಂಚಿನ ರೌಂಡ್ಸ್ ; ಆಸ್ಪತ್ರೆ, ಹಾಸ್ಟೆಲ್, ನಗರ ಸ್ವಚ್ಛತೆ ಬಗ್ಗೆ ಅಸಮಾಧಾನ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಚಾಮರಾಜನಗರ > ಚಾಮರಾಜನಗರ: ಉಪ ಲೋಕಾಯುಕ್ತರ ಮಿಂಚಿನ ರೌಂಡ್ಸ್ ; ಆಸ್ಪತ್ರೆ, ಹಾಸ್ಟೆಲ್, ನಗರ ಸ್ವಚ್ಛತೆ ಬಗ್ಗೆ ಅಸಮಾಧಾನ
ಚಾಮರಾಜನಗರಮುಖಪುಟ

ಚಾಮರಾಜನಗರ: ಉಪ ಲೋಕಾಯುಕ್ತರ ಮಿಂಚಿನ ರೌಂಡ್ಸ್ ; ಆಸ್ಪತ್ರೆ, ಹಾಸ್ಟೆಲ್, ನಗರ ಸ್ವಚ್ಛತೆ ಬಗ್ಗೆ ಅಸಮಾಧಾನ

Prathinidhi News
Last updated: November 29, 2025 11:49 am
Prathinidhi News
Published November 29, 2025
Share
SHARE

ಚಾಮರಾಜನಗರ: ಉಪ ಲೋಕಾಯುಕ್ತರಾದ ಫಣೀಂದ್ರ ಅವರು ಇಂದು ಬೆಳ್ಳಂಬೆಳಗ್ಗೆ ಚಾಮರಾಜನಗರ ನಗರದ ವಿವಿಧ ಸರ್ಕಾರಿ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಹಾಸ್ಟೆಲ್‌ಗಳಲ್ಲಿನ ಅವ್ಯವಸ್ಥೆ ಮತ್ತು ನಗರದ ಕಳಪೆ ಸ್ವಚ್ಛತೆಯ ಬಗ್ಗೆ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Contents
ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ: ವೈದ್ಯರ ವಿರುದ್ಧ ಅಸಮಾಧಾನಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ

ತಾಯಿ-ಮಕ್ಕಳ ಆಸ್ಪತ್ರೆಗೆ ಭೇಟಿ: ವೈದ್ಯರ ವಿರುದ್ಧ ಅಸಮಾಧಾನ

ತಾಯಿ ಹಾಗೂ ಮಕ್ಕಳ ಆಸ್ಪತ್ರೆಗೆ ಭೇಟಿ ನೀಡಿದ ಉಪ ಲೋಕಾಯುಕ್ತರು, ವೈದ್ಯರ ಕಾರ್ಯವೈಖರಿ ಬಗ್ಗೆ ಕೆಲವು ಲೋಪಗಳನ್ನು ಗಮನಿಸಿದರು. ವೈದ್ಯರು ಸ್ಕ್ಯಾನಿಂಗ್ ಸೇರಿದಂತೆ ಕೆಲವು ಟ್ಯಾಬ್ಲೆಟ್‌ಗಳನ್ನು ಹೊರಗಿನಿಂದ ಬರೆದುಕೊಡುತ್ತಿದ್ದಾರೆ ಎಂದು ಉಪ ಲೋಕಾಯುಕ್ತ ಫಣೀಂದ್ರ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಬಿಸಿನೀರಿನ ಸೌಲಭ್ಯ ಇಲ್ಲದಿರುವುದು ಗಮನಕ್ಕೆ ಬಂದಿದೆ.  ಆದಾಗ್ಯೂ, ವೈದ್ಯರು ಸಮಯಕ್ಕೆ ಸರಿಯಾಗಿ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವುದನ್ನು ಅವರು ಶ್ಲಾಘಿಸಿದರು. ಬೆಡ್, ಬೆಡ್‌ಶೀಟ್‌ಗಳನ್ನು ಸ್ವಚ್ಛವಾಗಿಡುವಂತೆ ಮತ್ತು ಇತರ ಎಲ್ಲ ಸಮಸ್ಯೆಗಳನ್ನು ಸರಿಪಡಿಸುವಂತೆ ವೈದ್ಯರಿಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.

ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ

ನಿನ್ನೆಯಿಂದ ಮೂರು ಹಾಸ್ಟೆಲ್‌ಗಳಿಗೆ ಭೇಟಿ ನೀಡಿದ್ದು, ಅವುಗಳಲ್ಲಿ ಎರಡರಲ್ಲಿ ಭಾರಿ ಅವ್ಯವಸ್ಥೆ ಇರುವುದು ಕಂಡುಬಂದಿದೆ. ನಿನ್ನೆ ಮೂರು ಹಾಸ್ಟೆಲ್‌ಗಳಿಗೆ ಭೇಟಿ ಕೊಟ್ಟಿದ್ದೇನೆ. ಒಂದು ಹಾಸ್ಟೆಲ್ ಮಾತ್ರ ಸರಿಯಿತ್ತು. ಇನ್ನುಳಿದ ಎರಡು ಹಾಸ್ಟೆಲ್‌ಗಳಲ್ಲಿ ನೀರಿನ ಸೌಲಭ್ಯ, ಬೆಡ್, ಹೊದಿಕೆ ಸೇರಿದಂತೆ ಹಲವು ಸಮಸ್ಯೆಗಳಿವೆ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಿದ್ದೇನೆ ಎಂದು ಫಣೀಂದ್ರ ಸ್ಪಷ್ಟಪಡಿಸಿದರು.

ನಗರದ ಕಸದ ಸಮಸ್ಯೆ: ಸಿಟಿ ಕ್ಲೀನ್ ಆಗಿಲ್ಲ

- ಜಾಹೀರಾತು -

ಬೆಳಗ್ಗೆಯೇ ನಗರದ ಕಸ ಡಂಪಿಂಗ್ ಯಾರ್ಡ್‌ಗೆ ಭೇಟಿ ನೀಡಿದ ಉಪ ಲೋಕಾಯುಕ್ತರು, ಚಾಮರಾಜನಗರ ಸಿಟಿ ಕೂಡ ಸರಿಯಾಗಿ ಕ್ಲೀನ್ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ನಗರದ ರಸ್ತೆಯ ಪಕ್ಕದಲ್ಲೇ ಕಸದಿಂದ ಕೂಡಿದೆ. ಕಸದ ಬುಟ್ಟಿಗಳನ್ನು ಬಳಸುವ ಬಗ್ಗೆ ಜನರು ಕೂಡ ಜಾಗೃತರಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕಸ ಹಾಕುವ ಬಗ್ಗೆ ಸಾರ್ವಜನಿಕರಿಗೂ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಉಪ ಲೋಕಾಯುಕ್ತರ ಈ ದಿಢೀರ್ ಭೇಟಿ ಮತ್ತು ಕಟ್ಟುನಿಟ್ಟಿನ ಸೂಚನೆಗಳಿಂದಾಗಿ ನಗರದ ಆಡಳಿತ ವ್ಯವಸ್ಥೆಯಲ್ಲಿ ಸುಧಾರಣೆ ಕಂಡುಬರುವ ನಿರೀಕ್ಷೆಯಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಗಣರಾಜ್ಯೋತ್ಸವದ ಅಂಗವಾಗಿ ಗೀತಾಂಜಲಿ ಶಾಲೆಯಲ್ಲಿ ಅರಳು ಪ್ರತಿಭೆ ಕಾರ್ಯಕ್ರಮ : ನೂರಾರು ಮಕ್ಕಳು ಭಾಗಿ

January 28, 2026
ಕ್ರೈಂ ಸುದ್ದಿಗಳುತುಮಕೂರುಮುಖಪುಟ

ತುಮಕೂರಲ್ಲಿ ಶುರುವಾಯ್ತಾ ಗ್ಯಾಂಗ್​​ವಾರ್..​? : ಓರ್ವನ ಡೆಡ್ಲಿ ಮರ್ಡರ್​ !

November 15, 2025
ಮಂಡ್ಯಮುಖಪುಟಸನ್ನಿಧಾನ

ಶ್ರೀರಂಗಪಟ್ಟಣ: ಪಾಲಹಳ್ಳಿಯ ಪುರಾತನ ಶ್ರೀ ತಿರುಮಲ ವೆಂಕಟರಮಣಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರ ಹಾಗೂ ಮಹಾ ಸಂಪ್ರೋಕ್ಷಣೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

February 27, 2026
ಮುಖಪುಟಮೈಸೂರು ನಗರರಾಜಕೀಯ

ಮಾಜಿ ಶಾಸಕ ಹಾಗೂ ಕೆ.ಎಸ್.ಆರ್.ಟಿ.ಸಿ ಯ ಮಾಜಿ ಅಧ್ಯಕ್ಷ ಆರ್​ ವಿ ದೇವರಾಜು ನಿಧನ

December 2, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?