ಮೈಸೂರು, ಜನವರಿ 1, 2025 : ಮಾಜಿ ಸಚಿವ ಸಾ.ರಾ. ಮಹೇಶ್ ಅವರು ತಮ್ಮ ನೆಚ್ಚಿನ ಒಡನಾಡಿಯಾಗಿದ್ದ ಚಿಂಟುವಿನ (ಆಂಜನೇಯಸ್ವಾಮಿ) 6ನೇ ವರ್ಷದ ಪುಣ್ಯ ಸ್ಮರಣೆಯ ಮೂಲಕ ಅರ್ಥಪೂರ್ಣವಾಗಿ ಹೊಸ ವರ್ಷವನ್ನು ಆಚರಿಸಿದ್ದಾರೆ. ದಟ್ಟಗಳ್ಳಿಯಲ್ಲಿರುವ ಸಾ.ರಾ. ಫಾರಂ ಆವರಣದಲ್ಲಿ ಈ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ಈ ಸಂದರ್ಭದಲ್ಲಿ ಗಣಪತಿ ಹೋಮ, ವಾಸ್ತು ಹೋಮ, ನವಗ್ರಹ ಹೋಮ, ಸುದರ್ಶನ ನರಸಿಂಹ ಹೋಮ ಹಾಗೂ ಅಷ್ಟಲಕ್ಷ್ಮಿ ಹೋಮ ಸೇರಿದಂತೆ ವಿವಿಧ ಧಾರ್ಮಿಕ ವಿಧಿವಿಧಾನಗಳನ್ನು ಅತ್ಯಂತ ಶ್ರದ್ಧಾಭಕ್ತಿಯಿಂದ ನೆರವೇರಿಸಲಾಯಿತು. ಪೂಜಾ ಕಾರ್ಯಕ್ರಮದಲ್ಲಿ ಸಾ.ರಾ. ಮಹೇಶ್ ಅವರ ಕುಟುಂಬ ಸದಸ್ಯರು, ಆಪ್ತರು ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳು ಪಾಲ್ಗೊಂಡು ಚಿಂಟುವಿನ ಸ್ಮರಣೆ ಮಾಡಿದರು.
