ಮೈಸೂರು: ದೆಹಲಿಯಿಂದ ಕೇರಳಕ್ಕೆ ತೆರಳುವ ಮಾರ್ಗದಲ್ಲಿಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಂದಿಳಿದಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಪುಷ್ಪಗುಚ್ಛ ನೀಡಿ, ಶಾಲು ಹೊದಿಸಿ ಬರಮಾಡಿಕೊಂಡರು.

ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ವಿಶೇಷ ವಿಮಾನದ ಮೂಲಕ ಮೈಸೂರಿಗೆ ಆಗಮಿಸಿ ದೆಹಲಿಯಿಂದ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬರಮಾಡಿಕೊಂಡರು.
ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದು ನಂತರ ರಾಹುಲ್ ಗಾಂಧಿ ಅವರು ಹೆಲಿಕಾಫ್ಟರ್ ಮೂಲಕ ತಮಿಳುನಾಡಿನ ಗೂಡಲೂರಿಗೆ ತೆರಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಹಾಜರಿದ್ದು, ರಾಹುಲ್ ಗಾಂಧಿ ಅವರಿಗೆ ಔಪಚಾರಿಕ ಸ್ವಾಗತ ಕೋರಿದ್ದಾರೆ.
