ಬೆಂಗಳೂರು, ನವೆಂಬರ್ 29, 2025 :ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆ ಕಿತ್ತಾಟಕ್ಕೆ ಇಂದು ಬಹುತೇಕ ತೆರೆ ಬೀಳುವ ಸಾಧ್ಯತೆಯಿದೆ. ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸದಲ್ಲಿಂದು ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಮುಖಾಮುಖಿಯಾಗಿದ್ದು, ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಗೆ ಸಿಎಂ ಡಿಸಿಎಂ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.

ಕಾವೇರಿ ನಿವಾಸದ ಸ್ಪೆಷಲ್ ರೂಮ್‌ನಲ್ಲಿ ಕುಳಿತು ಬ್ರೇಕ್‌ಫಾಸ್ಟ್ (Breakfast) ಶುರು ಮಾಡಿದ್ದಾರೆ. ಅಲ್ಲಿಯೇ ಬಳಿಕ ಒನ್ ಟು ಒನ್ ಮೀಟಿಂಗ್ ಶುರು ಮಾಡಿದ್ದು, ಬೇರೆಯವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಇನ್ನೂ ಸಿಎಂ-ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಹಿನ್ನೆಲೆ ಸಿಎಂ ಕಾವೇರಿ ನಿವಾಸದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. ಹೆಚ್ಚುವರಿಯಾಗಿ 3 ಕೆಎಸ್‌ಆರ್‌ಪಿ ತುಕಡಿ, 2 ಬಸ್ ನಿಯೋಜನೆ ಮಾಡಲಾಗಿದೆ. ಅಸಲಿಗೆ, ಕಾಂಗ್ರೆಸ್ ಹೈಕಮಾಂಡ್ ನಿಂದಲೇ ಇಂಥದ್ದೊಂದು ಸೂಚನೆ ಬಂದಿತ್ತು. ಹೈಕಮಾಂಡ್ ಸೂಚನೆಯಂತೆ ಬ್ರೇಕ್‌ಫಾಸ್ಟ್ ಮೀಟಿಂಗ್ ಆಯೋಜನೆಗೊಂಡಿದೆ ಎನ್ನುತ್ತಿವೆ ಪಕ್ಷದ ಉನ್ನತ ಮೂಲಗಳು.
ಹೌದು. ಈಗ ಕರ್ನಾಟಕ ಕಾಂಗ್ರೆಸ್ಸಿನಲ್ಲಿ ಎದ್ದಿರುವ ನಾಯಕತ್ವ ಬದಲಾವಣೆ ಸಮಸ್ಯೆಯನ್ನ ನೀವಿಬ್ಬರೇ ಕುಳಿತು ಬಗೆಹರಿಸಿಕೊಳ್ಳಿ. ಪರಸ್ಪರ ಭೇಟಿಯಾಗಿ ಚರ್ಚಿಸಿ ಒಂದು ತೀರ್ಮಾನಕ್ಕೆ ಬನ್ನಿ. ಕಿತ್ತಾಡಿಕೊಂಡು ಬಂದ್ರೆ ನಾವು ಸಂಧಾನ ಮಾಡಲ್ಲ ಎಂದು ಖುದ್ದು ಹೈಕಮಾಂಡ್ ನಾಯಕರೇ ಸೂಚಿಸಿದೆ. ಇಬ್ಬರೂ ಒಟ್ಟಿಗೆ ದೆಹಲಿಗೆ ಬನ್ನಿ ಅಂತ ರಾಹುಲ್ ಗಾಂಧಿ ಅವರು ಕಟ್ಟಾಜ್ಞೆ ಹೊರಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ. 29ರಂದು ಬೆಳಗ್ಗೆ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆಯಲಾಗಿದೆ ಎಂದು ಖುದ್ದು ಸಿದ್ದರಾಮಯ್ಯನವರೇ ಹೇಳಿದ್ದಾಗಿ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು.
ಸಿಎಂ – ಡಿಸಿಎಂ ಒನ್ ಟು ಒನ್ ಮೀಟಿಂಗ್ ಶುರು ಮಾಡಿದ್ದು, ಬೇರೆಯವರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಸದ್ಯ ಪೊಲಿಟಿಕಲ್ ಮೆನುವಿನಲ್ಲಿ ಸಾಕಷ್ಟು ಐಟಂಗಳಿದ್ದು, ಯಾರಿಗೆ ಕಾರಾಬಾತ್, ಯಾರಿಗೆ ಕೇಸರಿ ಬಾತ್ ಸಿಗುತ್ತೆ ಅನ್ನೋದು ಮೀಟಿಂಗ್ ಬಳಿಕ ತಿಳಿಯಲಿದೆ.
