PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಬೆಂಗಳೂರು > ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್
ಬೆಂಗಳೂರುಮುಖಪುಟರಾಜಕೀಯ

ಸಿದ್ದು – ಡಿಕೆಶಿ ಪವರ್ ಶೇರಿಂಗ್ ಕ್ಲೈಮ್ಯಾಕ್ಸ್..! ಆಪ್ತರಿಗೆ ಸಿಎಂ ಡಿನ್ನರ್ ಮೀಟಿಂಗ್

Prathinidhi News
Last updated: November 22, 2025 1:48 pm
Prathinidhi News
Published November 22, 2025
Share
SHARE

ಬೆಂಗಳೂರು, ನವೆಂಬರ್‌ 22, 2025 : ರಾಜ್ಯ ರಾಜಕಾರಣದಲ್ಲಿ ಪವರ್ ಶೇರಿಂಗ್ ಸಂಬಂಧವಾಗಿ ಭಾರೀ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಪಾಳಯದಲ್ಲಿ ಕಂಪನದ ಮುನ್ಸೂಚನೆ ಸಿಗುತ್ತಿದ್ದು, ಚಟುವಟಿಕೆ ಗರಿಗೆದರಿದೆ.

ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದೊಂದಿಗೆ ಔತಣ ಕೂಟ ಆಯೋಜಿಸಿದ್ದಾರೆ. ಸಚಿವರು ತಮ್ಮ ಸ್ಥಾನಮಾನವನ್ನು ಹೇಗೆ ಬಲಪಡಿಸಿಕೊಳ್ಳಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುತ್ತದೆ.ಜತೆಗೆ ಮುಂದಿನ ರಾಜಕೀಯ ತಂತ್ರಗಾರಿಕೆ ಬಗ್ಗೆ ಸಿಎಂ ಸಮಾಲೋಚನೆ ನಡೆಯಲಿದೆ ಎನ್ನಲಾಗಿದೆ.

ಇನ್ನು, ಇಂದು ಸಂಜೆಯೇ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿ ನೀಡಲಿದ್ದಾರೆ. ಈ ವೇಳೆ ಮಹತ್ವದ ಮಾತುಕತೆ ನಡೆಯಲಿದೆ. ಪ್ರಮುಖವಾಗಿ ಡಿಕೆಶಿಗೆ ಅಧಿಕಾರ ಹಸ್ತಾಂತರ ಜತೆಗೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯಲಿದೆ.

ಅಧಿಕಾರ ಹಸ್ತಾಂತರದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ನಿರ್ಮಾಣವಾಗಿದೆ. ಒಂದೆಡೆ ಡಿಸಿಎಂ ಡಿಕೆಶಿ ಅವರ ಆಪ್ತ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರಚನೆ ಸಂಬಂಧ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಇನ್ನು, ರಾಜ್ಯ ಕಾಂಗ್ರೆಸ್‌ ನಾಯಕರಿಗೆ ಯಾವುದೇ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್‌ನಿಂದ ಸೂಚನೆ ಇದ್ದರೂ ಕೂಡ ನಾಯಕತ್ವ ಬದಲಾವಣೆಯ ಬಗ್ಗೆ ಆಗಾಗ್ಗೆ ಹೇಳಿಕೆಗಳು ಬರುತ್ತಿರುವುದು ಪಕ್ಷದೊಳಗೆ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ಸಚಿವರಾದ ಸತೀಶ್‌ ಜಾರಕಿಹೊಳಿ, ಪರಮೇಶ್ವ‌ರ್, ಮಹಾದೇವಪ್ಪ ಸೇರಿದಂತೆ ಸಿದ್ದರಾಮಯ್ಯ ಅವರ ಆಪ್ತ ವಲಯದ ಸಚಿವರು ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಒತ್ತಾಯ ಹಾಕ್ತಿದ್ದಾರೆ.

- ಜಾಹೀರಾತು -
Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟ

ಚಳಿ ಗಾಳಿಗೆ ಉತ್ತರ ಕರ್ನಾಟಕ ತತ್ತರ ;  ರಾಜ್ಯದಲ್ಲಿ 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

December 22, 2025
ಮುಖಪುಟಮೈಸೂರು ನಗರರಾಜಕೀಯ

ಮೈಸೂರಿನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡ ಸಿಎಂ ಹಾಗೂ ಡಿಸಿಎಂ

January 13, 2026
ಮುಖಪುಟ

ಬೆಳಗಾವಿ : ರಜೆಗೆಂದು ಮನೆಗೆ ತೆರಳಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು

December 22, 2025
ಮುಖಪುಟಮೈಸೂರು ನಗರ

ಮೈಸೂರು ರೇಸ್ ಕ್ಲಬ್‌ನಲ್ಲಿ ‘ಗ್ಲಾಂಡರ್ಸ್’ ಭೀತಿ: ಎಲ್ಲಾ ಚಟುವಟಿಕೆಗಳು ಸ್ಥಗಿತ; ಮೃಗಾಲಯದಲ್ಲೂ ಕಟ್ಟೆಚ್ಚರ

December 23, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?