PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್‌
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್‌
ಮುಖಪುಟಮೈಸೂರು ನಗರರಾಜಕೀಯ

ದೀರ್ಘಾವಧಿ ಮುಖ್ಯಮಂತ್ರಿಯಾಗಿ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಗಮನಾರ್ಹ ಕೊಡುಗೆ ಇಲ್ಲ : ಸಿಎಂ ಸಿದ್ದರಾಮಯ್ಯ ಟೀಕಿಸಿದ ಯದುವೀರ್‌

Prathinidhi News
Last updated: January 7, 2026 4:05 pm
Prathinidhi News
Published January 7, 2026
Share
SHARE

ಮೈಸೂರು, ಜನವರಿ 7, 2026 :  ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿಂದ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಯಾವುದೇ ಗಮನಾರ್ಹ ಕೊಡುಗೆ ಸಿಕ್ಕಿಲ್ಲ. ದೇವರಾಜ ಅರಸು ಅವರು ಮಾಡಿದ ಕ್ರಾಂತಿಕಾರಿ ಕೆಲಸಗಳನ್ನು ಜನ ಇಂದಿಗೂ ನೆನೆಯುತ್ತಾರೆ, ಆದರೆ ಸಿದ್ದರಾಮಯ್ಯ ಅವರ ವಿಷಯದಲ್ಲಿ ಅಂತಹ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಯದುವೀರ್‌ ಟೀಕಿಸಿದ್ದಾರೆ.

ಮುಂದವರೆದು ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ ಪ್ರಕರಣ ಅತ್ಯಂತ ಖಂಡನೀಯ. ರಾಜ್ಯದಲ್ಲಿ ಮಹಿಳೆಯರಿಗೆ ಗೌರವ ನೀಡುವ ಅಗತ್ಯವಿದೆ. ಅಲ್ಲದೆ, ರಾಜ್ಯದ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.

ಗ್ಯಾರೆಂಟಿ ಯೋಜನೆಗಳ ವೈಫಲ್ಯ:  ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ತಕರಾರಿಲ್ಲದಿದ್ದರೂ, ಅವುಗಳ ಅನುಷ್ಠಾನ ಸರಿಯಾಗಿಲ್ಲ ಎಂದು ಅವರು ದೂರಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ತಲುಪುತ್ತಿಲ್ಲ, ಯುವನಿಧಿ ಇನ್ನೂ ಜಾರಿಯಾಗಿಲ್ಲ, ಉಚಿತ ಬಸ್ ಯೋಜನೆಯಿಂದ ಕೆಎಸ್ಆರ್‌ಟಿಸಿ ನಷ್ಟದಲ್ಲಿದೆ ಮತ್ತು ವಿದ್ಯುತ್ ದರ ಏರಿಕೆಯ ಮೂಲಕ ಜನರಿಂದಲೇ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.

ಸಿಎಂ ಬದಲಾವಣೆ ಮತ್ತು ಬಳ್ಳಾರಿ ಗಲಾಟೆ : ಸಿಎಂ ಬದಲಾವಣೆ ಎಂಬುದು ಕಾಂಗ್ರೆಸ್‌ನ ಆಂತರಿಕ ವಿಷಯವಾಗಿದ್ದರೂ, ಬದಲಾವಣೆಯಿಂದ ಜನರಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ತಮಗಿಲ್ಲ ಎಂದಿದ್ದಾರೆ. ಇನ್ನು ಬಳ್ಳಾರಿಯ ಗಲಾಟೆಯ ಕುರಿತು ಪ್ರತಿಕ್ರಿಯಿಸಿದ ಅವರು, ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿ ಗಲಭೆ ಎಬ್ಬಿಸಲಾಗುತ್ತಿದೆ ಎಂದು ದೂರಿದ್ದಾರೆ. ಸಮಸ್ಯೆಗಳನ್ನು ಮುಚ್ಚಿಹಾಕಲು ಸರ್ಕಾರ ಇಂತಹ ಪ್ರಯತ್ನಗಳಿಗೆ ಮುಂದಾಗುತ್ತಿದೆ ಎಂದು ಆರೋಪಿಸಿದ್ದಾರೆ.

- ಜಾಹೀರಾತು -

ಪ್ರತಾಪ್ ಸಿಂಹ ಮತ್ತು ಪಕ್ಷದ ಶಿಸ್ತು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ರಾಜ್ಯ ರಾಜಕಾರಣದ ಎಂಟ್ರಿ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್, ಯಾರೇ ಆದರೂ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಮತ್ತು ಟಿಕೆಟ್ ಹಂಚಿಕೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವುದು ಮುಖ್ಯ ಎಂದು ಅವರು ಹೇಳಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಒಳಚರಂಡಿ ನೀರು ಕಾಲುವೆ ಸೇರದಂತೆ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ: ಶಾಸಕ ಜಿಟಿಡಿ

January 28, 2026
ಮುಖಪುಟಮೈಸೂರು ಗ್ರಾಮಾಂತರ

HDKOTE : ಗೂಡ್ಸ್ ಆಟೋ ಮತ್ತು ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಓರ್ವ ಸಾವು 6 ಮಂದಿಗೆ ಗಾಯ

November 14, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಅಪಘಾತಕ್ಕೀಡಾದ ವ್ಯಕ್ತಿಯ ಮೊಬೈಲ್‌ನಿಂದ ₹80,000 ಹಣ ಲೂಟಿ; ಇಬ್ಬರು ಕಿರಾತಕರ ಬಂಧನ

December 23, 2025
ಮುಖಪುಟಹಾಸನ

ಅಪರಿಚಿತ ವಾಹನ ಡಿಕ್ಕಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಸಾವು

January 6, 2026
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?