ಬೆಂಗಳೂರು, ಅ.7: ಪಲ್ಲಕ್ಕಿ ಬಸ್ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ನೀಡಿದರು. ಒಟ್ಟು 148 ಬಸ್ಗಳಿಗೆ ಚಾಲನೆ ನೀಡಲಾಗಿದ್ದು, 44 ಎಸಿ ಸ್ಲೀಪರ್ ಮತ್ತು ನಾಲ್ಕು ನಾನ್ ಎಸಿ ಸ್ಪೀಪರ್ ಬಸ್ಗಳು ಒಳಗೊಂಡಿವೆ. ಆದರೆ, ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.
40 ನಾನ್ ಎಸಿ ಸ್ಲೀಪರ್ ಹಾಗೂ 100 ನಗರ ಸಾರಿಗೆ ಬಸ್ಸುಗಳು, ಅಶೋಕ ಲೇಲ್ಯಾಂಡ್ ಕಂಪನಿಗೆ ಸೇರಿದ್ದು, ನಾಲ್ಕು ನಾನ್ ಎಸಿ ಸ್ಲೀಪರ್, ನಾಲ್ಕು ಎಸಿ ಸ್ಲೀಪರ್ ಬಸ್ಗಳು ಟಾಟಾ ಕಂಪನಿಯದ್ದಾಗಿವೆ. ಈ ಪೈಕಿ 44 ಎಸಿ ಸ್ಲೀಪರ್, ನಾಲ್ಕು ನಾನ್ ಎಸಿ ಸ್ಲೀಪರ್ ಬಸ್ಗಳನ್ನು ಹೊರತುಪಡಿಸಿ ಉಳಿದ 100 ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶವಿದೆ.