PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ರಾಜಕೀಯ > ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಚಾಲನೆ
ರಾಜಕೀಯ

ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

Deeksha M Bhat
Last updated: December 26, 2023 3:46 pm
Deeksha M Bhat
Published December 26, 2023
Share
SHARE

ಪ್ರಧಾನಿ ಮೋದಿಯವರೇ ಕರ್ನಾಟಕ ರಾಜ್ಯದಲ್ಲಿ ನಮ್ಮ ಕಾಂಗ್ರೆಸ್ ಸರ್ಕಾರ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದೆ. ನಿಮ್ಮ ಮಾತು ಸುಳ್ಳಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಯ ಚಾಲನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಯುವನಿಧಿ ಜತೆಗೆ ಉಚಿತ ತರಬೇತಿ, ಅರ್ಜಿ ಶುಲ್ಕವೂ ಉಚಿತ. ರಾಜ್ಯದ ಜನರಿಗೆ ಇದು ಮುಟ್ಟಿದೆ. ವರ್ಷಕ್ಕೆ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡ್ತೀನಿ ಅಂದ ಮೋದಿಯವರೇ ನೀವು ಉದ್ಯೋಗ ಸೃಷ್ಟಿಸಿದ್ರಾ? ವರ್ಷಕ್ಕೆ ಎರಡು ಕೋಟಿ ಉದ್ಯೋಗ ಅಂದ್ರೆ ಇಷ್ಟೊತ್ತಿಗೆ 20 ಕೋಟಿ ಉದ್ಯೋಗ ಸೃಷ್ಟಿಯಾಗಬೇಕಿತ್ತು. ಎಲ್ಲಿ ಸೃಷ್ಟಿಯಾಯ್ತು ಮೋದಿಯವರೇ? ನೀವು ಮಾತಿಗೆ ತಪ್ಪಿದ ಮೋದಿ” ಎಂದು ಸಿಎಂ ಟೀಕಿಸಿದರು.

“ಭಾರತದ ಇತಿಹಾಸದಲ್ಲಿ ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಇವತ್ತಿನವರೆಗೂ ಬಂದಿಲ್ಲ. ಮೋದಿಯವರೇನು ಆರ್ಥಿಕ ತಜ್ಞರಾ? ರಾಜ್ಯದ ಜನರಿಗೆ ಗ್ಯಾರಂಟಿ ಯೋಜನೆಗಳನ್ನು ಕೊಟ್ಟರೆ ರಾಜ್ಯ ದಿವಾಳಿ ಆಗ್ತದೆ ಎಂದು ಭಾಷಣ ಮಾಡಿದ್ರು. ಈಗ ಐದೂ ಯೋಜನೆ ಜಾರಿಯಾಗಿ ರಾಜ್ಯ ಆರ್ಥಿಕವಾಗಿ ಸದೃಢವಾಗಿದೆ” ಎಂದು ವಿವರಿಸಿದರು.

- ಜಾಹೀರಾತು -

“ವಿವೇಕಾನಂದ ಜಯಂತಿಯಂದು ಲಕ್ಷಾಂತರ ಯುವಕ ಯುವತಿಯರ ಸಮ್ಮುಖದಲ್ಲಿ ಯುವನಿಧಿಯನ್ನು ನೇರವಾಗಿ ಅರ್ಹರ ಖಾತೆಗೆ ಜಮೆ ಮಾಡುವ ಕಾರ್ಯಕ್ರಮ ನಡೆಸ್ತೀವಿ. ಮಾತು ತಪ್ಪಿದ ಮೋದಿಯವರೇ ನಿಮ್ಮ ಮಾತು ಏನಾಯ್ತು? ರಾಜ್ಯದ ಯುವ ಸಮೂಹ ನಿಮ್ಮನ್ನು ಪ್ರಶ್ನಿಸುತ್ತಿದೆ” ಎಂದರು.

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವ ಶರಣಪ್ರಕಾಶ್ ಪಾಟೀಲ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾಗೇಂದ್ರ, ವಿಧಾನ‌ ಪರಿಷತ್ ಸದಸ್ಯ ಯು.ಬಿ.ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹ್ಮದ್ ಘನ ಉಪಸ್ಥಿತರಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿವಾಜಿನಗರ ಶಾಸಕ ರಿಜ್ವಾನ್ ಅರ್ಷದ್ ವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆ ವೇಳೆ ಮುಖ್ಯಮಂತ್ರಿಗಳಿಗೆ ಸಾಂಕೇತಿಕವಾಗಿ ಒಬ್ಬ ಯುವಕ ಮತ್ತು ಓರ್ವ ಯುವತಿ ಜತೆಯಾದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಬಿಹಾರದಲ್ಲಿ ಎನ್‌ಡಿಎಗೆ ಭರ್ಜರಿ ಗೆಲುವು: ಪ್ರಧಾನಿ ಮೋದಿ ನಾಯಕತ್ವಕ್ಕೆ ಸಿಕ್ಕ ಫಲ – ಸಂಸದ ಯದುವೀರ್ ಒಡೆಯರ್

November 15, 2025
ಬೆಂಗಳೂರುಮುಖಪುಟರಾಜಕೀಯ

ದಾಂಧಲೆ ಎಬ್ಬಿಸಿದವರನ್ನು ಬಂಧಿಸಿ, ಕಾನೂನು ಕ್ರಮ ಜರುಗಿಸಿ : ಗೃಹ ಸಚಿವ ಡಾ.ಜಿ.ಪರಮೇಶ್ವರ್

February 11, 2025
ಮುಖಪುಟಮೈಸೂರು ನಗರರಾಜಕೀಯ

ದಸರಾ ಉತ್ಸವ ಉದ್ಘಾಟನೆಗೆ ಭಾನು ಮುಸ್ತಾಕ್ ಆಯ್ಕೆ ಸ್ವಾಗತಿಸಿ ಸಿಹಿ ವಿತರಣೆ

August 29, 2025
ಮುಖಪುಟಮುಡಾ ಹಗರಣಮೈಸೂರು ನಗರರಾಜಕೀಯ

ಮುಡಾ ಹಗರಣ: ಕೊಟ್ಟವನು ಕೋಡಂಗಿ ಈಸ್ಕೊಂಡವ್ನು ವೀರಭದ್ರ.., 50-50 ಸೈಟ್‌ ಪಡೆದವರಿಗೆ ಬಿಗ್‌ ಟೆನ್ಷನ್!‌

October 31, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?