PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ
ಮುಖಪುಟಮೈಸೂರು ನಗರಸಿನಿಮಾ

2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಧಾನ ಮಾಡಿದ ಸಿಎಂ ಸಿದ್ದರಾಮಯ್ಯ

Prathinidhi News
Last updated: November 4, 2025 11:06 am
Prathinidhi News
Published November 4, 2025
Share
SHARE

ಮೈಸೂರು, ನವೆಂಬರ್‌ 4, 2025 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮೈಸೂರಿನ ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2018 ಮತ್ತು 19ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನ ಮಾಡಿ, ಪ್ರಶಸ್ತಿ ವಿಜೇತರಿಗೆ ಅಭಿನಂದಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿ, ನಮ್ಮ ಸರ್ಕಾರ ಕನ್ನಡ ಸಿನಿಮೋದ್ಯಮದ ಆರೋಗ್ಯಕಾರಿ ಪ್ರಗತಿ ಮತ್ತು ಬೆಳವಣಿಗೆಗೆ ಸದಾ ಬೆಂಬಲ ನೀಡುತ್ತದೆ. ಕೇವಲ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ. ಒಳ್ಳೆ ಸಿನಿಮಾ ಮಾಡಿ, ಜನ ಮೆಚ್ಚುವ, ಸಮಾಜದ ಮೇಲೆ ಉತ್ತಮ‌ ಪರಿಣಾಮ ಬೀರುವ ಸಿನಿಮಾ ಮಾಡಿದರೆ ಸಬ್ಸಿಡಿ ನೀಡಿದ್ದಕ್ಕೂ ಸಾರ್ಥಕವಾಗುತ್ತದೆ. ಸದ್ಯ ಬಾಕಿ ಇರುವ ಎಲ್ಲಾ ವರ್ಷದ ಸಬ್ಸಿಡಿಯನ್ನೂ ಒಟ್ಟಿಗೇ ನೀಡಲಾಗುವುದು. ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಚಿತ್ರನಗರಿ ಮಾಡಲು 160 ಎಕರೆ ಜಾಗವನ್ನು ವಾರ್ತಾ ಇಲಾಖೆಗೆ ಹಸ್ತಾಂತರಿಸಲಾಗಿದೆ. ಎರಡು ತಿಂಗಳಲ್ಲಿ ಕಾನೂನು ಪ್ರಕ್ರಿಯೆ ಮುಗಿಸಿ ಚಿತ್ರನಗರಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ ಜೀವನದಲ್ಲೂ ನಡೆದುಕೊಳ್ಳಬೇಕು. ಡಾ.ರಾಜ್ ಕುಮಾರ್ ಅವರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು. ಈ ಕಾರಣಕ್ಕೇ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ.ಸಿನಿಮಾ ಅತ್ಯಂತ ಪ್ರಭಾವೀ ಮಾಧ್ಯಮ. ಸಮಾಜದ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ಆದ್ದರಿಂದ ಸಿನಿಮಾ ತಾರೆಯರು ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅಷ್ಟೇ ಮೌಲ್ಯಯುತವಾಗಿ ಬದುಕಬೇಕು. ಸಮಾಜವನ್ನು ತಿದ್ದುವ ಸಿನಿಮಾಗಳನ್ನು ಹೆಚ್ಚೆಚ್ಚು ತಯಾರಿಸಿದರೆ ಅದರಿಂದ ಬದಲಾವಣೆ ಸಾಧ್ಯ ಎಂದರು.

- ಜಾಹೀರಾತು -

ಈಗಿನ ಸಿನಿಮಾಗಳಲ್ಲಿ ಸಾಮಾಜಿಕ ಕಾಳಜಿ, ಗುಣಮಟ್ಟ ಕ್ಷೀಣ: ಮೊದಲೆಲ್ಲಾ ಸಿನಿಮಾಗಳ ಸಂಖ್ಯೆ ಕಡಿಮೆ ಇತ್ತು. ನಾವು ನೋಡಿದ್ದನ್ನೇ ಮತ್ತೆ ಮತ್ತೆ ನೋಡುತ್ತಿದ್ದೆವು. ಈಗ ಸಿಕ್ಕಾಪಟ್ಟೆ ಸಿನಿಮಾಗಳು ಬರುತ್ತಿವೆ. ಆದರೆ, ಸಾಮಾಜಿಕ ಕಾಳಜಿ ಮತ್ತು ಗುಣಮಟ್ಟ ಕಡಿಮೆ ಆಗುತ್ತಿದೆ. ಆದ್ದರಿಂದ ಈಗ ಸಿನಿಮಾ ನೋಡುವುದನ್ನೇ ಕಡಿಮೆ ಮಾಡಿದ್ದೇನೆ ಎಂದು ತಿಳಿಸಿದರು.

ಹಿಂದಿನ ಸರ್ಕಾರ ಆಯಾ ವರ್ಷವೇ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸದ ಕಾರಣಕ್ಕೇ 2018ನೇ ಸಾಲಿನಿಂದ ಪ್ರಶಸ್ತಿಗಳು ಬಾಕಿ ಉಳಿದಿವೆ. ಇದು ತಪ್ಪು ಹೀಗಾಗಬಾರದು. ಆದ್ದರಿಂದ ನಮ್ಮ ಸರ್ಕಾರ ಇನ್ನು ಮುಂದೆ ಪ್ರತೀ ವರ್ಷ ಸಿನಿಮಾ ಪ್ರಶಸ್ತಿಗಳನ್ನು ನೀಡಲಿದೆ. ಆಯಾ ವರ್ಷದ ಸಿನಿಮಾಗಳಿಗೆ ಮರು ವರ್ಷವೇ ಪ್ರಶಸ್ತಿ ಕೊಟ್ಟರೆ ಮಾತ್ರ ಅರ್ಥಪೂರ್ಣ ಆಗಿರುತ್ತದೆ. ಇಂದು ಎರಡು ವರ್ಷದ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕೆಲವೇ ದಿನಗಳಲ್ಲಿ ಹಳೆ ಸರ್ಕಾರದ ಅವಧಿಯ ಇನ್ನೆರಡು ವರ್ಷದ ಸಿನಿಮಾ ಪ್ರಶಸ್ತಿಗಳನ್ನು ನೀಡಲು ಸೂಚನೆ ನೀಡಿದ್ದೇನೆ. ಬಳಿಕ ಆಯಾ ವರ್ಷದ ಪ್ರಶಸ್ತಿಗಳನ್ನು ಮರು ವರ್ಷದ ಆರಂಭದಲ್ಲೇ ನೀಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

 

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಬೆಂಗಳೂರುಮುಖಪುಟಸಿನಿಮಾ

ಊಟದ ಕುರಿತು ನನ್ನ ಕೇಳಿ.. ನನ್ನ ಧರ್ಮವನ್ನಲ್ಲ: ನೆಟ್ಟಿಗರಿಗೆ ನಟ ಡಾಲಿ ಧನಂಜಯ್ ತಿರುಗೇಟು

January 31, 2026
ಬೆಂಗಳೂರುಮುಖಪುಟರಾಜಕೀಯ

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ – ʼಸುಪ್ರೀಂʼ ಮಧ್ಯಂತರ ತಡೆ

December 2, 2025
ಕ್ರೈಂ ಸುದ್ದಿಗಳುಬೆಂಗಳೂರುಮುಖಪುಟ

ವಾಟ್ಸಾಪ್ ಸ್ಟೇಟಸ್ ನೋಡಿ ಕಳ್ಳಿಯನ್ನು ಹಿಡಿದ ಮಾಲೀಕ: ಬೆಳ್ಳಂದೂರು ಪೊಲೀಸರಿಂದ ಕೆಲಸದಾಕೆ ಬಂಧನ

January 14, 2026
ಮುಖಪುಟಮೈಸೂರು ನಗರರಾಜಕೀಯ

ಮೈಸೂರು: ಭಕ್ತ ಕನಕದಾಸರ ಜಯಂತಿ ಅದ್ದೂರಿ ಆಚರಣೆ

November 8, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?