ಬೆಂಗಳೂರು, ನವೆಂಬರ್ 20, 2025 : ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇವತ್ತು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗೋ ಸಾಧ್ಯತೆ ಇದೆ.
ಕಳೆದ ಮೂರು ದಿನಗಳಿಂದ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಇನ್ಫೆಕ್ಷನ್ ಕಡಿಮೆಯಾಗಿದ್ದು, ಕೊನೆ ಹಂತದ ಚಿಕಿತ್ಸೆ ನೀಡಲಾಗುತ್ತಿದೆ. ಸಿದ್ದರಾಮಯ್ಯ ಕೂಡ ವೈದ್ಯರ ಜತೆ ಸಮಾಲೋಚನೆ ನಡೆಸಿ ಪತ್ನಿಯ ಆರೋಗ್ಯದ ಬಗ್ಗೆ ಗಮನ ಹರಿಸಿದ್ದಾರೆ. ಶ್ವಾಸ ಕೋಶ ಸೋಂಕು ಹೆಚ್ಚಾದ ಕಾರಣ ಉಸಿರಾಟಕ್ಕೆ ತೊಂದರೆ ಆಗಿತ್ತು. ಇದೀಗ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದೆ. 15 ದಿನಗಳ ಕಾಲ ವಿಶ್ರಾಂತಿಗೆ ವೈದ್ಯರು ಹೇಳಿದ್ದಾರೆ. .
