ಪ್ರತಿನಿಧಿ ವರದಿ ಕುಶಾಲನಗರ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2024-25 ನೇ ಸಾಲಿನ ಪ್ರಥಮ ಬಿಎ, ಬಿಕಾಂ, ಬಿಸಿಎ ಮತ್ತು ಬಿಬಿಎ ವಿಭಾಗದ ಪ್ರವೇಶಾತಿ ಏ.೨೦ರಿಂದ ಆರಂಭಗೊಳ್ಳಲಿದೆ ಎಂದು ಕಾಲೇಜು ಪ್ರಾಂಶುಪಾಲ ಬಿ.ಎಂ.ಪ್ರವೀಣ್ ಕುಮಾರ್ ಅವರು ತಿಳಿಸಿದ್ದಾರೆ.
ಕಾಲೇಜಿನಲ್ಲಿ ಎಲ್ಲ ವಿಷಯಗಳಿಗೂ ಪೂರ್ಣಕಾಲಿಕ ಅಧ್ಯಾಪಕರು, ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರನ್ನು ಒಳಗೊಂಡಿದೆ. ಕಾಲೇಜಿನಲ್ಲಿ ಸರ್ಕಾರದ ಸೌಲಭ್ಯಗಳಾದ ಶುಲ್ಕ ವಿನಾಯಿತಿ, ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಸ್ಟೆಲ್ ವ್ಯವಸ್ಥೆ ಲಭ್ಯವಿದೆ. ಜತೆಗೆ ಡಿಜಿಟಲ್ ಗ್ರಂಥಾಲಯ, ಸುಸಜ್ಜಿತವಾದ ಕ್ರೀಡಾ ಮೈದಾನ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ ಸಿಸಿ ಕ್ಯಾಮರಾ ಇದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ.