PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಭಾಗಿತ್ವ ಅವಶ್ಯಕ : ತಾಲ್ಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ವೆಂಕಟೇಶ್
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಭಾಗಿತ್ವ ಅವಶ್ಯಕ : ತಾಲ್ಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ವೆಂಕಟೇಶ್
ಮುಖಪುಟಮೈಸೂರು ಗ್ರಾಮಾಂತರ

ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಭಾಗಿತ್ವ ಅವಶ್ಯಕ : ತಾಲ್ಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ವೆಂಕಟೇಶ್

Prathinidhi News
Last updated: May 16, 2025 5:26 pm
Prathinidhi News
Published May 16, 2025
Share
SHARE

ಕೆ.ಆರ್.ನಗರ, ಮೇ 16, 2025 : ಸರಕಾರಿ ಶಾಲೆಗಳ ಉಳಿವಿಗೆ ಸಮುದಾಯದ ಸಹಭಾಗಿತ್ವ ಅವಶ್ಯವಾಗಿದ್ದು, ಗುಣಮಟ್ಟದ ಶಿಕ್ಷಣ ಪಡೆಯಲು ಸರಕಾರಿ ಶಾಲೆಗಳಲ್ಲಿ ಉಚಿತ ಸರಕಾರದ ಸೌಲಭ್ಯಗಳನ್ನು ಪಡೆದು ದಾಖಲಾತಿ ಹೆಚ್ಚಳ ಮಾಡಲು ಎಲ್ಲರೂ ಕೈ ಜೋಡಿಸ ಬೇಕು ಎಂದು ಕೆ.ಆರ್.ನಗರ ತಾಲ್ಲೂಕು ಕ್ಷೇತ್ರ ಸಮನ್ವಯ ಅಧಿಕಾರಿ ವೆಂಕಟೇಶ್ ಪೋಷಕರಲ್ಲಿ ಮನವಿ ಮಾಡಿದರು.

ಅವರು ಸಾಲಿಗ್ರಾಮ ತಾಲೂಕಿನ ಭೇರ್ಯ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ ಹಾಗೂ ಮಧ್ಯಾಹ್ನ ಬಿಸಿಯೂಟ ಯೋಜನೆಯ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಗ್ರಾಮದಲ್ಲಿ ದೇವಸ್ಥಾನ ಹೇಗೋ ಹಾಗೇ ಶಾಲೆ ಕೂಡ ದೇವಸ್ಥಾನದಲ್ಲಿ ಬೆಳಗ್ಗೆ ಮತ್ತು ಸಂಜೆ ಗಂಟೆ ಬಾರಿಸಿದರೆ ಶಾಲೆಯಲ್ಲಿ ಬೆಳಿಗ್ಗೆಯಿಂದ ಸಂಜೆವರೆಗೂ ಶಾಲೆಯ ಗಂಟೆ ಬಾರಿಸುತ್ತಿರುತ್ತದೆ, ಸರ್ಕಾರಿ ಶಾಲೆಗಳಲ್ಲಿ ಶೇಕಡ 100 ರಷ್ಟು ಜ್ಞಾನಾರ್ಧನೆ ಇರುತ್ತದೆ ಆದ್ದರಿಂದ ಸರ್ಕಾರಿ ಶಾಲೆಗಳನ್ನು ಮುಚ್ಷುದಂತೆ ಗ್ರಾಮಸ್ಥರು ಸಹಕಾರ ನೀಡ ಬೇಕಿದೆ ಎಂದರು.

ಸರ್ಕಾರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ದೊರೆಯುತ್ತಿದೆ, ಎಂಎಸ್ಸಿ , ಬಿ.ಎಡ್ ಮಾಡಿರುವ ಪದವೀಧರ ನುರಿತ ಶಿಕ್ಷಕರೇ ನೇಮಕವಾಗಿದ್ದಾರೆ, ಆದರೆ ಖಾಸಾಗಿ ಕಾನ್ವೆಂಟ್ ಮಾರು ಹೋಗುವ ನಮ್ಮ ಪೋಷಕರು ಅಲ್ಲಿಯ ಶಿಕ್ಷಕರು ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ಮಾಡಿರುವವರು ಎಂದರಲ್ಲದೆ ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ವಿದ್ಯೆಯನ್ನು ಕಲಿಸಿ ಓದಿಸಲಾಗುತ್ತಿದ್ದು ಸರ್ಕಾರಿ ಶಾಲೆಯಲ್ಕೂ ಎಲ್‌ಕೆ.ಜಿ.ಮತ್ತು ಯುಕೆಜಿ ತರಗತಿಗಳನ್ನು ಉಚಿತವಾಗಿ ಶಿಕ್ಷಣ ಕೊಡಲು ಆರಂಭಿಸಲಾಗಿದೆ ಆದ್ದರಿಂದ ಸರ್ಕಾರಿ ಶಾಲೆಗಳಿಗೆ ನಿಮ್ಮ ಮಕ್ಕಳನ್ನು ದಾಖಲಿಸಿ ಎಂದು ಮನವಿ‌ ಮಾಡಿದರು.ಸರಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಲು ಸಮುದಾಯದ ಸಹಭಾಗಿತ್ವದಲ್ಲಿ ಬಲಗೊಳ್ಳಬೇಕಾಗಿದೆ. ಸರಕಾರದ ಸೌಲಭ್ಯ ಜೊತೆಗೆ ಗುಣಮಟ್ಟದ ಶಿಕ್ಷಣ ಪಡೆಯಬೇಕು. ಸರಕಾರಿ ಶಾಲೆಯ ಬಗ್ಗೆ ಮನೋಭಾವನೆ ಬದಲಾಗಬೇಕಿದೆ. ಖಾಸಗಿ ಶಾಲೆಗಳಿಗೆ ಪ್ರಭಾವಿತರಾಗದೇ ಸರಕಾರಿ ಶಾಲೆಗಳತ್ತ ಮುಖ ಮಾಡಬೇಕಾಗಿದೆ. ನಿಮ್ಮೂರ ಶಾಲೆ, ನಿಮ್ಮ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲು ತಾವು ಶಾಲೆಗೆ ಬಂದು ಪ್ರಶ್ನಿಸಬಹುದು. ನಿಮ್ಮೆಲ್ಲರ ಅಪೇಕ್ಷೆಯಂತೆ ಗುಣಮಟ್ಟದ ಶಿಕ್ಷಣ ನೀಡುತ್ತಿದ್ದಾರೆ. ಅಪೌಷ್ಟಿಕತೆ ತಡೆಯಲು ಬಿಸಿಯೂಟ, ಮತ್ತು ಸಮವಸ್ತ್ರ, ಪಠ್ಯಪುಸ್ತಕ, ಶೂ ಸಾಕ್ಸ್ ಉಚಿತವಾಗಿ ನೀಡಲಾಗುತ್ತದೆ ಎಂದರು.

- ಜಾಹೀರಾತು -

ತಾಲೂಕು ಅಕ್ಷರ ದಾಸೋಹ ನಿರ್ದೇಶಕ ಸ್ವಾಮೀಗೌಡ ಮಾತನಾಡಿ ಸರಕಾರಿ ಶಾಲೆಯಲ್ಲಿ ಕ್ಷೀರಭಾಗ್ಯ, ಬಿಸಿಯೂಟ, ಸಮವಸ್ತ್ರ, ಶೂ ಸಾಕ್ಷ, ಎಲ್ಲವೂ ಉಚಿತವಾಗಿವೆ. ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗೆ ದಾಖಲಾತಿ ಮಾಡಿಸಿ ಸರಕಾರಿ ಶಾಲೆ ಬೆಳವಣಿಗೆ, ದಾಖಲಾತಿ ಹೆಚ್ಚಿಸಲು ಶ್ರಮಿಸೋಣ ಎಂದು ಹೇಳಿದರು.ಗ್ರಾಮ ಪಂಚಾಯತಿ ಅಧ್ಯಕ್ಷ ಬಿ.ಕೆ.ಮಂಜಪ್ಪ ನಮ್ಮೂರಿನ ಸರ್ಕಾರಿ ಶಾಲೆಗಳ ಅಭಿವೃದ್ಧಿ ಪೂರಕವಾದ ಯೋಜನೆಯನ್ನು ಅನುಷ್ಠಾನ ಮಾಡುವುದಾಗಿ ಹೇಳಿದರು, ಶೌಚಾಲಯ, ಕಾಂಪೌಂಡ್ ನಿರ್ಮಾಣ ಸೇರಿದಂತೆ ಅನೇಕ ಶಾಲೆಗಳ ಸಮಸ್ಯೆಗಳನ್ನು ಬಗೆಹರಿಸುವುದಾಗಿ ತಿಳಿಸಿದರು. ಇದಕ್ಕೂ ಮೊದಲು ಗ್ರಾ.ಪಂ.ಅಧ್ಯಕ್ಷ ಬಿ.ಕೆ.ಮಂಜಪ್ಪ ಶಾಲಾ ಮಕ್ಕಳಿಂದ ಹಮ್ಮಿಕೊಂಡಿದ್ದ ನಮ್ಮ ಶಾಲೆ ನಮ್ಮ ಜವಬ್ದಾರಿ ದಾಖಲಾತಿ ಜಾಥಾಕ್ಕೆ ಚಾಲನೆ ನೀಡಿದರು.

ಎಸ್.ಡಿ.ಎಂ.ಸಿ. ಅದ್ಯಕ್ಷ ರೇವಣ್ಣ, ಎಸ್.ಡಿ.ಎಂ.ಸಿ ಸದಸ್ಯರಾದ ಅಶೋಕ್, ಚೈತ್ರಾ, ಅಖಿಲಭಾರತ ವೀರಶೈವ ಲಿಂಗಾಯತ ಮಹಾಸಭಾ ಉಪಾಧ್ಯಕ್ಷ ಬಿ.ಎಂ.ಪ್ರಕಾಶ್, ಮುಖಂಡರಾದ ಪುಟ್ಟಮಾದಯ್ಯ, ರಾಜಯ್ಯ, ಸ.ಪ.ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಉಪ ಪ್ರಾಂಶುಪಾಲ ಡಾ.ಪ್ರಸಾದ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಶಿವಪ್ಪ, ಕಾಲೇಜು ಉಪನ್ಯಾಸಕ ಮಹೇಶ್, ಸಿ.ಆರ್.ಪಿ. ರೇವಣ್ಣ, ಉರ್ದು ಶಾಲೆಯ ಮುಖ್ಯಶಿಕ್ಷಕ ರವಿಕುಮಾರ್, ಶಿಕ್ಷಕರಾದ ಪ್ರಸನ್ನ, ಕಾತ್ಯಾಯಿನಿ, ಮಾನಸ, ದೈಹಿಕ ಶಿಕ್ಷಕಿ ಪುಷ್ಪಲತಾ, ಕಾವ್ಯಶ್ರೀ, ಅರ್ಪಿತಾಮೂರ್ತಿ, ರೇಖಾ, ಆಸ್ಮಿಯಭಾನು, ಜಯಮ್ಮ, ವಿಜಯಕುಮಾರಿ, ವನಿತಾಬಾಯಿ, ಗಿರಿಜ ಹಾರೊಗಪ್ಪ ಮೊದಲಾದವರು ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ಹೊಸಕೋಟೆ ಶ್ರೀ ಮುಂಡ ಬಸಪ್ಪಸ್ವಾಮಿ ದೇವಸ್ಥಾನದಲ್ಲಿ ಅದ್ಭುತ! ಮರದಲ್ಲಿ ಮೂಡಿದ ಬಸವಣ್ಣನ ಮುಖಾಕೃತಿ

September 20, 2025
ಬೆಂಗಳೂರುಮುಖಪುಟ

ತಾವು ಕಲಿತ ಶಾಲೆಗೆ 10 ಲಕ್ಷ ರೂ ವೈಯಕ್ತಿಕ ದೇಣಿಗೆ ನೀಡಿದ ಸಿದ್ದರಾಮಯ್ಯ

March 5, 2024
ಬೆಂಗಳೂರುಮುಖಪುಟರಾಜಕೀಯ

ಚಿನ್ನಸ್ವಾಮಿ ದುರಂತ : ಪ್ರಕರಣ ಸಂಬಂಧ ಮೂವರು ಆಯೋಜಕರು ಸೇರಿದಂತೆ ನಾಲ್ವರ ಬಂಧನ..!

June 6, 2025
ಚುನಾವಣೆಮುಖಪುಟರಾಜಕೀಯ

ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಸ್ಫೋಟ: ಸ್ವತಃ ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್ ರಾಜೀನಾಮೆಗೆ ನಿರ್ಧಾರ

March 27, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?