PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ನಂಜನಗೂಡು: ದಾನಿಗಳ ಹಣ ‘ಗುಳುಂ’ ಆರೋಪ – ಪಿಡಿಓ ವಿರುದ್ಧ ದೂರು
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ನಂಜನಗೂಡು > ನಂಜನಗೂಡು: ದಾನಿಗಳ ಹಣ ‘ಗುಳುಂ’ ಆರೋಪ – ಪಿಡಿಓ ವಿರುದ್ಧ ದೂರು
ನಂಜನಗೂಡುಮುಖಪುಟ

ನಂಜನಗೂಡು: ದಾನಿಗಳ ಹಣ ‘ಗುಳುಂ’ ಆರೋಪ – ಪಿಡಿಓ ವಿರುದ್ಧ ದೂರು

Prathinidhi News
Last updated: November 17, 2025 3:51 pm
Prathinidhi News
Published November 17, 2025
Share
SHARE

ನಂಜನಗೂಡು, ನವೆಂಬರ್‌ 17, 2025 :ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕುರಿಹುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಾನಿಗಳು ನೀಡಿದ್ದ ಪೀಠೋಪಕರಣಗಳಿಗಾಗಿ ನಕಲಿ ಬಿಲ್ ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ ಪಿಡಿಓ (ಪಂಚಾಯತಿ ಅಭಿವೃದ್ಧಿ ಅಧಿಕಾರಿ) ಜ್ಯೋತಿ ಅವರ ವಿರುದ್ಧ ಕೇಳಿಬಂದಿದೆ.

ಜೆ.ಪಿ. ಹುಂಡಿ ಆಶ್ರಮದ ಮ್ಯಾನೇಜರ್ ಅವರು ಕುರಿಹುಂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ 11 ಅಂಗನವಾಡಿ ಕೇಂದ್ರಗಳಿಗೆ ಅಂದಾಜು ₹87,000 ಮೌಲ್ಯದ ಪೀಠೋಪಕರಣಗಳನ್ನು ದಾನವಾಗಿ ನೀಡಿದ್ದರು. ಆದರೆ, ಗ್ರಾಮ ಪಂಚಾಯತಿ ಪಿಡಿಓ ಜ್ಯೋತಿ ಅವರು ಈ ದಾನಿಗಳಿಂದ ಬಂದ ಪೀಠೋಪಕರಣಗಳಿಗೆ ಸಂಬಂಧಿಸಿದಂತೆ, ಗ್ರಾಮ ಪಂಚಾಯತಿಯಿಂದಲೇ ಖರೀದಿಸಲಾಗಿದೆ ಎಂದು ನಕಲಿ ದಾಖಲೆಗಳು ಮತ್ತು ಬಿಲ್‌ಗಳನ್ನು ಸೃಷ್ಟಿಸಿ, ಸರ್ಕಾರಿ ಖಜಾನೆಯ ₹87,000 ಹಣವನ್ನು ಗುಳುಂ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಮೂಲಕ ದಾನಿಗಳ ನೆರವಿನ ನಡುವೆಯೂ ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಪ್ರಕರಣ ಈಗ ಬೆಳಕಿಗೆ ಬಂದಿದೆ.

ಗ್ರಾಮದ ಮುಖಂಡರಾದ ಚಂದ್ರಶೇಖರ್ ಎಂಬುವವರು ಈ ಹಗರಣವನ್ನು ಬಯಲಿಗೆ ತಂದಿದ್ದಾರೆ. ಪಿಡಿಓ ಜ್ಯೋತಿ ಅವರು ₹87,000 ಮೊತ್ತದ ಬಿಲ್ ಮಾಡಿ ತಗಲಾಕಿಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಈ ಸಂಬಂಧ, ಚಂದ್ರಶೇಖರ್ ಅವರು ತಕ್ಷಣವೇ ಕಾರ್ಯನಿರ್ವಾಹಕ ಅಧಿಕಾರಿ (ಇಓ) ಅವರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ. ಈ ಹಣ ಗುಳುಂ ಪ್ರಕರಣ ಬಯಲಿಗೆ ಬರುತ್ತಿದ್ದಂತೆಯೇ, ಆರೋಪಿತ ಪಿಡಿಓ ಜ್ಯೋತಿ ಅವರು ರಜೆಯ ಮೇಲೆ ತೆರಳಿದ್ದಾರೆ. ಈ ಬೆಳವಣಿಗೆಯು ಆರೋಪಗಳಿಗೆ ಮತ್ತಷ್ಟು ಪುಷ್ಠಿ ನೀಡಿದಂತಾಗಿದೆ.

- ಜಾಹೀರಾತು -

ಸಾರ್ವಜನಿಕ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ, ಕುರಿಹುಂಡಿ ಗ್ರಾಮದ ಮುಖಂಡರು ಹಾಗೂ ಸಾರ್ವಜನಿಕರು ಪಿಡಿಓ ಜ್ಯೋತಿ ಅವರನ್ನು ತಕ್ಷಣವೇ ಅಮಾನತುಪಡಿಸುವಂತೆ ಸಂಬಂಧಿಸಿದ ಮೇಲಾಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಈ ಕುರಿತು ಇಓ ಅವರು ಯಾವ ಕ್ರಮ ಕೈಗೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರರಾಜಕೀಯ

ಸಿಎಂ ತವರು ಮೈಸೂರು ಜಿಲ್ಲೆಯಲ್ಲಿ ಫ್ಲೆಕ್ಸ್ ಕಿರಿಕ್: ಎಚ್‌ಡಿಕೆ ಹಾಗೂ ಸಾ.ರಾ. ಮಹೇಶ್ ಭಾವಚಿತ್ರಕ್ಕೆ ಅವಮಾನ

January 17, 2026
ಮುಖಪುಟಮೈಸೂರು ನಗರಸಿನಿಮಾ

‘ಫುಲ್ ಮೀಲ್ಸ್’ ಚಿತ್ರದಲ್ಲಿ ‘ಫೋಟೋಗ್ರಾಫರ್ಸ್ ಪ್ಲರ್ಟ್ಸ್’ ಪದ ಬಳಕೆ: ಆಕ್ರೋಶ, ವಾಗ್ವಾದದ ಬಳಿಕ ಕ್ಷಮೆಯಾಚನೆ!

November 20, 2025
ಮುಖಪುಟಮೈಸೂರು ನಗರ

ರಾಜ್ಯದಲ್ಲಿ ಅಪಘಾತಗಳ ಪಟ್ಟಿಯಲ್ಲಿ ಮೈಸೂರಿಗೆ 6ನೇ ಸ್ಥಾನ; ಸುರಕ್ಷತಾ ಕ್ರಮಕ್ಕೆ ಆರ್.ಟಿ.ಒ ಮುಂದು!

January 13, 2026
ಮುಖಪುಟರಾಜಕೀಯ

ಗ್ಯಾರಂಟಿ ಯೋಜನೆಗೆ ಸ್ವಪಕ್ಷದಲ್ಲೇ ತಕರಾರು..! ಗ್ಯಾರಂಟಿ ಯೋಜನೆ ಮಾತ್ರ ನಂಬಿಕೊಂಡು ಚುನಾವಣೆ ಎದುರಿಸಲು ಸಾಧ್ಯವಿಲ್ಲ ಎಂದ ಶಾಸಕರು !

December 10, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?