ಬೆಂಗಳೂರು , ನವೆಂಬರ್ 4, 2025 : ರಾಜ್ಯ ಕಾಂಗ್ರೆಸ್ ನಲ್ಲಿ ಕುರ್ಚಿ ಜಗಳ ಹೆಚ್ಚಾಗಿದ್ದು, ಬಿಜೆಪಿ ನಾಯಕರು “ಕೈ” ನಾಯಕರಿಗೆ ಸಖತ್ತಾಗಿಯೇ ಟಾಂಗ್ ನೀಡಿದ್ದಾರೆ.ಇದೀಗ ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೌಂಟರ್ ನೀಡಿದ್ದಾರೆ.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು, ರಾಜ್ಯ ಸರಕಾರದಲ್ಲಿ ಖುರ್ಚಿಗಾಗಿ ಯುದ್ಧ ಪ್ರಾರಂಭವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ರಾಜ್ಯ ಸರಕಾರದಲ್ಲಿ ಖುರ್ಚಿಗಾಗಿ ಯುದ್ಧ ಪ್ರಾರಂಭವಾಗಿದೆ. ಎಲ್ಲರೂ ಬಿಹಾರ ವಿಧಾನಸಭೆಯ ಚುನಾವಣೆಯತ್ತ ಗಮನ ಹರಿಸಿದ್ದಾರೆ. ಅದಾದ ಬಳಿಕ ಬಹಿರಂಗವಾಗಿ ಎಲ್ಲರಿಗೂ ತಿಳಿಯುತ್ತದೆ ಎಂದರು.
ಕಬ್ಬಿನ ಬೆಂಬಲ ಬೆಲೆ ಘೋಷಣೆ ಮಾಡಬೇಕೆಂದು ರೈತರ ಹೋರಾಟದಲ್ಲಿ ಭಾಗಿಯಾಗಲು ನಾನು ಯಡಿಯೂರಪ್ಪ ಮಗನಾಗಿ ಬಂದಿದ್ದೇನೆ. ಯಾರ ಯಾರ ಕಾರ್ಖಾನೆಗಳಿವೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ಸಕ್ಕರೆ ಕಾರ್ಖಾನೆ ಸಾಹುಕಾರ್ ಗಳ ಜೊತೆಗೆ ಅಧಿಕಾರಿಗಳು ಸೇರಿ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಬೇಕು ಎಂದರು.ಮೂಡಲಗಿ ತಾಲೂಕಿನ ಗುರ್ಲಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾರೆ. ಅವರ ನ್ಯಾಯಯುತವಾಗಿರುವ ಬೇಡಿಕೆಗಳನ್ನು ರಾಜ್ಯ ಸರಕಾರ ಮುಂದಾಳತ್ವ ವಹಿಸಿ ಈಡೇರಿಸುವ ಆಗ್ರಹ ಇದೆ. ರಾಜ್ಯ ಸರಕಾರ ಸ್ಪಂದನೆ ಮಾಡದಿದ್ದಾಗ ವಿರೋಧ ಪಕ್ಷವಾಗಿ ಬೆಂಬಲ ನೀಡಬೇಕಿದೆ. ಹಾಗಾಗಿ ನಾನು ಸಹ ಎಲ್ಲಾ ಪಕ್ಷದ ಮುಖಂಡರ ಜೊತೆಗೆ ಚರ್ಚೆ ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ಕೊಡಲು ನಾನು ಬಂದಿದ್ದೇನೆ ಎಂದರು.
ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿಯಿಲ್ಲ. ಅನ್ನದಾತರ ಸಂಕಷ್ಟಕ್ಕೆ ಸ್ಪಂದಿಸುವ ಮನಸ್ಸಿಲ್ಲ. ಕೇವಲ ಬೇಜವಾಬ್ದಾರಿ ಹೇಳಿಕೆ ನೀಡೋದ್ರಲ್ಲಿ ಸಚಿವರು ಬ್ಯುಸಿ ಇದ್ದಾರೆ. ಮುಂದೆ ಎಲ್ಲದಕ್ಕೂ ಜನ ಉತ್ತರಿಸಲಿದ್ದಾರೆ ಎಂದು ಹೇಳಿದರು.
