PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಕ್ಷೇತ್ರದ ಟಿಕೆಟ್ ಒಬಿಸಿ ಸಮುದಾಯಕೆ ನೀಡಲು ಒತ್ತಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಸಮಗ್ರ > ಕ್ಷೇತ್ರದ ಟಿಕೆಟ್ ಒಬಿಸಿ ಸಮುದಾಯಕೆ ನೀಡಲು ಒತ್ತಾಯ
ಸಮಗ್ರ

ಕ್ಷೇತ್ರದ ಟಿಕೆಟ್ ಒಬಿಸಿ ಸಮುದಾಯಕೆ ನೀಡಲು ಒತ್ತಾಯ

ಪ್ರತಿನಿಧಿ
Last updated: March 24, 2024 5:25 pm
ಪ್ರತಿನಿಧಿ
Published March 24, 2024
Share
SHARE

ಪ್ರತಿನಿಧಿ ವರದಿ ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಇದುವರೆಗೂ ನಡೆದಿರುವ 13 ಚುನಾವಣೆಗಳಲ್ಲಿ 10ರಲ್ಲಿ ಒಬಿಸಿ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದು, ಈ ನಿಟ್ಟಿನಲ್ಲಿ ಒಬಿಸಿ ಸಮುದಾಯದ ತನಗೆ ಕ್ಷೇತ್ರದ ಟಿಕೆಟ್ ನೀಡುವಂತೆ ತೇಲಿ ಸಾಹು ಸಮಾಜದ ರಾಷ್ಟ್ರೀಯ ಕಾರ್ಯಾಧ್ಯಕ್ಷ ಪಿ.ಎಂ.ರಘುನಾಥ್ ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಜನಸಂಖ್ಯೆ ಆಧಾರದಲ್ಲಿ ಒಬಿಸಿ ಸಮುದಾಯಕ್ಕೆ ರಾಜ್ಯದಲ್ಲಿ 5 ಕ್ಷೇತ್ರಗಳನ್ನು ನೀಡಲು ನಿರ್ಧರಿಸಲಾಗಿತ್ತು. ಅದರಂತೆ ಪಿ.ಸಿ.ಮೋಹನ್, ಕೋಟ ಶ್ರೀನಿವಾಸ ಪೂಜಾರಿ ಸೇರಿ ಇಬ್ಬರಿಗೆ ಮಾತ್ರ ಟಿಕೆಟ್ ನೀಡಲಾಗಿದ್ದು, ಉಳಿದ 3 ಸ್ಥಾನಗಳಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರವನ್ನು ಒಬಿಸಿಗೆ ನೀಡಬೇಕೆಂದು ಕೋರಿದರು.

ಕಳೆದ 40 ವರ್ಷಗಳಿಂದ ಪಕ್ಷದ ವಿವಿಧ ಸ್ತರಗಳಲ್ಲಿ ಕಾರ್ಯನಿರ್ವಹಿಸಿ ಕ್ಷೇತ್ರದಲ್ಲಿ ಪಕ್ಷಕ್ಕೆ ಅಡಿಪಾಯ ಹಾಕಿರುವೆ. ಅಲ್ಲದೆ, ವರಿಷ್ಠರು ಸೂಚಿಸಿರುವ ಕೆಲಸಕಾರ್ಯಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿರುವೆ. ಆದ್ದರಿಂದ ಪಕ್ಷಕ್ಕೆ 4 ದಶಕ ದುಡಿದಲ್ಲಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಬೇಕೆಂಬ ಸಿದ್ದಾಂತದಡಿ ಒಬಿಸಿಗಳ ಭದ್ರಕೋಟೆ ಆಗಿರುವ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನನಗೆ ನೀಡಬೇಕೆಂದರು.

- ಜಾಹೀರಾತು -

ಜಿಲ್ಲೆಯಲ್ಲಿ ರಾಜಕಾಲುವೆ ಬೇಕಾಬಿಟ್ಟಿಯಾಗಿ ಒತ್ತುವರಿಯಾಗಿದ್ದು, ಇವುಗಳನ್ನು ತೆರವುಗೊಳಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರಿಗೆ ಎದುರಾಗಿರುವ ನೀರಿನ ಸಂಕಷ್ಟ ಜಿಲ್ಲೆಗೂ ಬಂದೊದಗುವುದು. ಅಲ್ಲದೆ, ರಾಜಕಾಲುವೆಗಳ ತೆರವಿನ ಜೊತೆಗೆ ಕೆರೆಗಳ ಪುನಶ್ಚೇತನ ಕಾರ್ಯವನ್ನು ಮಾಡಬೇಕಿದೆ. ಸಕಾಲದಲ್ಲಿ ಕಂದಾಯ ಇಲಾಖೆಯಲ್ಲಿ ರೈತರ ಕೆಲಸ ಕಾರ್ಯಗಳನ್ನು ಮಾಡಿಕೊಡಬೇಕಿದೆ. ಈ ಕುರಿತು ಅಧಿಕಾರಿಗಳಿಗೆ ಒತ್ತಾಯ ಮಾಡುವುದಾಗಿ ತಿಳಿಸಿದರು.

ಪ್ರಧಾನಿ ಮೋದಿ ಅವರ ವಿರುದ್ಧ ಮಾಜಿ ಸಂಸದ ವೀರಪ್ಪ ಮೊಯ್ಲಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಮಾನನಷ್ಟ ಮೊಕದ್ದಮೆ ಹೂಡುವ ಕುರಿತು ತಜ್ಞ ವಕೀಲರ ತಂಡದೊಂದಿಗೆ ಚರ್ಚಿಸಿ ಅವರ ಸಲಹೆ ಸೂಚನೆಯ ಮೇರೆಗೆ ಕಾನೂನು ಸಮರ ಸಾರಲಾಗುವುದು ಎಂದು ಹೇಳಿದರು

ಬಿಜೆಪಿ ಮುಖಂಡರಾದ ಲಕ್ಷ್ಮೀನಾರಾಯಣಗುಪ್ತ, ಶ್ರೀನಿವಾಸ ಬಾಬು ಇದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಸಮಗ್ರ

 ಸಾವಿರಕಂಬ ಬಸದಿಗೆ ವಿದೇಶಿಗರ ಭೇಟಿ

May 8, 2024
ಸಮಗ್ರ

ನಿಖಿಲ್ ಕುಮಾರಸ್ವಾಮಿ ಸ್ಪಂದಿಸುತ್ತಿಲ್ಲ

March 29, 2024
ಸಮಗ್ರ

ಮಾನಸಿಕ ಅಸ್ವಸ್ಥ ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಿ

May 25, 2024
ಸಮಗ್ರ

ಮೇ 16 ರಂದು ರಾಷ್ಟ್ರೀಯ ಡೆಂಗಿ ದಿನ

May 15, 2024
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?