PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ : ಎಂಎಲ್ಸಿ.., ಸಿ. ಎನ್ ಮಂಜೇಗೌಡ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ : ಎಂಎಲ್ಸಿ.., ಸಿ. ಎನ್ ಮಂಜೇಗೌಡ
ಮುಖಪುಟಮೈಸೂರು ನಗರ

ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ : ಎಂಎಲ್ಸಿ.., ಸಿ. ಎನ್ ಮಂಜೇಗೌಡ

Prathinidhi News
Last updated: November 26, 2025 4:00 pm
Prathinidhi News
Published November 26, 2025
Share
SHARE

ಮೈಸೂರು, ನವೆಂಬರ್‌ 26, 2025 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಇಂದು (ನವೆಂಬರ್ 26) ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ 09 ಗಂಟೆಗೆ ಪುರಭವನ ಮುಂಭಾಗದಲ್ಲಿರುವ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವ ಮೂಲಕ ಜಾಥಾಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಜಾಥಾದಲ್ಲಿ  ನಂತರ ಜಾಥಾವು ಕಲಾಮಂದಿರ ತಲುಪಿತು.

ಸಂವಿಧಾನ ದಿನಾಚರಣೆಯ ಮುಖ್ಯ ವೇದಿಕೆ ಕಾರ್ಯಕ್ರಮವನ್ನು ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂವಿಧಾನದ ಮಹತ್ವ, ಡಾ. ಅಂಬೇಡ್ಕರ್ ಅವರ ಕೊಡುಗೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಗಣ್ಯರು ಮಾತನಾಡಿದರು.ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್ ಮಂಜೇಗೌಡ ಅವರು ಹೇಳಿದರು.

ಇಂದು ನಾನು ವಿಧಾನ ಪರಿಷತ್ ಸದಸ್ಯ ನಾಗಿ ಅಧಿಕಾರಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದೇನೆ ಎಂದರೆ ಅದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯವಾಗಿದೆ. ಹಾಗಾಗಿ ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ. ಅದರಿಂದಲೇ ಎಲ್ಲರ ಮನದಲ್ಲೂ ಅಂಬೇಡ್ಕರ್ ನೆಲೆಸಿದ್ದಾರೆ ಎಂದು ಹೇಳಿದರು.

- ಜಾಹೀರಾತು -

ಸಂವಿಧಾನ ರಚನೆ ಮಾಡದೆ ಇದ್ದಿದ್ದರೆ ನಾವು ಯಾರು ಬದುಕಲು ಸಾಧ್ಯವಾಗುತ್ತಿರಲಿಲ್ಲ. ಮಹಿಳೆಯರು, ಹಿಂದುಳಿದ ಸಮುದಾಯದವರು ಯಾರು ಸಹ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿರಲಿಲ್ಲ, ಹೆಣ್ಣು ಮಕ್ಕಳು ಸ್ವತಂತ್ರವಾಗಿ ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೆ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವೇ ಕಾರಣ ಎಂದು ತಿಳಿಸಿದರು.

ಈ ದೇಶದಲ್ಲಿ ಅಂಬೇಡ್ಕರ್ ಅವರು ಓದಿರುವ ಪದವಿಗಳನ್ನು ಪರಿಗಣಿಸಿ ಅವರಿಗೆ ಸಂವಿಧಾನ ರಚಿಸುವ ಜವಾಬ್ದಾರಿ ನೀಡಲಾಯಿತು. ಯಾರೂ ಹೆಚ್ಚು ಶಿಕ್ಷಣ ಪಡೆಯುತ್ತಾರೋ ಅವರೇ ನಾಯಕರಾಗುತ್ತಾರೆ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ, ಇಂದು ಇಡೀ ಪ್ರಪಂಚದಲ್ಲಿ ಅತಿ ಹೆಚ್ಚು ಪ್ರತಿಮೆ ಇರುವುದು ಡಾ: ಬಿ.ಆರ್ ಅಂಬೇಡ್ಕರ್ ಅವರದ್ದು ಮಾತ್ರ. ಹಾಗಾಗಿ ಆ ಮಹಾನಾಯಕ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಹಾಕಬೇಕು ಅದೇ ನಾವು ಅವರಿಗೆ ಕೊಡುವ ಗೌರವ ಎಂದು ಹೇಳಿದರು.

ಜಾಥಾ ಗೆ ಚಾಲನೆ ಇಂದು ಪುರಭವನ ಮುಂಭಾಗ ಇರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್.ಶ್ರೀವತ್ಸ, ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್. ಮಂಜೇಗೌಡ, ಅವರು ಚಾಲನೆ ನೀಡಿದರು.

ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ . ಎನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ. ಬಿ, ಅವರು ಸೇರಿದಂತೆ ಮತ್ತಿತರರು ಹಾಜರಿದ್ದರು.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಮುಖಪುಟಮೈಸೂರು ನಗರ

ಮೈಸೂರು ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ದಿಢೀರ್ ಭೇಟಿ: ಮೊಬೈಲ್, ಸಿಮ್ ಜಪ್ತಿ!

December 18, 2025
ಮುಖಪುಟಮೈಸೂರು ನಗರರಾಜಕೀಯ

ಸಿದ್ದರಾಮಯ್ಯ ಪುತ್ರನ ವಿರುದ್ಧ ಸಿಡಿದೆದ್ದ ತನ್ವೀರ್ ಸೇಠ್: ರಾಜ್ಯಾದ್ಯಂತ ಯತೀಂದ್ರ ಹಸ್ತಕ್ಷೇಪದ ಆರೋಪ!

February 7, 2026
ಮುಖಪುಟಮೈಸೂರು ನಗರ

ದೆಹಲಿ ಸ್ಪೋಟ ಹಿನ್ನೆಲೆ – ಮೈಸೂರಿನಲ್ಲಿ ಹೈ ಅಲರ್ಟ್, 10 ವಿಶೇಷ ಚೆಕ್‌ಪೋಸ್ಟ್‌ ., ಭದ್ರತೆಗೆ ಹೆಚ್ಚಿನ ಆದ್ಯತೆ.!

November 12, 2025
ನವದೆಹಲಿಮುಖಪುಟರಾಜಕೀಯ

ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸಭೆ: ಸಿಎಂ ಸಿದ್ದರಾಮಯ್ಯ ಭಾಗಿ

December 27, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?