ಕೋಲಾರ: ವಾಲ್ಮಿಕಿ ಅಭಿವೃದ್ದಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ಮೃತ ಪಟ್ಟ ಕುಟುಂಬಕ್ಕೆ ೧ ಕೋಟಿ ಪರಿಹಾರ ವಿತರಣೆ ಮಾಡಿ ಭ್ರಷ್ಟಚಾರಕ್ಕೆ ಕುಮ್ಮಕ್ಕು ನೀಡಿರುವ ರಾಜಕೀಯ ವ್ಯಕ್ತಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡುವಂತೆ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಪತ್ರಿಕಾ ಹೇಳಿಕೆ ಮುಖಾಂತರ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಬಂಗಾರಪೇಟೆ ನಗರದ ಡಾ.ಬಿ.ಆರ್ ಆಂಬೇಡ್ಕರ್ ಪ್ರತಿಮೆ ಮುಂದೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ೫ ಗ್ಯಾರಂಟಿಗಳಿಗೆ ಹಣ ಒದಗಿಸಲು ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಬಡವರಿಗೆ ಸೇರಬೇಕಾದ ವಿವಿಧ ಅನುದಾನಗಳನ್ನು ನಕಲಿ ದಾಖಲೆಗಳ ಸೃಷ್ಟಿ ಮಾಡಿ ಲೂಟಿ ಮಾಡುತ್ತಿರುವುದಕ್ಕೆ ಪ್ರಾಮಾಣಿಕ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯಯೇ ಉದಾಹರಣೆಯಾಗಿದೆ. ರಾಜ್ಯದಲ್ಲಿ ಕಾನೂನು ಹದಗೆಟ್ಟಿದೆ ಎಂದು ಸರ್ಕಾರ ಹಾಗೂ ವಾಲ್ಮಿಕಿ ಅಭಿವೃದ್ದಿ ನಿಗಮದ ಸಚಿವ ನಾಗೇಂದ್ರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಸಮಾಜದಲ್ಲಿ ಸ್ವಾಭಿಮಾನದಿಂದ ಬದುಕು ರೂಪಿಸಿಕೊಳ್ಳುವ ಬಡವರ ವಿರುದ್ದ ಚಿಕ್ಕ ಆರೋಪ ಇದ್ದರೆ ಕಾನೂನಿ ಬಿಗಿ ಹಿಡಿತ ಮಾಡುವ ಗೃಹ ಮಂತ್ರಿಗಳೇ ಸಚಿವರ ಹೆಸರು ಬರೆದು ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯ ಪ್ರಾಮಾಣಿಕತೆಗೆ ಗೌರವ ಸಿಗಬೇಕಾದರೆ ಮೃತ ಕುಟುಂಬಕ್ಕೆ ನೆಮ್ಮದಿ ಸಿಗಬೇಕಾದರೆ ಪ್ರಕರಣವನ್ನು ಗಂಬೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದರು.
ರಾಜ್ಯ ಮುಖಂಡ ಮರಗಲ್ ಶ್ರೀನಿವಾಸ್ ಮಾತನಾಡಿ, ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರಿಂದ ಸಮಗ್ರ ತನಿಖೆ ನಡೆಸಿ ಅಪರಾಧಿಗಳಿಗೆ ಶಿಕ್ಷೆ ವಿದಿಸಿ ಮೃತಪಟ್ಟ ಅಧಿಕಾರಿಗಳ ಆತ್ಮಕ್ಕೆ ಶಾಂತಿ ಸಿಗುವ ಜತೆಗೆ ಭ್ರಷ್ಟಾ ಚಾರಕ್ಕೆ ಕೊನೆ ಮೊಳೆ ಹೊಡೆಯುವ ಮೂಲಕ ಕಾನೂನಿನ ಸುವ್ಯವಸ್ಥೆ ಕಾಪಾಡಬೇಕೆಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಕದರಿನತ್ತ ಅಪ್ಪೋಜಿರಾವ್, ಮುನಿಕೃಷ್ಣ, ಶೈಲಜ, ರಾಧಾ, ನಾಗರತ್ನ, ಚೌಡಮ್ಮ, ಸುದಾ, ಮಂತಾದವರಿದ್ದರು.

