PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಹೆಚ್.ಡಿ. ಕೋಟೆ: ಹುಲಿ ದಾಳಿಗೆ ಹಸು ಬಲಿ; ಕೆಂಪೇಗೌಡನಹುಂಡಿ ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಹೆಚ್.ಡಿ. ಕೋಟೆ: ಹುಲಿ ದಾಳಿಗೆ ಹಸು ಬಲಿ; ಕೆಂಪೇಗೌಡನಹುಂಡಿ ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ
ಮುಖಪುಟಮೈಸೂರು ಗ್ರಾಮಾಂತರ

ಹೆಚ್.ಡಿ. ಕೋಟೆ: ಹುಲಿ ದಾಳಿಗೆ ಹಸು ಬಲಿ; ಕೆಂಪೇಗೌಡನಹುಂಡಿ ಗ್ರಾಮಸ್ಥರಲ್ಲಿ ಮನೆಮಾಡಿದ ಆತಂಕ

Prathinidhi News
Last updated: February 17, 2026 4:13 pm
Prathinidhi News
Published February 17, 2026
Share
SHARE

ಹೆಚ್.ಡಿ. ಕೋಟೆ, ಫೆಬ್ರವರಿ 17, 2026 : ಮೈಸೂರು ಜಿಲ್ಲೆಯಾದ್ಯಂತ ಕಾಡುಪ್ರಾಣಿಗಳ ಹಾವಳಿ ದಿನೇ ದಿನೇ ಹೆಚ್ಚುತ್ತಿದ್ದು, ಇದೀಗ ಹುಲಿ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ಎಚ್.ಡಿ. ಕೋಟೆ ತಾಲ್ಲೂಕಿನ ಕೆಂಪೇಗೌಡನಹುಂಡಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ರೈತ ಅಣ್ಣಯ್ಯ ಅವರಿಗೆ ಸೇರಿದ ಹಸು ಇದಾಗಿದ್ದು, ಜೋಳದ ಹೊಲದಲ್ಲಿ ಮೇಯುತ್ತಿದ್ದ ವೇಳೆ ಹೊಂಚು ಹಾಕಿದ್ದ ಹುಲಿ ಏಕಾಏಕಿ ದಾಳಿ ನಡೆಸಿದೆ.

ದಾಳಿಯ ತೀವ್ರತೆಗೆ ಹಸು ಸ್ಥಳದಲ್ಲೇ ಮೃತಪಟ್ಟಿದ್ದು, ಹುಲಿಯು ಹಸುವಿನ ದೇಹದ ಸ್ವಲ್ಪ ಭಾಗವನ್ನು ಭಕ್ಷಿಸಿರುವುದು ಕಂಡುಬಂದಿದೆ. ಘಟನೆಯಿಂದ ಗ್ರಾಮಸ್ಥರು ತೀವ್ರ ಆತಂಕಕ್ಕೊಳಗಾಗಿದ್ದು, ಹೊಲಗದ್ದೆಗಳಿಗೆ ತೆರಳಲು ಭಯಭೀತರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಷ್ಟಪಟ್ಟು ಸಾಕಿದ್ದ ಹಸುವನ್ನು ಕಳೆದುಕೊಂಡು ಕಂಗಾಲಾಗಿರುವ ರೈತ ಅಣ್ಣಯ್ಯ ಅವರಿಗೆ ಕೂಡಲೇ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಲ್ಲದೆ, ಈ ಭಾಗದಲ್ಲಿ ಹುಲಿ ಸಂಚಾರ ದಟ್ಟವಾಗಿದ್ದು, ಅನಾಹುತ ಸಂಭವಿಸುವ ಮುನ್ನ ಅರಣ್ಯ ಇಲಾಖೆ ಕೂಡಲೇ ಕಾರ್ಯಾಚರಣೆ ನಡೆಸಿ ಹುಲಿಯನ್ನು ಸೆರೆಹಿಡಿಯಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು: ಚಪ್ಪಲಿ ಹೊರಗೆ ಬಿಡಿ ಎಂದಿದ್ದಕ್ಕೆ ವೈದ್ಯರ ಮೇಲೆ ಹಲ್ಲೆ; ಸಿಸಿಟಿವಿಯಲ್ಲಿ ಸೆರೆಯಾಯ್ತು ಅಸಭ್ಯ ವರ್ತನೆ

December 19, 2025
ಕ್ರೈಂ ಸುದ್ದಿಗಳುಮುಖಪುಟಮೈಸೂರು ನಗರ

ಮೈಸೂರು ಜೈಲಲ್ಲೂ ಕೈದಿಗಳ ಐಷಾರಾಮಿ ಜೀವನ..? ಕಾರಾಗೃಹದಲ್ಲಿ 9 ಮೊಬೈಲ್, 11 ಸಿಮ್ ಕಾರ್ಡ್, 2 ಚಾರ್ಜರ್ ಪತ್ತೆ.!

December 18, 2025
ನವದೆಹಲಿಬೆಂಗಳೂರುಮುಖಪುಟ

ದೆಹಲಿ ಗಣರಾಜ್ಯೋತ್ಸವ : ಕರ್ನಾಟಕದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ – ಭಾರತ ಪರ್ವದಲ್ಲಿ ಪ್ರದರ್ಶನ

January 23, 2026
ಬೆಂಗಳೂರುಮುಖಪುಟ

KSRTC ವತಿಯಿಂದ ಪ್ರಯಾಣಿಕರಿಗೆ ಗಿಫ್ಟ್‌ ; ಫ್ಲೈ ಬಸ್ ನಲ್ಲಿ ನಂದಿನಿ ಸ್ನ್ಯಾಕ್ ಕಿಟ್ ವಿತರಣೆ.!

November 12, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?