ಬೆಂಗಳೂರು: ಗುತ್ತಿಗೆದಾರರ ಶೇಕಡಾ 65ರಿಂದ 70ರಷ್ಟು ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ. ತನಿಖೆ ಪೆಂಡಿಂಗ್ ಇದ್ದರೂ ಬಿಲ್ ಬಿಡುಗಡೆಗೆ ಆದೇಶ ಮಾಡಿದ್ದೇವೆ. ಗುತ್ತಿಗೆದಾರರಿಗೆ ಸಹಾಯ ಆಗಬೇಕು ಅಂತಾ ಆದೇಶ ಮಾಡಿದ್ದೇವೆ. ಸೀನಿಯಾರಿಟಿ ಮೇಲೆ ಬಿಲ್ ಬಿಡುಗಡೆ ಮಾಡಿದ್ದೇವೆ. ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಗಾಬರಿಪಡುವ ಅಗತ್ಯವಿಲ್ಲ. ಗುತ್ತಿಗೆದಾರರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
