ನವದೆಹಲಿ, ನವೆಂಬರ್ 10, 2025 : ನವದೆಹಲಿಯ ಕೆಂಪುಕೋಟೆ ಮೆಟ್ರೋ ನಿಲ್ದಾಣದ ಗೇಟ್ ಬಳಿ ಕಾರು ಸ್ಫೋಟವಾಗಿದೆ. ಈ ಘಟನೆಯಿಂದ ಹತ್ತಿರದ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಇದೀಗ ಬಂದ ಮಾಹಿತಿ ಪ್ರಕಾರ ದುರಂತದಲ್ಲಿ 9 ಜನ ಸಾವನ್ನಪ್ಪಿದ್ದು, ಸ್ಫೋಟದ ರಭಸಕ್ಕೆ ಮೃತದೇಹಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.
ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಅಧಿಕಾರಿಗಳು ಸಹ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆ ಕಾರಣ ಏನೆಂದು ಪರಿಶೀಲನೆ ನಡೆಸಿದ್ದಾರೆ. ಇನ್ನು ಈ ಘಟನೆ ಸಂಬಂಧ ದೆಹಲಿ ಮಾತ್ರವಲ್ಲದೇ ಮುಂಬೈನಲ್ಲೂ ಹೈಅಲರ್ಟ್ ಘೋಷಿಸಲಾಗಿದೆ.
ಈ ಬಗ್ಗೆ ಲೋಕ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ ಅಧೀಕ್ಷಕ ಪ್ರತಿಕ್ರಿಯಿಸಿದ್ದು, ಹದಿನೈದು ಜನರನ್ನು ಲೋಕ ನಾಯಕ ಆಸ್ಪತ್ರೆಗೆ ಕರೆತಂದಿದ್ದು, ಈ ಪೈಕಿ ಎಂಟು ಜನ ಆಸ್ಪತ್ರೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ. ಮೂವರು ಸ್ಥಿತಿ ಗಂಭೀರವಾಗಿದ್ದು, ಒಬ್ಬರ ಸ್ಥಿತಿ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.
