PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು: ಫುಟ್‌ಪಾತ್ ಒತ್ತುವರಿ ತೆರವಿಗೆ ಆಗ್ರಹ; ಸುಪ್ರೀಂಕೋರ್ಟ್ ಮಾರ್ಗಸೂಚಿ ಅನ್ವಯ ಕ್ರಮಕ್ಕೆ ಒತ್ತಾಯ
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು: ಫುಟ್‌ಪಾತ್ ಒತ್ತುವರಿ ತೆರವಿಗೆ ಆಗ್ರಹ; ಸುಪ್ರೀಂಕೋರ್ಟ್ ಮಾರ್ಗಸೂಚಿ ಅನ್ವಯ ಕ್ರಮಕ್ಕೆ ಒತ್ತಾಯ
ಮುಖಪುಟಮೈಸೂರು ನಗರ

ಮೈಸೂರು: ಫುಟ್‌ಪಾತ್ ಒತ್ತುವರಿ ತೆರವಿಗೆ ಆಗ್ರಹ; ಸುಪ್ರೀಂಕೋರ್ಟ್ ಮಾರ್ಗಸೂಚಿ ಅನ್ವಯ ಕ್ರಮಕ್ಕೆ ಒತ್ತಾಯ

Prathinidhi News
Last updated: July 3, 2026 4:09 pm
Prathinidhi News
Published July 3, 2026
Share
SHARE

ಮೈಸೂರು, ಜುಲೈ 3, 2026 : ಸುಪ್ರೀಂಕೋರ್ಟ್‌ನ ಇತ್ತೀಚಿನ ಮಾರ್ಗಸೂಚಿಗಳ ಅನ್ವಯ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿರುವ ಮಾದರಿಯಲ್ಲೇ ಮೈಸೂರಿನಲ್ಲೂ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಸೂಚನೆಯಂತೆ ಬೆಂಗಳೂರಿನಲ್ಲಿ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಇದಕ್ಕೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ಆದರೆ ಮೈಸೂರಿನಲ್ಲಿ ಇನ್ನೂ ಅಧಿಕಾರಿಗಳು ಫುಟ್‌ಪಾತ್ ಒತ್ತುವರಿ ತೆರವಿಗೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ನಗರದ ಸಯ್ಯಾಜಿರಾವ್ ರಸ್ತೆ, ಗಾಂಧೀ ವೃತ್ತ ಸೇರಿದಂತೆ ಹೃದಯಭಾಗದ ಹಲವು ಪ್ರದೇಶಗಳಲ್ಲಿ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿಕೊಂಡು ವ್ಯಾಪಾರ-ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ, ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೂ ಇದು ಕಿರಿಕಿರಿಯಾಗಿದೆ ಎಂದು ಹೇಳಲಾಗಿದೆ.

- ಜಾಹೀರಾತು -

ಕೆಲ ಬೇನಾಮಿ ವ್ಯಕ್ತಿಗಳು ಫುಟ್‌ಪಾತ್ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿರುವುದಲ್ಲದೆ, ಕೆಲವು ಕಡೆಗಳಲ್ಲಿ ಪೊಲೀಸ್ ಸಿಬ್ಬಂದಿಯವರೇ ವಾರದ ಹಣ (ಹಫ್ತಾ) ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೂ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕೂಡಲೇ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಿ, ಪಾದಚಾರಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಕೀಲ ಗೋಕುಲ್ ಗೋವರ್ಧನ್ ಹಾಗೂ ಬಿಜೆಪಿ ಮುಖಂಡ ಮೋಹನ್ ಅವರು ಪ್ರತಿನಿಧಿ ನ್ಯೂಸ್‌ಗೆ ನೀಡಿದ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ಜಿಲ್ಲೆಮುಖಪುಟಸನ್ನಿಧಾನ

ಕೊಪ್ಪಳ : ಹುಲಿಗೆಮ್ಮ ದೇಗುಲದಲ್ಲಿ 1.09ಕೋಟಿ ಕಾಣಿಕೆ ಸಂಗ್ರಹ..! ಹುಂಡಿಯಲ್ಲಿತ್ತು ಅಪಾರ ಆಭರಣ..

January 9, 2026
ಮುಖಪುಟ

ಸಾಲುಮರದ ತಿಮ್ಮಕ್ಕ ನಿಧನ ; ಸಂತಾಪ ಸಲ್ಲಿಸಿದ ಪರಿಸರ ಪ್ರೇಮಿಗಳು

November 14, 2025
ಬೆಂಗಳೂರುಮುಖಪುಟರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಬಾಂಧವರ ಸಾಮೂಹಿಕ ನಮಾಜ್ ; ಸಚಿವ ಪ್ರಿಯಾಂಕ್‌ ಖರ್ಗೆ ಏನಂದ್ರು.?

November 10, 2025
ಮುಖಪುಟಮೈಸೂರು ನಗರರಾಜಕೀಯ

ಚಾಮುಂಡೇಶ್ವರಿ ಶಾಸಕ ಜಿ.ಟಿ. ದೇವೇಗೌಡರಿಗೆ 75ರ ಸಂಭ್ರಮ : ಶುಭಾಶಯಗಳ ಮಹಾಪೂರ

November 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?