ಮೈಸೂರು: ಕರ್ನಾಟಕ ಬಂದ್ ಹಿನ್ನೆಲೆ ಮೈಸೂರು ಭದ್ರತೆಗೆ 2000 ಪೊಲೀಸರ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಬಲವಂತವಾಗಿ ಬಂದ್ ಮಾಡಲು ಅವಕಾಶವಿಲ್ಲ. ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಸಮಾಜಘಾತ ಕೃತ್ಯಗಳನ್ನ ಎಸೆಗುವ 35 ಜನರನ್ನ ವಶಕ್ಕೆ ಪಡೆಯಲಾಗಿದೆ. ಈಗಾಗಲೇ ಸಾಕಷ್ಟು ಸಂಘಟನೆಗಳು ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ. ಉದ್ದೇಶ ಪೂರ್ವಕವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲು ಅವಕಾಶ ಇಲ್ಲ. ನಗರ ವ್ಯಾಪ್ತಿಯಲ್ಲಿ ಸಕಲ ಬಂದೋಬಸ್ತ್ ಮಾಡಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕಚೇರಿಗಳ ಬಳಿ ಭದ್ರತೆ ನೀಡಲಾಗಿದೆ. ರೈಲ್ವೆ ನಿಲ್ದಾಣದ ಬಳಿಯೂ ಪೊಲೀಸ್ ನಿಯೋಜನೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿಕೆ ನೀಡಿದ್ದಾರೆ.
