ಬೆಂಗಳೂರು: ಮೇಕೆದಾಟು ಯೋಜನೆ ರಾಜ್ಯಕ್ಕೆ ಅತ್ಯಗತ್ಯ. ಈ ಬಗ್ಗೆ ರಾಜ್ಯದ ಎಲ್ಲ ಪಕ್ಷಗಳೂ ಅಚಲ ನಿರ್ಧಾರವನ್ನು ಪ್ರಣಾಳಿಕೆಯಲ್ಲಿ ಪ್ರಕಟಿಸಲಿ. ಕಾಂಗ್ರೆಸ್, ಬಿಜೆಪಿ ಸೇರಿ ಎಲ್ಲ ಪಕ್ಷಗಳೂ ಈ ವಿಚಾರದಲ್ಲಿ ಒಟ್ಟಿಗೆ ಹೆಜ್ಜೆಯಿಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ಡಿ ದೇವೇಗೌಡ ಮನವಿ ಮಾಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೇಕೆದಾಟು ಯೋಜನೆ ವಿರೋಧಿಸಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ನಿಲುವು ಖಂಡನೀಯ. ಈ ಯೋಜನೆ ಅನುಷ್ಠಾನ ಸಂಬಂಧ ಜೆಡಿಎಸ್ ತನ್ನ ಪ್ರಣಾಳಿಕೆಯಲ್ಲಿ ಸೇರಿಸಲಿದೆ. ಕಾಂಗ್ರೆಸ್, ಬಿಜೆಪಿ ಕೂಡ ಬದ್ಧತೆ ಪ್ರದರ್ಶಿಸಲಿ. ಪ್ರಧಾನಿಯವರೂ ಮಧ್ಯಸ್ಥಿಕೆ ವಹಿಸಲಿ,” ಎಂದು ಆಗ್ರಹಿಸಿದರು.
![](https://www.prathinidhi.net/wp-content/uploads/2024/03/hddf.jpg)
Leave a comment