PrathinidhiPrathinidhiPrathinidhi
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Reading: ಮೈಸೂರು ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ದಿಢೀರ್ ಭೇಟಿ: ಮೊಬೈಲ್, ಸಿಮ್ ಜಪ್ತಿ!
Share
Notification Show More
Font ResizerAa
PrathinidhiPrathinidhi
Font ResizerAa
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Search
  • ಮುಖಪುಟ
  • ಚುನಾವಣೆ
  • e-ರೇಡಿಯೋ
  • ಟಿ ವಿ
  • ಜಿಲ್ಲೆ
    • ಮೈಸೂರು ನಗರ
    • ಮೈಸೂರು ಗ್ರಾಮಾಂತರ
    • ಮಂಡ್ಯ
    • ಹಾಸನ
    • ಚಾಮರಾಜನಗರ
    • ಕೊಡಗು
  • ಇ-ಪೇಪರ್
  • ಎಡಿಟ್‌ ಪೇಜ್‌
  • ಕ್ರೀಡೆ
  • ಸಿನಿಮಾ
  • ಅಂಕಣ
  • Survey
Follow US
Prathinidhi > ಸುದ್ದಿ > ಮುಖಪುಟ > ಮೈಸೂರು ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ದಿಢೀರ್ ಭೇಟಿ: ಮೊಬೈಲ್, ಸಿಮ್ ಜಪ್ತಿ!
ಮುಖಪುಟಮೈಸೂರು ನಗರ

ಮೈಸೂರು ಕೇಂದ್ರ ಕಾರಾಗೃಹಕ್ಕೆ ಡಿಜಿಪಿ ಅಲೋಕ್ ಕುಮಾರ್ ದಿಢೀರ್ ಭೇಟಿ: ಮೊಬೈಲ್, ಸಿಮ್ ಜಪ್ತಿ!

Prathinidhi News
Last updated: December 18, 2025 11:30 am
Prathinidhi News
Published December 18, 2025
Share
SHARE

ಮೈಸೂರು, ಡಿಸೆಂಬರ್‌ 18, 2025 : ಕಾರಾಗೃಹ ಇಲಾಖೆಯ ಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಅಲೋಕ್ ಕುಮಾರ್ ಅವರು ಇಂದು ಮೈಸೂರಿನ ಅಶೋಕ ರಸ್ತೆಯಲ್ಲಿರುವ ಕೇಂದ್ರ ಕಾರಾಗೃಹಕ್ಕೆ ಮೊದಲ ಬಾರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಸುಮಾರು 2 ಗಂಟೆಗಳ ಕಾಲ ಜೈಲಿನ ಪ್ರತಿಯೊಂದು ಬ್ಯಾರಕ್ ಹಾಗೂ ಆವರಣವನ್ನು ಜಾಲಾಡಿದ ಡಿಜಿಪಿ, ಜೈಲಿನ ಭದ್ರತೆ ಮತ್ತು ಕೈದಿಗಳ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ವಹಿಸಿದರು. ಡಿಜಿಪಿ ಅವರ ಅಧಿಕೃತ ಭೇಟಿಗೂ ಮುನ್ನವೇ ಜೈಲಿನಲ್ಲಿ ನಡೆಸಲಾದ ಮಿಂಚಿನ ಕಾರ್ಯಾಚರಣೆಯಲ್ಲಿ ಭಾರಿ ಪ್ರಮಾಣದ ನಿಷೇಧಿತ ವಸ್ತುಗಳು ಪತ್ತೆಯಾಗಿವೆ. ತಪಾಸಣೆ ವೇಳೆ 9 ಮೊಬೈಲ್ ಫೋನ್‌ಗಳು ಹಾಗೂ 11 ಸಿಮ್ ಕಾರ್ಡ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಜೈಲಿನ ಭದ್ರತಾ ಲೋಪದ ಬಗ್ಗೆ ಆತಂಕ ಮೂಡಿಸಿದೆ.

ಸುಧಾರಣೆಗೆ ಕಟ್ಟುನಿಟ್ಟಿನ ಕ್ರಮಗಳು

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅಲೋಕ್ ಕುಮಾರ್, ಜೈಲಿನ ವ್ಯವಸ್ಥಿತ ನಿರ್ವಹಣೆಗೆ ಈ ಕೆಳಗಿನ ಕ್ರಮಗಳನ್ನು ಪ್ರಕಟಿಸಿದರು:

- ಜಾಹೀರಾತು -
  • AI ಕ್ಯಾಮರಾ ಅಳವಡಿಕೆ: ಮೈಸೂರು ಜೈಲಿನಲ್ಲಿ ಇನ್ಮುಂದೆ ಕೃತಕ ಬುದ್ಧಿಮತ್ತೆ (AI) ಆಧಾರಿತ ಅತ್ಯಾಧುನಿಕ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಇದರಿಂದ ಕೈದಿಗಳ ಮೇಲೆ ನಿರಂತರ ಕಣ್ಗಾವಲು ಇಡಲು ಸಾಧ್ಯವಾಗಲಿದೆ.

  • ಗಾಂಜಾ ಹಾವಳಿಗೆ ಬ್ರೇಕ್: ಜೈಲಿನ ಹೊರಗಿನ ಪ್ರದೇಶಗಳಿಂದ ಜೈಲಿನ ಆವರಣದೊಳಗೆ ಗಾಂಜಾ ಪೊಟ್ಟಣಗಳನ್ನು ಎಸೆಯುವ ಪ್ರಕರಣಗಳು ವರದಿಯಾಗುತ್ತಿವೆ. ಇದನ್ನು ತಡೆಯಲು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸಲಾಗುವುದು.

  • ಜಾಮರ್ ಮೇಲ್ದರ್ಜೆಗೆ: ಜೈಲಿನಲ್ಲಿರುವ ಮೊಬೈಲ್ ಸಿಗ್ನಲ್ ಜಾಮರ್‌ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು TCL ಕಂಪನಿಯೊಂದಿಗೆ ಮಾತುಕತೆ ನಡೆಸಲಾಗುವುದು. ಜಾಮರ್ ಎಫೆಕ್ಟ್ ಹೆಚ್ಚಿಸುವ ಮೂಲಕ ಜೈಲಿನೊಳಗೆ ಯಾವುದೇ ಅಕ್ರಮ ಸಂವಹನ ನಡೆಯದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಜೈಲಿನ ಶಿಸ್ತು ಮತ್ತು ಭದ್ರತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದು ಈ ಸಂದರ್ಭದಲ್ಲಿ ಡಿಜಿಪಿ ಎಚ್ಚರಿಕೆ ನೀಡಿದ್ದಾರೆ.

Share This Article
Facebook Whatsapp Whatsapp Email
What do you think?
Love0
Sad0
Happy0
Sleepy0
Angry0
Dead0
Wink0
Leave a Comment

Leave a Reply Cancel reply

Your email address will not be published. Required fields are marked *

PODCAST

Prathinidhi Facebook

You Might Also Like

ನಂಜನಗೂಡುಮುಖಪುಟ

ನಂಜನಗೂಡು ಶ್ರೀಕಂಠೇಶ್ವರ ಸ್ವಾಮಿಯ ದೊಡ್ಡ ಜಾತ್ರೆಗೆ ಸಕಲ ಸಿದ್ಧತೆ: ಶಾಸಕ ದರ್ಶನ್ ಧ್ರುವನಾರಾಯಣ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

February 10, 2026
ಚಾಮರಾಜನಗರಜಿಲ್ಲೆಮುಖಪುಟರಾಜಕೀಯ

ನವೆಂಬರ್ ಕ್ರಾಂತಿಯೂ ಇಲ್ಲ, ಬ್ರಾಂತಿನೂ ಇಲ್ಲ ; ವಿರೋಧಿಗಳಿಗೆ ಚಾ.ನಗರದಲ್ಲಿ ಟಾಂಗ್‌ ಕೊಟ್ಟ ಸಿಎಂ ಸಿದ್ದರಾಮಯ್ಯ

November 20, 2025
ಬೆಂಗಳೂರುಮುಖಪುಟ

ಬೆಂಗಳೂರು : ಮದುವೆಯಾಗಿ ತಿಂಗಳು ಕಳೆಯುವುದರೊಳಗೆ ನವವಿವಾಹಿತೆ ಸಾವು! ಅಳಿಯನೇ ಕೊಲೆ ಮಾಡಿದ್ದಾನೆಂದು ಆರೋಪಿಸಿದ ಪೋಷಕರು

December 25, 2025
ಮುಖಪುಟಮೈಸೂರು ನಗರಸಿನಿಮಾ

ಮೈಸೂರು ಮೃಗಾಲಯದಲ್ಲಿ ‘ತಾಯಮ್ಮ’ ಹುಲಿ ಸಾವು: ಮೃಗಾಲಯದ ಸಿಬ್ಬಂದಿ ಕಂಬನಿ

December 25, 2025
prathinidhi_logo_white
ವೃತ್ತಿಪರರೇ ಸೇರಿ ಕಟ್ಟಿರುವ ಪತ್ರಿಕೆ ಪ್ರತಿನಿಧಿ. ಎರಡು ದಶಕಕ್ಕೂ ಹೆಚ್ಚು ಕಾಲ ಪತ್ರಿಕಾ ವೃತ್ತಿಯನ್ನು ಮಾಡಿದ ಅನುಭವದೊಂದಿಗೆ ಪತ್ರಿಕೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಪಕ್ಷಪಾತವಿಲ್ಲದ, ಯಾವುದೇ ಲೇಪನವನ್ನೂ ಅಂಟಿಸಿಕೊಳ್ಳದೆ ಗುಣಮಟ್ಟದ ಸುದ್ದಿಗಳಿಗೆ ಆದ್ಯತೆ ನೀಡುತ್ತಿದ್ದೇವೆ. ನಮಗೆ ಎಲ್ಲರೂ ಸಮಾನರು, ಯಾರ ಬಗ್ಗೆಯೂ ನಮ್ಮದೇ ಆದ ಅಭಿಪ್ರಾಯವಿಲ್ಲ. ತಪ್ಪು ಮಾಡುವ ಎಲ್ಲರನ್ನೂ ಟೀಕಿಸುತ್ತೇವೆ. ಒಳ್ಳೆಯದನ್ನು ಗೌರವಿಸುತ್ತೇವೆ. ಓದುಗರಿಗೆ ಅನ್ಯಾಯವಾಗದಂತೆ ಜವಾಬ್ದಾರಿಯಿಂದ ಸುದ್ದಿಗಳನ್ನು ಕೊಡುವುದಷ್ಟೇ ನಮ್ಮ ಆದ್ಯತೆ. ಇದೇ ಮನಸ್ಥಿತಿಯೊಂದಿಗೆ ಈಗ ಡಿಜಿಟಲ್‌ ವೇದಿಕೆಗೆ ಕಾಲಿಟ್ಟಿದ್ದೇವೆ. ಯೂಟ್ಯೂಬ್‌, ವೆಬ್ ಸೈಟ್‌, ಮೊಬೈಲ್‌ ಆಪ್‌ ಮತ್ತು ಇ- ರೆಡಿಯೋ ಮೂಲಕ ಸುದ್ದಿಗಳನ್ನು ಬಿತ್ತರಿಸುವ ಉದ್ದೇಶ ಹೊಂದಿದ್ದೇವೆ. ಓದುಗರ ಸಹಕಾರ ಬೇಡುತ್ತಾ ಮುಂದಡಿ ಇಡುತ್ತೇವೆ.
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
  • ನಮ್ಮ ಬಗ್ಗೆ
  • ನವಮಾಧ್ಯಮ ಪ್ರೈವೆಟ್‌ ಲಿ.
  • Privacy Policy
  • Terms And Conditions
Facebook Twitter Youtube Whatsapp
© 2022 Navamadhyama Private Limited. All Rights Reserved. Designed by Codeflurry Technologies
Welcome Back!

Sign in to your account

Username or Email Address
Password

Lost your password?